ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Nz 1st ODI: ಮೊದಲ ಏಕದಿನ ಪಂದ್ಯದಲ್ಲಿ ಈ ಮೂವರಿಗೆ ಅವಕಾಶ ಸಿಗುವುದು ಅನುಮಾನ

Team india

ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಒಡಿಐ ಸರಣಿಗೆ ಸಜ್ಜಾಗಿದೆ. ಟಿ20 ಸರಣಿಯಲ್ಲಿ 1-0 ಅಂತರದಲ್ಲಿ ಗೆಲುವು ಸಾಧಿಸಿದೆ. ಮೂರನೇ ಟಿ20 ಪಂದ್ಯವು ಮಳೆಯಿಂದಾಗಿ ಟೈನಲ್ಲಿ ಅಂತ್ಯಗೊಂಡ ಪರಿಣಾಮ ಅದಾಗಲೇ ಒಂದು ಪಂದ್ಯ ಗೆದ್ದಿದ್ದ ಹಾರ್ದಿಕ್ ಪಾಂಡ್ಯ ಪಡೆ ಸರಣಿ ಜಯಿಸಿತು.

ಕಿವೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶಿಖರ್ ಧವನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮುನ್ನಡೆಯಲಿದೆ. ನವೆಂಬರ್ 25ರಂದು ಆಕ್ಲೆಂಡ್‌ನ ಈಡೆನ್ ಪಾರ್ಕ್‌ನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಉಳಿದೆರಡು ಪಂದ್ಯಗಳು ಹ್ಯಾಮಿಲ್ಟನ್ ಮತ್ತು ಕ್ರೈಸ್ಟ್‌ಚರ್ಚ್‌ನಲ್ಲಿ ನವೆಂಬರ್ 27 ಮತ್ತು 30 ರಂದು ನಡೆಯಲಿದೆ.

ಆಕ್ಲೆಂಡ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆಟಗಾರರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗದೆ ಹೊರಗುಳಿಯಬಹುದಾದ ಮೂವರು ಆಟಗಾರರನ್ನು ಈ ಕೆಳಗೆ ತಿಳಿಸಲಾಗಿದೆ.

ಕುಲದೀಪ್ ಯಾದವ್

ಕುಲದೀಪ್ ಯಾದವ್

ಚೈನಾಮೆನ್ ಬೌಲರ್ ಕುಲದೀಪ್ ಯಾದವ್ ಟಿ20 ಸರಣಿ ರೀತಿಯಲ್ಲೇ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅವಕಾಶ ಪಡೆಯುವುದು ಅನುಮಾನವಾಗಿದೆ. ಯುಜವೇಂದ್ರ ಚಹಾಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ತಂಡದಲ್ಲಿ ಅವಕಾಶವಿರುವ ಹಿನ್ನಲೆಯಲ್ಲಿ ಎಡಗೈ ಸ್ಪಿನ್ನರ್‌ಗೆ ತಂಡದಲ್ಲಿ ಚಾನ್ಸ್‌ ಸಿಗೋದು ಡೌಟ್.

27 ವರ್ಷದ ಚೈನಾಮೆನ್ ಬೌಲರ್ ಕುಲ್‌ದೀಪ್ ಯಾದವ್ 72 ಏಕದಿನ ಪಂದ್ಯಗಳನ್ನು ಆಡಿದ್ದು, 118 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 5.19 ಎಕಾನಮಿ ದರದಲ್ಲಿ ಬೌಲಿಂಗ್ ಮಾಡಿರುವ ಕುಲ್‌ದೀಪ್ ಯಾದವ್ ಡಿಸ್ಟ್ರಕ್ಟಿವ್ ಸ್ಪಿನ್ನರ್ ಆಗಿದ್ದಾರೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ ಎರಡು ಸ್ಪಿನ್ನರ್‌ಗಳಿಗಿಂತ ಹೆಚ್ಚು ಆಟಗಾರರನ್ನು ತೆಗೆದುಕೊಂಡು ಹೋದ್ರೆ ಹೆಚ್ಚು ನೆರವಾಗುವುದಿಲ್ಲ..

ನ್ಯೂಜಿಲೆಂಡ್‌ನ ಬೇರೆ ಸ್ಟೇಡಿಯಂಗಳಿಗೆ ಹೋಲಿಸಿದ್ರೆ, ಆಕ್ಲೆಂಡ್‌ ಸ್ಟೇಡಿಯಂ ಚಿಕ್ಕದಾಗಿದೆ. ಹೀಗಾಗಿ ಚೈನಾಮೆನ್ ಸ್ಪಿನ್ನರ್ ಕುಲ್‌ದೀಪ್ ಯಾದವ್‌ರನ್ನು ಆಯ್ಕೆ ಮಾಡುವುದು ಬಹುತೇಕ ಅನುಮಾನವಾಗಿದೆ.

ಕುಲದೀಪ್ ಸೇನ್

ಕುಲದೀಪ್ ಸೇನ್

26 ವರ್ಷದ ಕುಲದೀಪ್ ಸೇನ್ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದರು. ಮಧ್ಯಪ್ರದೇಶ ಪರ ದೇಶೀಯ ಕ್ರಿಕೆಟ್ ಮತ್ತು ರಾಜಸ್ತಾನ್ ರಾಯಲ್ಸ್‌ ಪರ ಐಪಿಎಲ್‌ನಲ್ಲಿ ಮಿಂಚಿದ್ದ ಕುಲದೀಪ್‌ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕುಲದೀಪ್ ಸೇನ್, ಕಳೆದ ಆರು ಪಂದ್ಯಗಲಲ್ಲಿ 18 ವಿಕೆಟ್ ಉರುಳಿಸಿದ್ದು, ಪಂಜಾಬ್ ವಿರುದ್ಧ ಐದು ವಿಕೆಟ್ ಸಹ ಕಬಳಿಸಿದ್ರು. ಹೀಗಾಗಿ ಉತ್ತಮ ಫಾರ್ಮ್‌ನಲ್ಲಿದ್ದ ಕುಲ್‌ದೀಪ್ ಸೇನ್‌ಗೆ ಟೀಂ ಇಂಡಿಯಾ ಪರ ಆಡುವ ಬುಲಾವ್ ಬಂದಿದೆ.

ಆದ್ರೆ ತಂಡದಲ್ಲಿ ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಅರ್ಷ್‌ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಇರುವುದರಿಂದ ಈತನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆಯುವುದು ಬಹುತೇಕ ಅನುಮಾನ.

ಶಹಬಾಜ್ ಅಹಮದ್

ಶಹಬಾಜ್ ಅಹಮದ್

ಟಿ20 ವಿಶ್ವಕಪ್‌ಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದ 27 ವರ್ಷದ ಆಲ್‌ರೌಂಡರ್‌ ಶಹಬಾಜ್ ಅಹಮದ್ ಮತ್ತೊಮ್ಮೆ ಭಾರತದ ಪರ ಆಡಲು ಅವಕಾಶವನ್ನ ಎದುರು ನೋಡುತ್ತಿದ್ದಾರೆ. ಇಂಜ್ಯುರಿಯಿಂದ ಗುಣಮುಖರಾಗಿ ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದ ಕಾರಣ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವಕಾಶಕ್ಕಾಗಿ ಕಾಯಬೇಕಿದೆ.

ಭವಿಷ್ಯದಲ್ಲಿ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್‌ಗೆ ಅವಕಾಶ ನೀಡುವ ಹಿನ್ನಲೆಯಲ್ಲಿ ಶಹಬಾಜ್ ಅಹಮದ್‌ಗೆ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಆಡುವುದು ಬಹು ಮುಖ್ಯವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಏಕದಿನ ಪಂದ್ಯಗಳಲ್ಲಿ ಆಡಿದ್ದ ಶಹಬಾಜ್ ಅಹಮದ್ 5.5 ಎಕಾನಮಿಯಲ್ಲಿ ಮೂರು ವಿಕೆಟ್ ಕಬಳಿಸಿದ್ರು. ಬ್ಯಾಟಿಂಗ್‌ನಲ್ಲೂ ತಂಡಕ್ಕೆ ನೆರವಾಗುವ ಶಹಬಾಜ್ ಅದ್ಭುತ ಫೀಲ್ಡರ್ ಕೂಡ ಆಗಿದ್ದಾರೆ.

ಕುಲ್‌ದೀಪ್ ಸೇನ್ ರೀತಿಯಲ್ಲಿಯೇ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆರು ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ. ಮಹಾರಾಷ್ಟ್ರ ಮತ್ತು ಸರ್ವೀಸಸ್ ವಿರುದ್ಧ ಎರಡು ಅರ್ಧಶತಕ ಸಹ ಸಿಡಿಸಿದ್ದಾರೆ. ಆದ್ರೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಈತನಿಗೆ ಅವಕಾಶ ಸಿಗಲಿದೆಯೇ ಎಂಬುದನ್ನ ಕಾದು ನೋಡಬೇಕಿದೆ.

Story first published: Thursday, November 24, 2022, 18:07 [IST]
Other articles published on Nov 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X