IND vs NZ 1st T20: ಪಂದ್ಯದ ಸಮಯ, ನೇರಪ್ರಸಾರ, ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್
ಫೆಬ್ರವರಿ 7 ರಂದು ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸಲಿದೆ. ಈ ವಿಶ್ವಕಪ್‌ನಲ್ಲಿ 20 ತಂಡಗಳು ಭಾಘವಹಿಸಲಿವೆ. ಹಲವು ತಂಡಗಳು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಆಡುವ ಮೂಲಕ ಮೆಗಾ ಟೂರ್ನಿಗೆ ಅಭ್ಯಾಸವನ್ನು ಆರಂಭಿಸಿವೆ. ಅಂತೆಯೇ, ಭಾರತ ಸಹ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪೂರ್ವ ಸಿದ್ಧತೆಗಾಗಿ ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನು ಆಡಲಿದೆ. ಈ ಸರಣಿ ಭಾರತದ ಪಾಲಿಗೆ ಮಹತ್ವದಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನು ಕಣಕ್ಕೆ ಇಳಿಸಲು ಸಜ್ಜಾಗಿದೆ. ಈ ಸರಣಿ ಟಿ20 ವಿಶ್ವಕಪ್‌ಗೆ ತಂಡವನ್ನು ಸಿದ್ಧಗೊಳಿಸಿಕೊಳ್ಳಲು ಮಹತ್ವದಾಗಿದೆ. ಹೀಗಾಗಿ ಅಳೆದು ತೂಗಿ ಸೂರ್ಯಕುಮಾರ್ ಯಾದವ್ ಆಟಗಾರರಿಗೆ ಮಣೆ ಹಾಕಲಿದ್ದಾರೆ. ಇನ್ನು ತಂಡದ ಸಮಲೋತನ ಸರಿಪಡಿಸಿಕೊಳ್ಳಲು ಇದು ಒಳ್ಳೆಯ ಅವಕಾಶವಾಗಿದೆ.

ಟಿ20 ವಿಶ್ವಕಪ್‌ಗೂ ಮುನ್ನ ಫಾರ್ಮ್ ಇಲ್ಲದ ಆಟಗಾರರು ಲಯಕ್ಕೆ ಮರಳಲು ಇದು ಬೆಸ್ಟ್ ವೇದಿಕೆ ಆಗಿದೆ. ಎಲ್ಲ ಆಟಗಾರರು ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ತವರಿನಲ್ಲಿ ವಿಶ್ವಕಪ್ ಗೆಲ್ಲುವ ಕನಸು ನನಸಾಗುತ್ತದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪ್ರತಿ ಆಟಗಾರರು ತಮ್ಮ ಜವಾಬ್ದಾರಿಯನ್ನು ಅರಿತು ಬ್ಯಾಟ್ ಮಾಡಬೇಕಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ಹೋರಾಟ ಮಹತ್ವ ಪಡೆದಿದೆ.
ಟಿ20 ಪಂದ್ಯಗಳ ಅಂಕಿ ಅಂಶಗಳಲ್ಲಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಆದರೆ ಏಕದಿನ ಸರಣಿಯ ಸೋಲು ತಂಡಕ್ಕೆ ಕಾಡಲಿದೆ. ಈ ಸೋಲಿನ ಕಹಿಯನ್ನು ಮರೆಸಿ, ಗೆಲುವಿನ ಟ್ರ್ಯಾಕ್‌ಗೆ ಮರಳಲು ಇದು ಒಳ್ಳೆಯ ಅವಕಾಶ. ಈ ಪಂದ್ಯದ ನೇರಪ್ರಸಾರ, ಆರಂಭವಾಗುವ ಸಮಯದ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಪಿಚ್ ಹೇಗಿರಲಿದೆ?
ನಾಗ್ಪುರದ ವಿಸಿಎ ಕ್ರೀಡಾಂಗಣದ ಪಿಚ್ ಉತ್ತಮ ವೇಗ ಮತ್ತು ಬೌನ್ಸ್ ಹೊಂದಿರಲಿದ್ದು, ಬ್ಯಾಟರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಅಲ್ಲದೆ ಸ್ಪಿನ್ ಬೌಲರ್‌ಗಳಿಗೆ ಸ್ವಲ್ಪ ತಿರುವು ಕಾಣಿಸಿಕೊಳ್ಳಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇದ್ದು, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡುವ ಸಾಧ್ಯತೆ ಇದೆ.

ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ನೋಡಬಹುದು?
ಭಾರತ, ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.
ಪಂದ್ಯ ಆರಂಭವಾಗುವ ಸಮಯ ಯಾವಾಗ?
ಭಾರತ, ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಸಂಜೆ 7ಕ್ಕೆ ಆರಂಭವಾಗಲಿದ್ದು, ಟಾಸ್ ಅರ್ಧಗಂಟೆ ಮೊದಲು ನಡೆಯಲಿದೆ.
ಟೀಮ್ ಇಂಡಿಯಾದ ಪರ ಆರಂಭಿಕರಾಗಿ ಕಣಕ್ಕೆ ಇಳಿಯುವುದು ಯಾರು?
ಭಾರತದ ಪರ ಅಭಿಷೇಕ್ ಶರ್ಮಾ ಅವರೊಂದಿಗೆ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.
ನ್ಯೂಜಿಲೆಂಡ್ ತಂಡದ ಆಡುವ ಹನ್ನೊಂದರ ಬಳಗ ಹೇಗಿರಲಿದೆ?
ಮಿಚೆಲ್ ಸ್ಯಾಂಟ್ನರ್ (ನಾಯಕ), ಡೆವೊನ್ ಕಾನ್ವೇ, ಬೆವನ್ ಜೇಕಬ್ಸ್, ಟಿಮ್ ರಾಬಿನ್ಸನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಜ್ಯಾಕ್ ಫೋಕ್ಸ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಾಚಿನ್ ರವೀಂದ್ರ, ಜಾಕೋಬ್ ಡಫಿ, ಕೈಲ್ ಜೇಮಿಸನ್, ಇಶ್ ಸೋಧಿ, ಮ್ಯಾಟ್ ಹೆನ್ರಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications