IND vs NZ 1st T20: ಟಿ20 ಸರಣಿಯ ಮೊದಲ ಪಂದ್ಯಕ್ಕಾಗಿ ಆರಂಭಿಸಿದ ಟೀಂ ಇಂಡಿಯಾ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ವೈಟ್ ವಾಶ್ ಮಾಡಿರುವ ಟೀಂ ಇಂಡಿಯಾ, ಟಿ20 ಸರಣಿಗಾಗಿ ಅಭ್ಯಾಸ ಆರಂಭಿಸಿದೆ. ಶುಕ್ರವಾರ ಜನವರಿ 27 ರಂದು ಟಿ20 ಸರಣಿಯ ಮೊದಲನೇ ಪಂದ್ಯ ನಡೆಯಲಿದ್ದು, ಗುರುವಾರ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಭ್ಯಾಸ ನಡೆಸಿದವು.
ತವರಿನಲ್ಲಿ ಸತತವಾಗಿ ಸರಣಿ ಜಯ ಸಾಧಿಸುತ್ತಿರುವ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಜಯದ ಓಟವನ್ನು ಮುಂದುವರೆಸುವ ವಿಶ್ವಾಸದಲ್ಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ಸತತವಾಗಿ ಮೂರು ಟಿ20 ಸರಣಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್ ಪ್ರವಾಸದ ವೇಳೆ ಟಿ20 ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿತ್ತು. ತವರಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಸುಲಭವಾಗಿ ಸರಣಿಯನ್ನು ಗೆಲ್ಲುವ ಲೆಕ್ಕಾಚಾರದಲ್ಲಿದೆ.
ಇನ್ನು ಏಕದಿನ ಸರಣಿಯಲ್ಲಿ ಸೋಲುವ ಮೂಲಕ ಐಸಿಸಿ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನವನ್ನು ಕಳೆದುಕೊಂಡಿರುವ ನ್ಯೂಜಿಲೆಂಡ್ ಟಿ20 ಸರಣಿಯನ್ನು ಗೆದ್ದು ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ.
ಮೊದಲ ಪಂದ್ಯಕ್ಕೆ ಮುನ್ನ ಉಭಯ ತಂಡಗಳು ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದವು. ಇಂದೋರ್ ನಲ್ಲಿ ಕೊನೆಯ ಏಕದಿನ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಸೇರಿದಂತೆ ಹಲವು ಆಟಗಾರರು ನೇರವಾಗಿ ರಾಂಚಿಗೆ ಪ್ರಯಾಣಿಸಿದ್ದು, ತಂಡವನ್ನು ಸೇರಿಕೊಂಡಿದ್ದಾರೆ.

ತಂಡದ ಆಯ್ಕೆಯೇ ಭಾರತಕ್ಕೆ ಸವಾಲು
ರಾಹುಲ್ ತ್ರಿಪಾಠಿ, ಪೃಥ್ವಿ ಶಾ, ಶುಭಮನ್ ಗಿಲ್, ಶಿವಂ ಮಾವಿ, ಮುಖೇಶ್ ಕುಮಾರ್ ಸೇರಿದಂತೆ ಹಲವು ಪ್ರತಿಭಾವಂತ ಆಟಗಾರರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಆಡುವ ಬಳಗವನ್ನು ಆಯ್ಕೆ ಮಾಡುವುದು ನಾಯಕ ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ದ್ರಾವಿಡ್ ಅವರಿಗೆ ಸವಾಲಾಗಿದೆ.
ಆಲ್‌ರೌಂಡರ್ ಸ್ಥಾನಕ್ಕಾಗಿ ವಾಷಿಂಗ್ಟನ್ ಸುಂದರ್ ಮತ್ತು ದೀಪಕ್ ಹೂಡಾ ನಡುವೆ ಸ್ಪರ್ಧೆ ಉಂಟಾಗಲಿದೆ. ಸ್ಪಿನ್ನರ್ ಸ್ಥಾನಕ್ಕಾಗಿ ಚಹಾಲ್ ಮತ್ತು ಕುಲದೀಪ್ ನಡುವೆ ಸ್ಪರ್ಧೆ ಇದ್ದು, ಒಬ್ಬರಿಗೆ ಮಾತ್ರ ಅವಕಾಶ ಸಿಗುವ ಸಾಧ್ಯತೆ ಇದೆ.

ಮಿಚೆಲ್ ಸ್ಯಾಂಟ್ನರ್ ನಾಯಕ
ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರೆ. ಆಲ್‌ರೌಂಡರ್ ಸ್ಯಾಂಟ್ನರ್ ತಂಡವನ್ನು ಸೋಲಿನ ಸುಳಿಯಿಂದ ತಪ್ಪಿಸುವ ಆಲೋಚನೆಯಲ್ಲಿದ್ದಾರೆ.
ಬಲಿಷ್ಠ ಬೌಲಿಂಗ್ ಮತ್ತು ಬ್ಯಾಟಿಂಗ್ ಪಡೆಯನ್ನು ಹೊಂದಿರುವ ನ್ಯೂಜಿಲೆಂಡ್ ಭಾರತದ ಯುವ ತಂಡವನ್ನು ಹೇಗೆ ಎದುರಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಟಿ20 ಸರಣಿಗೆ ಭಾರತ, ನ್ಯೂಜಿಲೆಂಡ್ ತಂಡ
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ , ಪೃಥ್ವಿ ಶಾ, ಮುಖೇಶ್ ಕುಮಾರ್
ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ , ಬ್ಲೇರ್ ಟಿಕ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications