ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ 1st T20: ಭಾರತದ ಇನ್ನಿಂಗ್ಸ್ ಆರಂಭಿಕರನ್ನು ಹೆಸರಿಸಿದ ಹಾರ್ದಿಕ್ ಪಾಂಡ್ಯ; ಪೃಥ್ವಿ ಶಾಗಿಲ್ಲ ಸ್ಥಾನ

IND vs NZ 1st T20: Shubman Gill Will Open Innings With Ishan Kishan Says Captain Hardik Pandya

ಶುಕ್ರವಾರ, ಜನವರಿ 27ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ರಾಂಚಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕಾಗಿ ಉಭಯ ತಂಡಗಳು ಈಗಾಗಲೇ ಮೈದಾನದಲ್ಲಿ ಅಭ್ಯಾಸ ಆರಂಭಿಸಿವೆ.

ಜನವರಿ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-1 ಸರಣಿಯನ್ನು ಗೆದ್ದ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.

ವಿರಾಟ್ ಕೊಹ್ಲಿಗಿಂತ ತಾನು ನಂ.1 ಎಂದಿದ್ದ ಖುರ್ರಂ ಮಂಝೂರ್ ಹೇಳಿಕೆಗೆ ಪಾಕ್‌ನ ಮಾಜಿ ಕ್ರಿಕೆಟಿಗನಿಂದಲೇ ಟೀಕೆವಿರಾಟ್ ಕೊಹ್ಲಿಗಿಂತ ತಾನು ನಂ.1 ಎಂದಿದ್ದ ಖುರ್ರಂ ಮಂಝೂರ್ ಹೇಳಿಕೆಗೆ ಪಾಕ್‌ನ ಮಾಜಿ ಕ್ರಿಕೆಟಿಗನಿಂದಲೇ ಟೀಕೆ

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವರು ಟಿ20 ಸರಣಿಯಲ್ಲಿ ಆಡಲಿದ್ದಾರೆ.

ರಾಂಚಿಯಲ್ಲಿ ನಡೆದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿ, ಶುಭ್ಮನ್ ಗಿಲ್ ಈಗಾಗಲೇ ಟಿ20 ತಂಡದ ಭಾಗವಾಗಿರುವುದರಿಂದ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ಹೇಳಿದರು.

ಇಶಾನ್ ಕಿಶನ್ ಜೊತೆ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭ

ಇಶಾನ್ ಕಿಶನ್ ಜೊತೆ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭ

ಶುಭ್ಮನ್ ಗಿಲ್ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ರಾಂಚಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಭಾರತದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಖಚಿತಪಡಿಸಿದರು.

ಶುಭ್ಮನ್ ಗಿಲ್ ಭಾರತ ತಂಡದಲ್ಲಿ ಸಾಕಷ್ಟು ಸಮಯದಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬಲಗೈ ಬ್ಯಾಟರ್ ತನ್ನ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಿರೀಕ್ಷೆಗೆ ತಕ್ಕಂತೆ ಆಡುತ್ತಿದ್ದಾರೆ. ಗಿಲ್ ತಮ್ಮ ಕೊನೆಯ ನಾಲ್ಕು ಏಕದಿನ ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಬಾರಿಸಿ ತಂಡದ ಮ್ಯಾನೇಜ್‌ಮೆಂಟ್ ಗಮನ ಸೆಳೆದಿದ್ದಾರೆ.

ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ಒಟ್ಟು 360 ರನ್

ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ಒಟ್ಟು 360 ರನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ಒಟ್ಟು 360 ರನ್ ಗಳಿಸಿದರು. ಇದರಲ್ಲಿ ಜನವರಿ 18ರಂದು ಹೈದರಾಬಾದ್‌ನಲ್ಲಿ ಸಿಡಿಸಿದ ದ್ವಿಶತಕ ಒಳಗೊಂಡಿದ್ದು, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ ಬಾರಿಸಿದರು.

ಶುಕ್ರವಾರ, ಜನವರಿ 27ರಿಂದ ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಭಾರತ ತಂಡದಲ್ಲಿ ಪೃಥ್ವಿ ಶಾ ಆಯ್ಕೆಯಾಗಿದ್ದರು. ಆದರೆ, ಜುಲೈ 2021ರಿಂದ ಟೀಂ ಇಂಡಿಯಾ ಪರ ಆಡಿಲ್ಲ. ಆದರೆ, ಭರವಸೆಯ ಬ್ಯಾಟರ್ ದೇಶೀಯ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾರತ ಸರಣಿ ಗೆದ್ದ ನಂತರ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದರೆ ಮಾತ್ರ ಪೃಥ್ವಿ ಶಾ ಅವಕಾಶ ಗಳಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸಂಭಾವ್ಯ 11ರ ಬಳಗ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಸಂಭಾವ್ಯ 11ರ ಬಳಗ

ಭಾರತ: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲನ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಡೇನ್ ಕ್ಲೀವರ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಜಾಕೋಬ್ ಡಫ್ಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

Story first published: Thursday, January 26, 2023, 20:26 [IST]
Other articles published on Jan 26, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X