IND vs NZ 1st ODI: ಭಾರತಕ್ಕೆ 301 ರನ್ ಗುರಿ ನೀಡಿದ ನ್ಯೂಜಿಲೆಂಡ್
ವಡೋದರಾ: ಭರವಸೆಯ ಬ್ಯಾಟರ್ ಡ್ಯಾರಿಲ್ ಮಿಚೆಲ್ ಹಾಗೂ ಹೆನ್ರಿ ನಿಕೋಲಸ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 301 ರನ್‌ಗಳ ಗುರಿಯನ್ನು ನೀಡಿದೆ.
ಭಾನುವಾರದ ಪಂದ್ಯದಲ್ಲಿ ಟಾಸ್ ಭಾರತ ತಂಡದ ಪಾಲಾಯಿತು. ಶುಭಮನ್ ಗಿಲ್ ಮೊದಲು ಫೀಲ್ಡಿಂಗ್ ಮಾಡಲು ಮುಂದಾದರು. ಕಿವೀಸ್ ತಂಡದ ಪರ ಡೆವೊನ್ ಕಾನ್ವೇ ಹಾಗೂ ಹೆನ್ರಿ ನಿಕೋಲಸ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಆರಂಭದಲ್ಲಿ ಎಚ್ಚರಿಕೆಯ ಆಟಕ್ಕೆ ಮಣೆ ಹಾಕಿತು. ಈ ವೇಳೆ ಕುಲ್‌ದೀಪ್ ಯಾದವ್ ಒಂದು ಕ್ಯಾಚ್ ಬಿಟ್ಟರು. ಇದರ ಸಂಪೂರ್ಣ ಲಾಭವನ್ನು ಪಡೆದ ನ್ಯೂಜಿಲೆಂಡ್ ಆಟಗಾರರು ಆರಂಭದಲ್ಲಿ ತಾಳ್ಮೆಯಿಂದ ಬ್ಯಾಟ್ ಮಾಡಿದರು.

ಡೆವೊನ್ ಕಾನ್ವೇ ಹಾಗೂ ಹೆನ್ರಿ ನಿಕೋಲಸ್ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್ ಕಳೆದುಕೊಳ್ಳದಂತೆ ನೋಡಿಕೊಂಡು 49 ರನ್ ಸೇರಿಸಿತು. ಈ ಜೋಡಿ ಮೊದಲ ವಿಕೆಟ್‌ಗೆ 21.4 ಓವರ್‌ಗಳಲ್ಲಿ 117 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ನಿಕೋಲಸ್ 8 ಬೌಂಡರಿ ನೆರವಿನಿಂದ 62 ರನ್ ಬಾರಿಸಿದ್ದಾಗ ಹರ್ಷಿತ್ ರಾಣಾ ತೋಡಿದ ಖೆಡ್ಡಾಗೆ ಬಲಿಯಾದರು. ಇನ್ನೋರ್ವ ಆರಂಭಿಕ ಆಟಗಾರ ಡೆವೊನ್ ಕಾನ್ವೇ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 56 ರನ್ ಬಾರಿಸಿ ಹರ್ಷಿತ್ ರಾಣಾ ಎಸೆತದಲ್ಲಿ ಬೋಲ್ಡ್ ಆದರು.
ಡ್ಯಾರಿಲ್ ಮಿಚೆಲ್ 84 ರನ್
ಮಧ್ಯಮ ಕ್ರಮಾಂಕದಲ್ಲಿ ವಿಲ್ ಯಂಗ್ (12), ಗ್ಲೆನ್ ಫಿಲಿಪ್ಸ್ (12), ಮಿಚೆಲ್ ಹೆ (18), ಮೈಕಲ್ ಬ್ರೇಸ್‌ವೆಲ್ (16) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಒಂದು ಬದಿಯಲ್ಲಿ ವಿಕೆಟ್‌ಗಳು ಬೀಳುತ್ತಾ ಇದ್ದರೂ ಸಹ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ಡ್ಯಾರಿಲ್ ಮಿಚೆಲ್ ಮಿಂಚಿದರು. ಇವರು 71 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 84 ರನ್ ಸಿಡಿಸಿ ಔಟ್ ಆದರು.

ಚೊಚ್ಚಲ ಪಂದ್ಯವನ್ನು ಆಡಿದ 24 ವರ್ಷದ ಕ್ರಿಶ್ಚಿಯನ್ ಕ್ಲಾರ್ಕ್ 17 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 24 ರನ್ ಬಾರಿಸಿ ಮಿಂಚಿದರು. ಅಂತಿಮವಾಗಿ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 300 ರನ್ ಸೇರಿಸಿತು.
ಭಾರತದ ಪರ ವೇಗದ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್ ಕಬಳಿಸಿದರು. ಕುಲ್‌ದೀಪ್ ಯಾದವ್ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications