IND vs NZ 2nd ODI: ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆ?; ಸಂಭಾವ್ಯ ತಂಡಗಳು

ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ಭಾನುವಾರ, ನವೆಂಬರ್ 27ರಂದು ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಪರಸ್ಪರ ಹಣಾಹಣಿ ನಡೆಸಲಿವೆ.
ಶಿಖರ್ ಧವನ್ ನಾಯಕತ್ವದ ಭಾರತ ತಂಡವು ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಏಳು ವಿಕೆಟ್‌ಗಳಿಂದ ಸೋತ ನಂತರ, ತಮ್ಮ ಅಭಿಯಾನವನ್ನು ಕಳಪೆಯಾಗಿ ಪ್ರಾರಂಭಿಸಿತು. ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಮತ್ತು ಶಿಖರ್ ಧವನ್ ಅವರ ಅರ್ಧಶತಕ ಗಳಿಸಿದ ನಂತರವೂ ಭಾರತದ ಕಳಪೆ ಬೌಲಿಂಗ್ ಪ್ರದರ್ಶನದಿಂದ ಸೋಲಬೇಕಾಯಿತು.

ಶಾರ್ದೂಲ್ ಠಾಕೂರ್ ಅವರ ಬದಲಿಯಾಗಿ ದೀಪಕ್ ಚಹಾರ್
ಯುವ ವೇಗಿ ಉಮ್ರಾನ್ ಮಲಿಕ್ ಅವರು ತಮ್ಮ ಏಕದಿನ ಚೊಚ್ಚಲ ಪಂದ್ಯದ ಆರಂಭಿಕ ಐದು ಓವರ್‌ಗಳಲ್ಲಿ ಎರಡು ನಿರ್ಣಾಯಕ ವಿಕೆಟ್‌ಗಳನ್ನು ಪಡೆದು ಒತ್ತಡ ಹೇರಿದರು. ಆದರೆ ಮಲಿಕ್ ಅವರ ಎರಡನೇ ಸ್ಪೆಲ್‌ನಲ್ಲಿ ಹೆಚ್ಚಿನ ರನ್ ಬಿಟ್ಟುಕೊಟ್ಟರು. ಇನ್ನು ಶಾರ್ದೂಲ್ ಠಾಕೂರ್ ಅವರ ಬೌಲಿಂಗ್‌ನಲ್ಲಿ ಟಾಮ್ ಲಾಥಮ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ ರನ್ ಗಳಿಸಿದರು. ಹೀಗಾಗಿ ಶಾರ್ದೂಲ್ ಠಾಕೂರ್ ಅವರ ಬದಲಿಯಾಗಿ ದೀಪಕ್ ಚಹಾರ್ ಅವರನ್ನು ಆಡಿಸಬಹುದು.
ಭಾರತ ತಂಡದ ಮ್ಯಾನೇಜ್‌ಮೆಂಟ್ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ದೀಪಕ್ ಚಹಾರ್‌ಗೆ ಅವಕಾಶ ನೀಡುವ ಬಗ್ಗೆ ಯೋಚಿಸಬಹುದು. ಪ್ರವಾಸಿ ತಂಡದಲ್ಲಿ ದೀಪಕ್ ಹೂಡಾ ಮತ್ತು ಕುಲದೀಪ್ ಯಾದವ್ ಕೂಡ ಇದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟಾಮ್ ಲ್ಯಾಥಮ್ ಅಜೇಯ 145 ರನ್
ಮತ್ತೊಂದೆಡೆ, ಆತಿಥೇಯ ನ್ಯೂಜಿಲೆಂಡ್ ತಂಡವು ತಮ್ಮ ಗೆಲುವಿನ ಸಂಯೋಜನೆಯನ್ನು ಬದಲಿಸಲು ಯೋಚನೆ ಮಾಡುವುದಿಲ್ಲ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಾರ್ಟಿನ್ ಗಪ್ಟಿಲ್ ಅವರನ್ನು ಅಗ್ರ ಕ್ರಮಾಂಕದಲ್ಲಿ ಬದಲಿಸಿದ ನಂತರ ಫಿನ್ ಅಲೆನ್ ಅವರು ಆಡುವುದನ್ನು ನೋಡಬಹುದು.
ಕಳೆದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಮತ್ತು ಟಾಮ್ ಲ್ಯಾಥಮ್ ತಮ್ಮ ತಂಡವನ್ನು ಗೆಲುವಿನ ಗಡಿ ಮುಟ್ಟಿಸಿದರು. ಟಾಮ್ ಲ್ಯಾಥಮ್ ಅಜೇಯ 145 ರನ್ ಬಾರಿಸಿದರು ಮತ್ತು ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಬ್ಯಾಟರ್‌ನಿಂದ ಗರಿಷ್ಠ ವೈಯಕ್ತಿಕ ಸ್ಕೋರ್ ನಾಥನ್ ಆಸ್ಟಲ್ ಅವರ 23 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

ಭಾರತ ಮತ್ತು ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications