For Quick Alerts
ALLOW NOTIFICATIONS  
For Daily Alerts
 

ಮೊದಲ ಟೆಸ್ಟ್: ಐಯ್ಯರ್, ಸಾಹಾ ಸಾಹಸ, ಸುಸ್ಥಿತಿಯಲ್ಲಿ ಭಾರತ: ಕಿವಿಸ್ ಗೆಲುವಿಗೆ 284 ರನ್ ಗುರಿ

Ind vs NZ 1st Test: New zealand need 280 runs to win in last day against India

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಾಟ ಅಂತ್ಯವಾಗಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಸುಸ್ಥಿತಿಯಲ್ಲಿದ್ದು ಅಂತಿಮ ದಿನ ಗೆಲುವಿನ ನಿರೀಕ್ಷೆಯಲ್ಲಿದೆ. ಟೀಮ್ ಇಂಡಿಯಾ ಪರವಾಗಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ಶ್ರೇಯಸ್ ಐಯ್ಯರ್ ಮಿಂಚಿದ್ದಾರೆ. ಜೊತೆಗೆ ವೃದ್ಧಿಮಾನ್ ಸಾಹಾ ಕೂಡ ಅಂತಿಮ ಹಂತದಲ್ಲಿ ನೀಡಿದ ಅಮೋಘ ಪ್ರದರ್ಶನ ತಂಡದ ಮೇಲುಗೈಗೆ ಪ್ರಮುಖ ಕಾರಣವಾಗಿದೆ. ಆರ್ ಅಶ್ವಿನ್ ಕೂಡ ಮಹತ್ವದ ಕೊಡುಗೆ ನೀಡಿದ್ದಾರೆ.

14 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಲ್ಲಿಂದ ನಾಲ್ಕನೇ ದಿನದಾಟವನ್ನು ಆರಂಭಿಸಿದ ಟೀಮ್ ಇಂಡಿಯಾಗೆ ನ್ಯೂಜಿಲೆಂಡ್ ಬೌಲರ್‌ಗಳು ಇಂದು ಕೂಡ ಆಘಾತ ನೀಡುತ್ತಾ ಸಾಗಿದರು. ಭಾರತದ ದಾಂಡಿಗರ ವಿರುದ್ಧ ಕೇನ್ ವಿಲಿಯಮ್ಸನ್ ಪಡೆ ಸಂಪೂರ್ಣ ಮೇಲುಗೈ ಸಾಧಿಸುತ್ತಾ ಸಾಗಿದರು.

ಎರಡನೇ ಇನ್ನಿಂಗ್ಸ್‌ನಲ್ಲೂ ಸೌಥಿ ಜೇಮಿಸನ್ ಅಬ್ಬರ: ನ್ಯೂಜಿಲೆಂಡ್ ಪರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅನುಭವಿ ಟಿಮ್ ಸೌಥಿ ಹಾಗೂ ಕೇನ್ ಜೇಮಿಸನ್ ಅಬ್ಬರಿಸಿದರು. ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಈ ಇಬ್ಬರು ವೇಗಿಗಳ ದಾಳಿಗೆ ನಲುಗಿ ಆಘಾತ ಅನುಭವಿಸಿದರು. ಹೀಗಾಗಿ ಭಾರತ 51 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಭಾರತ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗುವ ಭೀತಿಯನ್ನು ಎದುರಿಸಿತ್ತು. ಆದರೆ ಶ್ರೇಯಸ್ ಅಯ್ಯರ್ ಹಾಗೂ ಆರ್ ಅಶ್ವಿನ್ ಜೋಡಿ ಟೀಮ್ ಇಂಡಿಯಾವನ್ನು ಕುಸಿತದಿಂದ ಪಾರು ಮಾಡಿತು.

ಐಯ್ಯರ್, ಅಶ್ವಿನ್, ಸಾಹಾ ದೊಡ್ಡ ಹೋರಾಟ: ಟೀಮ್ ಇಂಡಿಯಾ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿರು ಶ್ರೇಯಸ್ ಐಯ್ಯರ್ ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಐಯ್ಯರ್ ಎರಡನೇ ಇನ್ನಿಂಗ್ಸ್‌ನಲ್ಲಿ 65 ರನ್‌ಗಳ ಕೊಡುಗೆ ನೀಡಿದರು. ನಂತರ ಶ್ರೇಯಸ್ ಐಯ್ಯರ್ ಜೇಮಿಸನ್ ಎಸೆತಕ್ಕೆ ಔಟಾದರು. ಇದಕ್ಕೂ ಮುನ್ನ ಶ್ರೇಯಸ್ ಐಯ್ಯರ್ ಜೊತೆ ಅರ್ಧ ಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದ ಆರ್ ಅಶ್ವಿನ್ 32 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು. ನಂತರ ವೃದ್ಧಿಮಾನ್ ಸಾಹಾ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸಾಹಾ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಅಜೇಯವಾಗಿ ಉಳಿದಿದ್ದಾರೆ. ಸಾಹಾ 61 ರನ್‌ಗಳಿಸಿದ್ದರೆ ಅಕ್ಷರ್ ಪಟೇಲ್ 28 ರನ್‌ಗಳಿಸಿ ಅಜೇಯವಾಗಿ ಉಳಿದರು.

234 ರನ್‌ಗಳಿಸಿ ಡಿಕ್ಲೇರ್: ಟೀಮ್ ಇಂಡಿಯಾ ಈ ಪಂದ್ಯದಲ್ಲಿ 234 ರನ್‌ಗೆ 7 ವಿಕೆಟ್ ಕಳೆದುಕೊಂಡಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಎದುರಾಳಿ ನ್ಯೂಜಿಲೆಂಡ್‌ಗೆ 284 ರನ್‌ಗಳ ಗುರಿಯನ್ನು ನಿಗದಿಪಡಿಸಿದೆ. ಅಂತಿಮ ದಿನದಾಟದಲ್ಲಿ ನ್ಯೂಜಿಲೆಂಡ್ ತಂಡವನ್ನು ಶೀಘ್ರವಾಗಿ ಆಲೌಟ್ ಮಾಡಿ ಗೆಲುವು ಸಾಧಿಸಬೇಕೆಂಬ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಇದೆ. ಈ ಮಧ್ಯೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿರುವ ನ್ಯೂಜಿಲೆಂಡ್ ತಂಡ ಆರಂಭದಲ್ಲಿಯೇ ಒಂದು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ. ವಿಲ್ ಯಂಗ್ 2 ರನ್‌ಗಳಿಗೆ ಔಟ್ ಆಗಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡ ನಾಲ್ಕು ಓವರ್‌ಗಳಲ್ಲಿ 4 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. ಹೀಗಾಗಿ ಅಂತಿಮ ದಿನದಾಟ ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್
ಬೆಂಚ್: ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೀಕರ್ ಭರತ್

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ವಿಲಿಯಂ ಸೊಮರ್ವಿಲ್ಲೆ
ಬೆಂಚ್: ಮಿಚೆಲ್ ಸ್ಯಾಂಟ್ನರ್, ನೀಲ್ ವ್ಯಾಗ್ನರ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್

Story first published: Sunday, November 28, 2021, 17:25 [IST]
Other articles published on Nov 28, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+