ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ 1st ODI: ಮೊದಲನೇ ಪಂದ್ಯದಲ್ಲಿ ಇಶಾನ್ ಕಿಶನ್ ಆಡೋದು ಖಚಿತ ಎಂದ ರೋಹಿತ್ ಶರ್ಮಾ

IND Vs NZ 1st ODI: Rohit Sharma Confirms Ishan Kishan Will Include In Playing XI For Fisrt ODI

ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ವೈಟ್‌ವಾಶ್ ಮಾಡಿದ ನಂತರ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲು ಸಜ್ಜಾಗಿದೆ. ಸರಣಿಯ ಮೊದಲನೇ ಪಂದ್ಯ ಜನವರಿ 18ರಂದು ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದ ಇಶಾನ್ ಕಿಶನ್, ಮುಂದಿನ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಬೆಂಚ್ ಕಾದಿದ್ದರು. ಇಶಾನ್ ಕಿಶನ್‌ಗೆ ಅವಕಾಶ ನೀಡದ ಕ್ರಮಕ್ಕೆ ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ವಿಚಾರವನ್ನು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿಗೆ ವಿಶ್ರಾಂತಿ ಅಗತ್ಯವಿತ್ತು, ಹೀಗಾಗಿ ಅವರ ವೃತ್ತಿಜೀವನ ಮುಂದೂಡಿದೆ; ಎಂಎಸ್‌ಕೆ ಪ್ರಸಾದ್ವಿರಾಟ್ ಕೊಹ್ಲಿಗೆ ವಿಶ್ರಾಂತಿ ಅಗತ್ಯವಿತ್ತು, ಹೀಗಾಗಿ ಅವರ ವೃತ್ತಿಜೀವನ ಮುಂದೂಡಿದೆ; ಎಂಎಸ್‌ಕೆ ಪ್ರಸಾದ್

ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಆಡುವುದನ್ನು ಖಚಿತ ಪಡಿಸಿದ ರೋಹಿತ್ ಶರ್ಮಾ, "ಇಶಾನ್ ಕಿಶಾನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ದ್ವಿಶತಕ ಸಿಡಿಸಿದ ನಂತರ, ಅವರು ನ್ಯೂಜಿಲೆಂಡ್ ವಿರುದ್ದ ಆಡುತ್ತಿರುವುದು ನನಗೆ ಸಂತೋಷ ನೀಡಿದೆ" ಎಂದು ಹೇಳಿದರು.

ವಿಕೆಟ್ ಕೀಪಿಂಗ್ ಜವಾಬ್ದಾರಿ

ವಿಕೆಟ್ ಕೀಪಿಂಗ್ ಜವಾಬ್ದಾರಿ

ಭಾರತ ಏಕದಿನ ತಂಡದ ವಿಕೆಟ್ ಕೀಪರ್ ಕೆಎಲ್ ರಾಹುಲ್ ತಮ್ಮ ಮದುವೆ ಕಾರ್ಯಗಳಿಗಾಗಿ ರಜೆಯಲ್ಲಿದ್ದು, ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರುಗುಳಿದಿದ್ದಾರೆ. ಕೆಎಲ್ ರಾಹುಲ್ ಬದಲಿಗೆ ತಂಡದಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ.

ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಬದಲಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ಇತಿಹಾಸ ನಿರ್ಮಿಸಿದ್ದರು. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ನಂತರ ಏಕದಿನದಲ್ಲಿ ದ್ವಿಶತಕ ಬಾರಿಸಿದ ನಾಲ್ಕನೇ ಭಾರತೀಯ ಎನಿಸಿಕೊಂಡರು. 131 ಎಸೆತಗಳಲ್ಲಿ 24 ಬೌಂಡರಿ, 10 ಸಿಕ್ಸರ್ ಸಹಿತ 210 ರನ್ ಗಳಿಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಇದೇ ಪ್ರದರ್ಶನ ಮುಂದುವರೆಸಿದರೆ, ತಂಡದಲ್ಲಿ ಸ್ಥಾನ ಖಾಯಂ ಮಾಡಿಕೊಳ್ಳುವ ಅವಕಾಶವಿದೆ.

IND Vs NZ ODI: ಏಕದಿನ ಸರಣಿಯಿಂದ ಸ್ಟಾರ್ ಬ್ಯಾಟರ್ ಔಟ್, ತಂಡದಲ್ಲಿ ಸ್ಥಾನ ಪಡೆದ ಆರ್‌ಸಿಬಿ ಬ್ಯಾಟರ್

ಸರಣಿಯಿಂದ ಹೊರಬಿದ್ದ ಅಯ್ಯರ್

ಸರಣಿಯಿಂದ ಹೊರಬಿದ್ದ ಅಯ್ಯರ್

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್, ಬೆನ್ನು ನೋವಿನ ಕಾರಣದಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯ ಮೂರು ಪಂದ್ಯಗಳಲ್ಲಿ ಆಡಿದ್ದ ಶ್ರೇಯಸ್ ಅಯ್ಯರ್ ಸಾಧಾರಣ ಪ್ರದರ್ಶನ ನೀಡಿದ್ದರು.

ಶ್ರೇಯಸ್ ಅಯ್ಯರ್ ಪಂದ್ಯದ ಹಿಂದಿನ ದಿನ ಸರಣಿಯಿಂದ ಬಿದ್ದಿದ್ದಾರೆ. ಅವರ ಬದಲಿಗೆ ರಜತ್ ಪಟಿದಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸವಾಲಿಗೆ ಸಿದ್ದವಾಗಿದ್ದೇವೆ ಎಂದ ನಾಯಕ

ಸವಾಲಿಗೆ ಸಿದ್ದವಾಗಿದ್ದೇವೆ ಎಂದ ನಾಯಕ

ನ್ಯೂಜಿಲೆಂಡ್ ಉತ್ತಮ ತಂಡ ಎಂದು ನಾಯಕ ರೋಹಿತ್ ಶರ್ಮಾ ಒಪ್ಪಿಕೊಂಡಿದ್ದಾರೆ. ಆದರೂ ಹೊಸ ಸವಾಲಿಗೆ ಸಿದ್ಧವಾಗಿರುವುದಾಗಿ ತಿಳಿಸಿದ್ದಾರೆ. "ತಂಡವಾಗಿ ನಮ್ಮ ಪ್ರದರ್ಶನವನ್ನು ಸುಧಾರಿಸಿಕೊಳ್ಳಲು ಬಯಸುತ್ತೇವೆ. ದೊಡ್ಡ ವಿರೋಧ, ದೊಡ್ಡ ಸವಾಲು ನಮಗೆ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಅವಕಾಶಗಳಾಗಿದೆ. ನ್ಯೂಜಿಲೆಂಡ್ ಉತ್ತಮ ತಂಡವಾಗಿದೆ. ಪಾಕಿಸ್ತಾನದ ವಿರುದ್ಧ ಏಕದಿನ ಸರಣಿಯನ್ನು ಗೆದ್ದು ಬರುತ್ತಿದ್ದಾರೆ. ಅವರು ನಿಜವಾಗಿಯೂ ಉತ್ತಮ ಕ್ರಿಕೆಟ್ ಆಡುತ್ತಿದ್ದಾರೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

Story first published: Tuesday, January 17, 2023, 20:21 [IST]
Other articles published on Jan 17, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X