ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs NZ 1st ODI: ಟೀಮ್ ಇಂಡಿಯಾಗೆ ಗೆಲ್ಲಲು ಸವಾಲಿನ ಗುರಿ ನೀಡಿದ ನ್ಯೂಜಿಲೆಂಡ್

Ind vs NZ 1st T20I, Team India need 177 runs to win against New Zealand in 1st T20I

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಟಾಸ್ ಗೆದ್ದ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾ ಸಾಕಷ್ಟು ಏರಿಳಿತಗಳನ್ನು ಕಂಡಿತು. ಅದರಲ್ಲೂ ಅಂತಿಮ ಓವರ್‌ನಲ್ಲಿ ಬರೊಬ್ಬರಿ 27 ರನ್‌ಗಳನ್ನು ಎದುರಾಳಿಗೆ ಬಿಟ್ಟುಕೊಟ್ಟ ಕಾರಣ ಟೀಮ್ ಇಂಡಿಯಾ ಈ ಪಂದ್ಯವನ್ನು ಗೆಲ್ಲಲು 177 ರನ್‌ಗಳಿಸುವ ಕಠಿಣ ಸವಾಲು ಸ್ವೀಕರಿಸಿದೆ.

ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಮೊದಲ ವಿಕೆಟ್‌ಗೆ 43 ರನ್‌ಗಳ ಉತ್ತಮ ಆರಂಬವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಆರಂಭದಲ್ಲಿ ಫಿನ್ ಅಲೆನ್ ಸ್ಪೋಟಕ ಪ್ರದರ್ಶನ ನೀಡುವ ಸೂಚನೆ ನಿಡಿದರು ಕೂಡ ಅವರನ್ನು 35 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಭಾರತ ಯಶಸ್ವಿಯಾಯಿತು. ಆದರೆ ಮತ್ತೋರ್ವ ಆರಂಭಿಕ ಆಟಗಾರ ಡೆವೋನ್ ಕಾನ್ವೆ ಭರ್ಜರಿ ಅರ್ಧ ಶತಕ ಸಿಡಿಸಿ ಅಂತಿಮ ಹಂತದಲ್ಲಿ ವಿಕೆಟ್ ಕಳೆದುಕೊಂಡರು.

ಇನ್ನು ನ್ಯೂಜಿಲೆಂಡ್‌ ತಂಡದ ಮತ್ತೋರ್ವ ಮಧ್ಯಮ ಕ್ರಮಾಂಕದ ಆಟಗಾರ ಡ್ಯಾರೆಲ್ ಮಿಚೆಲ್ ಅಂತಿಮ ಹಂತದಲ್ಲಿ ಸ್ಫೋಟಕ ಪ್ರದರ್ಶನ ನೀಡಿದ್ದು ನ್ಯೂಜಿಲೆಂಡ್ 170ರ ಗಡಿ ದಾಟಲು ಕಾರಣವಾದರು. 30 ಎಸೆತಗಳಲ್ಲಿ 59 ರನ್‌ಗಳಿಸಿದ ಮಿಚೆಲ್ ಭಾರತದ ಯುವ ವೇಗಿ ಅರ್ಷ್‌ದೀಪ್ ಸಿಂಗ್ ಎಸೆದ ಅಂತಿಮ ಓವರ್‌ನಲ್ಲಿ ಭರ್ಜರಿ 27 ರನ್ ಕೊಳ್ಳೆ ಹೊಡೆದರು. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು 176 ರನ್‌ಗಳನ್ನು ಗಳಿಸಿದೆ.

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ಭಾರತ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್

Story first published: Friday, January 27, 2023, 20:59 [IST]
Other articles published on Jan 27, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X