ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ 1st ODI: ಧವನ್, ಗಿಲ್, ಅಯ್ಯರ್ ಅರ್ಧಶತಕ; ಕಿವೀಸ್‌ಗೆ ಸವಾಲಿನ ಗುರಿ ನೀಡಿದ ಭಾರತ

IND vs NZ 1st ODI: New Zealand Need 307 Runs To win Against Indi

ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು, ಆತಿಥೇಯ ನ್ಯೂಜಿಲೆಂಡ್‌ಗೆ ಪ್ರವಾಸಿ ಭಾರತ ತಂಡ ಸವಾಲಿನ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ನಾಯಕ ಶಿಖರ್ ಧವನ್ (72), ಶುಭಮನ್ ಗಿಲ್ (50) ಮತ್ತು ಶ್ರೇಯಸ್ ಅಯ್ಯರ್ (80) ಅವರ ಅಮೋಘ ಅರ್ಧಶತಕದಾಟಗಳ ನೆರವಿನಿಂದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿದ್ದು, ಆತಿಥೇಯ ನ್ಯೂಜಿಲೆಂಡ್ ತಂಡ ಗೆಲ್ಲಲು 307 ರನ್ ಗಳಿಸಬೇಕಿದೆ.

ಆರಂಭಿಕ ಆಟಗಾರರಾದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್ ಜೊತೆಯಾಟಕ್ಕೆ 23.1 ಓವರ್‌ಗಳಲ್ಲಿ 124 ರನ್ ಗಳಿಸಿದರು. ಆಗ ಶುಭಮನ್ ಗಿಲ್ ಅವರು 50 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾಗ ಲಾಕಿ ಫರ್ಗುಸನ್‌ಗೆ ವಿಕೆಟ್ ಒಪ್ಪಿಸಿದರು.

ನಂತರದ ಓವರ್‌ನಲ್ಲಿ 72 ರನ್ ಗಳಿಸಿ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ನಾಯಕ ಶಿಖರ್ ಧವನ್ ಟಿಮ್ ಸೌಥಿ ಬೌಲಿಂಗ್‌ನಲ್ಲಿ ಎಡವಿದರು. ನಂತರ ಬಂದ ರಿಷಭ್ ಪಂತ್ 15 ರನ್ ಔಟಾದರು.

IND vs NZ 1st ODI: New Zealand Need 307 Runs To win Against India

ಈ ಪಂದ್ಯದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 4 ರನ್ ಬಾರಿಸಿ ಲಾಕಿ ಫರ್ಗುಸನ್‌ಗೆ ವಿಕೆಟ್ ಒಪ್ಪಿಸಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ, ಶ್ರೇಯಸ್ ಅಯ್ಯರ್ ಸ್ಕೋರ್‌ಬೋರ್ಡ್‌ನಲ್ಲಿ ರನ್ ಹೆಚ್ಚಿಸುತ್ತಿದ್ದರು.

ಶ್ರೇಯಸ್ ಅಯ್ಯರ್ ಜೊತೆಯಾದ ಸಂಜು ಸ್ಯಾಮ್ಸನ್ ಕುಸಿದ ಭಾರತ ತಂಡಕ್ಕೆ ಆಸರೆಯಾದರು ಮತ್ತು 94 ರನ್‌ಗಳ ಜೊತೆಯಾಟ ನೀಡಿದರು. ತಂಡದ ಮೊತ್ತ 254 ರನ್‌ಗಳಾಗಿದ್ದಾಗ 36 ರನ್ ಗಳಿಸಿ ಆಡುತ್ತಿದ್ದ ಸಂಜು ಸ್ಯಾಮ್ಸನ್ ಆಡಮ್ ಮಿಲ್ನೆ ಬೌಲಿಂಗ್‌ನಲ್ಲಿ ಗ್ಲೆನ್ ಫಿಲಿಪ್ಸ್ ಹಿಡಿದ ಅದ್ಭುತ್ ಕ್ಯಾಚ್‌ಗೆ ಔಟಾದರು.

ಕೊನೆಯಲ್ಲಿ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಕೇವಲ 16 ಎಸೆತಗಳಲ್ಲಿ 37 ರನ್ ಬಾರಿಸಿದರು. ಇದರಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ್ದವು. ಕೊನೆಗೆ ಭಾರತ 7 ವಿಕೆಟ್ ಕಳೆದುಕೊಂಡು 306 ರನ್ ಕಲೆಹಾಕಿತು.

ನ್ಯೂಜಿಲೆಂಡ್ ಪರ ಲಾಕಿ ಫರ್ಗುಸನ್ ಮತ್ತು ಟಿಮ್ ಸೌಥಿ ತಲಾ ಮೂರು ವಿಕೆಟ್ ಪಡೆದು ಮಿಂಚಿದರೆ, ಆಡಮ್ ಮಿಲ್ನೆ ಒಂದು ವಿಕೆಟ್ ಪಡೆದರು.

ಭಾರತದ ಪರ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಇದಕ್ಕೂ ಮುನ್ನ ಮೂರು ಪಂದ್ಯಗಳ ಟಿ20 ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಗೆಲ್ಲುವ ಭರವಸೆಯಲ್ಲಿದೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಕೊನೆಯ ಬಾರಿಗೆ ಏಕದಿನ ಸರಣಿಗಾಗಿ ಕಿವೀಸ್ ಪ್ರವಾಸ ಕೈಗೊಂಡಾಗ ಏಕದಿನ ಸರಣಿಯನ್ನು 3-0 ಅಂತರದಿಂದ ಸೋತಿತ್ತು. ಈ ಬಾರಿ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆಎಲ್ ರಾಹುಲ್, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತ ಬಹುತೇಕ ಯುವ ಆಟಗಾರರ ಪಡೆ ಹೊಂದಿದೆ.

ಭಾರತ vs ನ್ಯೂಜಿಲೆಂಡ್ ಆಡುವ 11ರ ಬಳಗ
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲ್ಯೂಕಿ ಫರ್ಗುಸನ್

Story first published: Friday, November 25, 2022, 10:51 [IST]
Other articles published on Nov 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X