ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ 1st ODI: ಏಕದಿನ ಕ್ರಿಕೆಟ್‌ಗೆ ಅರ್ಶ್‌ದೀಪ್ ಪದಾರ್ಪಣೆ?; ಸಂಭಾವ್ಯ ಆಡುವ ಬಳಗ

IND vs NZ 1st ODI: Arshdeep Singh To Make ODI Debut Against Kiwis?; Prediction Playing 11

ಮೂರು ಪಂದ್ಯಗಳ ಟಿ20 ಸರಣಿಯನ್ನು ಆತಿಥೇಯ ನ್ಯೂಜಿಲೆಂಡ್ ವಿರುದ್ಧ 1-0 ಅಂತರದಿಂದ ಗೆದ್ದ ಪ್ರವಾಸಿ ಭಾರತ ತಂಡ, ಇದೀಗ ಏಕದಿನ ಸರಣಿಯತ್ತ ಗಮನ ಹರಿಸಲಿದೆ. ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನೊಂದಿಗೆ ಶುಭಾರಂಭ ಪಡೆಯಲು ಎದುರು ನೋಡುತ್ತಿದೆ.

ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಕಿವೀಸ್ ವಿರುದ್ಧ ಏಕದಿನ ಸರಣಿಯನ್ನಾಡುತ್ತಿರುವ ಭಾರತ ತಂಡದಲ್ಲಿ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಹಲವು ಯುವ ಆಟಗಾರರಿ ಸ್ಥಾನ ಪಡೆದಿದ್ದು, ಉತ್ತಮ ಪ್ರದರ್ಶನ ನೀಡುವ ಮೂಲಕ ಭವಿಷ್ಯದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ಇದೊಂದು ಒಳ್ಳೆಯ ಅವಕಾಶವಾಗಿದೆ.

ಅರ್ಶ್‌ದೀಪ್ ಸಿಂಗ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ

ಅರ್ಶ್‌ದೀಪ್ ಸಿಂಗ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ

ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ ಸೋತ ನಂತರ 50 ಓವರ್‌ಗಳ ತಂಡಕ್ಕೆ ಮರಳಿದ ವೇಗಿ ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ಅವರಂತಹ ಹೊಸ ರೂಪದ ವೇಗದ ದಾಳಿಯನ್ನು ಶಿಖರ್ ಧವನ್ ನಾಯಕತ್ವದ ತಂಡ ಹೇಗೆ ಪ್ರದರ್ಶಿಸಲಿದೆ ಎಂಬುದನ್ನು ನೋಡಬೇಕಿದೆ.

21 ಪಂದ್ಯಗಳಲ್ಲಿ 33 ವಿಕೆಟ್‌ಗಳೊಂದಿಗೆ 2022ರ ಋತುವಿನಲ್ಲಿ ಟಿ20 ಪಂದ್ಯಗಳಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರು ತಮ್ಮ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

ದೀಪಕ್ ಚಹಾರ್ ಅವರ ಫಿಟ್‌ನೆಸ್ ಕುರಿತು ಅನುಮಾನ

ದೀಪಕ್ ಚಹಾರ್ ಅವರ ಫಿಟ್‌ನೆಸ್ ಕುರಿತು ಅನುಮಾನ

ಇದೇ ವೇಳೆ ಬೆನ್ನುನೋವಿನಿಂದಾಗಿ 2022ರ ಟಿ20 ವಿಶ್ವಕಪ್‌ನಿಂದ ಹೊರಗುಳಿದಿರುವ ಆಲ್‌ರೌಂಡರ್ ದೀಪಕ್ ಚಹಾರ್ ಅವರ ಫಿಟ್ನೆಸ್ ಕುರಿತು ಇನ್ನೂ ಅನುಮಾನಗಳಿವೆ. ಕಿವೀಸ್ ವಿರುದ್ಧದ ಸರಣಿಯಲ್ಲಾದರೂ ತಂಡಕ್ಕೆ ಹಿಂದಿರುಗುತ್ತಾರಾ ಎಂಬುದನ್ನು ತಿಳಿಯಲು ಶುಕ್ರವಾರದ ಪಂದ್ಯದವರೆಗೆ ಕಾಯಬೇಕಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸೂಪರ್‌ಪಾಸ್ಟ್ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಬೆಂಚ್ ಕಾಯಿಸುವಂತೆ ಮಾಡಲಾಗಿತ್ತು. ಇದೀಗ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಅತಿಥೇಯ ಕಿವೀಸ್ ಪಡೆಯನ್ನು ನಿಯಂತ್ರಿಸಲು ಈ ಯುವ ವೇಗಿಯನ್ನು ಬಳಸಿಕೊಳ್ಳಬಹುದು. ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಬದಲಾಗಿ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಏಕದಿನ ಸರಣಿಯಲ್ಲಿ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಶತಕದ ಬರವನ್ನು ಕೊನೆಗಾಣಿಸಲಿದ್ದಾರಾ ಶಿಖರ್ ಧವನ್

ಶತಕದ ಬರವನ್ನು ಕೊನೆಗಾಣಿಸಲಿದ್ದಾರಾ ಶಿಖರ್ ಧವನ್

ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ವಿರುದ್ಧ ಭಾರತ ಗೆದ್ದಿರುವ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ಸತತವಾಗಿ "ಸರಣಿ ಪುರುಷೋತ್ತಮ ಆಟಗಾರ' ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2023ರಲ್ಲಿ ಭಾರತದಲ್ಲಿ ನಡೆಯುವ 50 ಓವರ್‌ಗಳ ವಿಶ್ವಕಪ್‌ಗಾಗಿ ತಂಡವನ್ನು ಕಟ್ಟುತ್ತಿರುವಾಗ ಪಂಜಾಬ್ ಮೂಲದ ಆರಂಭಿಕ ಬ್ಯಾಟ್ಸ್‌ಮನ್ ಉತ್ತಮ ಫಾರ್ಮ್ ಮುಂದುವರಿಸಲು ಎದುರು ನೋಡುತ್ತಿದ್ದಾನೆ.

ಇನ್ನು ಶಿಖರ್ ಧವನ್ ಕೂಡ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದು, ಈ ಸರಣಿಯಲ್ಲಿ ತಮ್ಮ ಶತಕದ ಬರವನ್ನು ಕೊನೆಗಾಣಿಸಲು ನೋಡಲಿದ್ದಾರೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ನಾಯಕನಾಗಿ ನೇಮಕಗೊಂಡ ಧವನ್ 2019ರ ವಿಶ್ವಕಪ್‌ನಿಂದ ಶತಕ ಗಳಿಸಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸಂಭಾವ್ಯ ಆಡುವ 11ರ ಬಳಗ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸಂಭಾವ್ಯ ಆಡುವ 11ರ ಬಳಗ

ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಲಾಕಿ ಫರ್ಗುಸನ್, ಮೈಕೆಲ್ ಬ್ರೇಸ್ವೆಲ್

Story first published: Thursday, November 24, 2022, 8:57 [IST]
Other articles published on Nov 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X