Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs NZ 1st T20: ಭಾರತ vs ನ್ಯೂಜಿಲೆಂಡ್ ಫ್ಯಾಂಟಸಿ ಡ್ರೀಮ್ ಟೀಂ; ಸಂಭಾವ್ಯ ತಂಡಗಳು

IND vs NZ 1st T20: India vs New Zealand Fantasy Dream Team And Probable Playing 11

ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ಮತ್ತು ಪ್ರವಾಸಿ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಶುಕ್ರವಾರ, ಜನವರಿ 27ರಂದು ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ವಿರುದ್ಧದ ಭಾರತ ಟಿ20 ತಂಡಕ್ಕೆ ಪೃಥ್ವಿ ಶಾ ಮರಳಿದ್ದರೂ, ಉತ್ತಮ ಫಾರ್ಮ್‌ನಲ್ಲಿರುವ ಶುಭ್ಮನ್ ಗಿಲ್ ಅವರು ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ ಪೃಥ್ವಿ ಶಾ ಅವಕಾಶಕ್ಕಾಗಿ ಕಾಯಬೇಕಾಗಿದೆ ಎಂದು ಭಾರತದ ನಾಯಕ ಹಾರ್ದಿಕ್ ಪಾಂಡ್ಯ ಗುರುವಾರ ಖಚಿತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಒಂದು ದ್ವಿಶತಕ ಮತ್ತು ಶತಕ ಸೇರಿದಂತೆ ಒಟ್ಟು 360 ರನ್ ಗಳಿಸಿ ಅಗ್ರ ಸ್ಕೋರರ್ ಆಗಿದ್ದ ಶುಭ್ಮನ್ ಗಿಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

ಇನ್ನು ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನೊಂದಿಗೆ ಮೊದಲ ಓವರ್ ಬೌಲಿಂಗ್ ಮಾಡಿದ್ದರು. ನಂತರ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ವಿಶ್ರಾಂತಿ ಪಡೆದಾಗಲೂ ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡಿದರು.

IND vs NZ 1st T20: India vs New Zealand Fantasy Dream Team And Probable Playing 11

ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದಲ್ಲಿ ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವಕಾಶ ಪಡೆಯಲಿದ್ದಾರೆ. ಯುಜ್ವೇಂದ್ರ ಚಹಾಲ್ ಬೆಂಚ್ ಕಾಯಿಸುವ ಸಾಧ್ಯತೆ ಇದೆ.

ಇನ್ನು ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ಪ್ರವಾಸಿ ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ಫ್ಯಾಂಟಸಿ ಡ್ರೀಮ್ ಟೀಂ
ವಿಕೆಟ್ ಕೀಪರ್: ಡೆವೊನ್ ಕಾನ್ವೇ

ಬ್ಯಾಟ್ಸ್‌ಮನ್‌ಗಳು: ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್

ಆಲ್‌ರೌಂಡರ್ಸ್: ಮಿಚೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್

ಬೌಲರ್ಸ್: ಕಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್

ನಾಯಕ ಮತ್ತು ಉಪನಾಯಕ: ಸೂರ್ಯಕುಮಾರ್ ಯಾದವ್, ಗ್ಲೆನ್ ಫಿಲಿಪ್ಸ್

ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಶಿವಂ ಮಾವಿ.

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಬ್ಲೇರ್ ಟಿಕ್ನರ್, ಇಶ್ ಸೋಧಿ, ಬೆನ್ ಲಿಸ್ಟರ್, ಲಾಕಿ ಫರ್ಗುಸನ್.

Story first published: Friday, January 27, 2023, 12:12 [IST]
Other articles published on Jan 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+