Ind vs NZ 1st ODI : ಶುಬ್ಮನ್ ಗಿಲ್ ದ್ವಿಶತಕದ ಅಬ್ಬರ: ನ್ಯೂಜಿಲೆಂಡ್ ಗೆಲುವಿಗೆ ಬೃಹತ್ ಗುರಿ

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ಅದರಲ್ಲೂ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಅಮೋಘ ಪ್ರದರ್ಶನ ನೀಡಿದ್ದು ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಆರಂಭದಿಂದ ಅಂತಿಮ ಓವರ್‌ವರೆಗೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಶುಬ್ಮನ್ ಗಿಲ್ ಟೀಮ್ ಇಂಡಿಯಾದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ.
ರೋಹಿತ್ ಶರ್ಮಾ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದ ಶುಬ್ಮನ್ ಗಿಲ್ ಸುದೀರ್ಘ ಇನ್ನಿಂಗ್ಸ್‌ನಲ್ಲಿ 149 ಎಸೆತಗಳನ್ನು ಎದುರಿಸಿ ಬರೊಬ್ಬರಿ 208 ರನ್‌ಗಳನ್ನು ಗಳಿಸಿ ಕೊನೆಯ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ಈ ಭರ್ಜರಿ ಇನ್ನಿಂಗ್ಸ್ 19 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಈ ಬ್ಯಾಟಿಂಗ್ ಪ್ರದರ್ಶನದಿಂದ ಟೀಮ್ ಇಂಡಿಯಾ ಬರೊಬ್ಬರಿ 349 ರನ್‌ಗಳನ್ನು ಗಳಿಸಿದ್ದು ಕಿವೀಸ್ ಪಡೆಗೆ ಬೃಹತ್ ಗುರಿ ನಿಗದಿಪಡಿಸಿದೆ.

ರೋಹಿತ್ ಜೊತೆ ಭರ್ಜರಿ ಆರಂಭ
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ 60 ರನ್‌ಗಳ ಉತ್ತಮ ಜೊತೆಯಾಟವನ್ನು ನೀಡಿದರು. 34 ರನ್‌ಗಳಿಸಿದ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡ ಬಳಿಕ ವಿರಾಟ್ ಕೊಹ್ಲಿ ಹಾಗೂ ಇಶಾನ್ ಕಿಶನ್ ಒಂದಂಕಿಗೆ ವಿಕೆಟ್ ಒಪ್ಪಿಸಿ ಫೆವಿಲಿಯ್‌ಗೆ ಸೇರಿಕೊಂಡರು. ಆದರೆ ಮತ್ತೊಂದೆಡೆ ಗಿಲ್ ಬದ್ರವಾಗಿ ನೆಲೆಯೂರಿ ಇನ್ನಿಂಗ್ಸ್ ಕಟ್ಟುತ್ತಾ ಸಾಗಿದರು.

ಗಿಲ್‌ಗೆ ಸಾಥ್ ನೀಡಿದ SKY, ಪಾಂಡ್ಯ
ಇಶಾನ್ ಕಿಶನ್‌ಗೆ ಮದ್ಯ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅದ್ಭುತ ಸಾಥ್ ನೀಡಿದರು. ಈ ಇಬ್ಬರು ಬ್ಯಾಟರ್‌ಗಳ ಜೊತೆಗೆ ತಲಾ ಅರ್ಧ ಶತಕದ ಜೊತೆಯಾಟ ಆಡಿದ ಗಿಲ್ ಸತತ ಎರಡನೇ ಶತಕವನ್ನು ಪೂರ್ಣಗೊಳಿಸಿದ್ದು ಮಾತ್ರವಲ್ಲದೆ ಚೊಚ್ಚಲ ದ್ವಿಶತಕವನ್ನು ಕೂಡ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರವಾಗಿ ಆರಂಭಿಕ ಸ್ಥಾನಕ್ಕೆ ತಾನು ಅತ್ಯಂತ ಅರ್ಹ ಆಟಗಾರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಅಂತಿಮ ಹಂತದಲ್ಲಿ ಸ್ಪೋಟಕವಾಗಿಯೂ ಬ್ಯಾಟಿಂಗ್ ನಡೆಸಿದ ಗಿಲ್ ಹ್ಯಾಟ್ರಿಕ್ ಸಿಕ್ಸರ್‌ನೊಂದಿಗೆ ದ್ವಿಶತಕ ಪೂರ್ಣಗೊಳಿಸಿದರು. ಕೊನೆಯ ಓವರ್‌ನ 2ನೇ ಎಸೆತದಲ್ಲಿ ಗಿಲ್ ವಿಕೆಟ್ ಕಳೆದುಕೊಂಡರಾದರೂ ಅಷ್ಟರಲ್ಲಾಗಲೇ ಕಿವೀಸ್ ಬೌಲಿಂಗ್ ಪಡೆಯನ್ನು ಧ್ವಂಸ ಮಾಡುವಲ್ಲಿ ಗಿಲ್ ಯಶಸ್ವಿಯಾಗಿದ್ದರು. ಅಂತಿಮವಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ ಕಳೆದುಕೊಂಡು 349 ರನ್‌ಗಳಿಸಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೀಕರ್ ಭರತ್, ಶಹಬಾಜ್ ಅಹ್ಮದ್, ರಜತ್ ಪಾಟಿದಾರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಜಾಕೋಬ್ ಡಫಿ, ಡೌಗ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಇಶ್ ಸೋಧಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications