ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ 1st ODI: ಧೋನಿ ದಾಖಲೆ ಧೂಳಿಪಟ, ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್ ರೋಹಿತ್

IND Vs NZ 1st ODI: Rohit Sharma Surpased MS Dhoni To Have Most ODI Sixes In India

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಭಾರತದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ.

ಈ ಮೊದಲು ಅತಿ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆ ಮಾಜಿ ನಾಯಕ ಎಂಎಸ್‌ ಧೋನಿ ಹೆಸರಿನಲ್ಲಿತ್ತು. ಧೋನಿ ಭಾರತದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 123 ಸಿಕ್ಸರ್ ಸಿಡಿಸುವ ಮೂಲಕ ಇದುವರೆಗೂ ಅಗ್ರಸ್ಥಾನದಲ್ಲಿದ್ದರು.

ಹೈದರಾಬಾದ್‌ನ ಉಪ್ಪಾಲದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 2 ಸಿಕ್ಸರ್ ಸಿಡಿಸಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಭಾರತದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 125 ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎನ್ನುವ ಇತಿಹಾಸ ನಿರ್ಮಿಸಿದರು. ಅವರು ಒಟ್ಟಾರೆಯಾಗಿ ಏಕದಿನ ಕ್ರಿಕೆಟ್‌ನಲ್ಲಿ 265 ಸಿಕ್ಸರ್ ಸಿಡಿಸಿದ್ದಾರೆ.

ಭಾರತ vs ನ್ಯೂಜಿಲೆಂಡ್: 1ನೇ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗಭಾರತ vs ನ್ಯೂಜಿಲೆಂಡ್: 1ನೇ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

38 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 34 ರನ್ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಉತ್ತಮ ಆರಂಭವನ್ನು ಪಡೆಯುತ್ತಿರುವ ರೋಹಿತ್ ಶರ್ಮಾ, ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲರಾಗುತ್ತಿದ್ದಾರೆ. ಕಿವೀಸ್ ವೇಗಿ ಬ್ಲೇರ್ ಟಿಕ್ನರ್ 13ನೇ ಓವರ್‌ನ ಮೊದಲ ಎಸೆತದಲ್ಲಿ ರೋಹಿತ್ ಶರ್ಮಾ ಔಟಾಗಿ ನಿರಾಸೆ ಮೂಡಿಸಿದರು.

IND Vs NZ 1st ODI: Rohit Sharma Surpased MS Dhoni To Have Most ODI Sixes In India

ಆಡಮ್ ಗಿಲ್‌ಕ್ರಿಸ್ಟ್‌ ಹಿಂದಿಕ್ಕಿದ ರೋಹಿತ್ ಶರ್ಮಾ

ಇದರ ಜೊತೆಯಲ್ಲೇ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರರ ಪಟ್ಟಿಯಲ್ಲಿ 16ನೇ ಸ್ಥಾನಕ್ಕೆ ಏರಿದ್ದಾರೆ. ಆಸ್ಟ್ರೇಲಿಯಾದ ಲೆಜೆಂಡರಿ ವಿಕೆಟ್ ಕೀಪರ್ ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್‌ ಅವರನ್ನು ಹಿಂದಿಕ್ಕಿದ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 16 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಆಡಮ್ ಗಿಲ್‌ಕ್ರಿಸ್ಟ್‌ 279 ಏಕದಿನ ಇನ್ನಿಂಗ್ಸ್‌ನಲ್ಲಿ 35.89 ಸರಾಸರಿ ಮತ್ತು 96.95 ಸ್ಟ್ರೈಕ್‌ರೇಟ್‌ನಲ್ಲಿ 9619 ರನ್ ಗಳಿಸಿದ್ದಾರೆ. 50 ಓವರ್‌ಗಳ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪರ 16 ಶತಕ ಮತ್ತು 55 ಅರ್ಧಶತಕಗಳನ್ನು ಬಾರಿಸಿದ್ದಾರೆ.

ರೋಹಿತ್ ಶರ್ಮಾ ಇದುವರೆಗೂ 232 ಏಕದಿನ ಇನ್ನಿಂಗ್ಸ್‌ನಲ್ಲಿ 48.63ರ ಅತ್ಯುತ್ತಮ ಸರಾಸರಿ ಮತ್ತು 89.60 ಸ್ಟ್ರೈಕ್‌ರೇಟ್‌ನಲ್ಲಿ 9630 ರನ್ ಗಳಿಸಿ ಗಿಲ್‌ಕ್ರಿಸ್ಟ್‌ರನ್ನು ಹಿಂದಿಕ್ಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಗಳಿಸಿರುವ ಹಿಟ್‌ಮ್ಯಾನ್ 47 ಅರ್ಧಶತಕ ಮತ್ತು 29 ಶತಕಗಳನ್ನು ಸಿಡಿಸಿದ್ದಾರೆ.

ಭಾರತೀಯರ ಪೈಕಿ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಮತ್ತು ಎಂಎಸ್ ಧೋನಿ ನಂತರ 6ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

Story first published: Wednesday, January 18, 2023, 15:35 [IST]
Other articles published on Jan 18, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X