For Quick Alerts
ALLOW NOTIFICATIONS  
For Daily Alerts
 

IND vs NZ 2nd ODI: ಸರಣಿ ಗೆಲುವಿನ ಕನಸಿನಲ್ಲಿ ಭಾರತ; ಪಂದ್ಯದ ಸಮಯ, ನೇರ ಪ್ರಸಾರದ ಮಾಹಿತಿ

ರಾಜ್‌ಕೋಟ್: ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ ತಂಡ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಬುಧವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲುವು ದಾಖಲಿಸಿದ ಸರಣಿಯನ್ನು ವಶಕ್ಕೆ ಪಡೆಯುವ ಕನಸನ್ನು ಶುಭಮನ್‌ ಗಿಲ್‌ ಪಡೆ ಕಾಣುತ್ತಿದೆ.

ಭಾರತ ಹಾಗೂ ನ್ಯೂಜಿಲೆಂಡ್‌ ನಡುವಣ ಪಂದ್ಯದ ಮೇಲೆ ಎಲ್ಲರ ಚಿತ್ರ ನೆಟ್ಟಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ವಿರಾಟ್‌ ಕೊಹ್ಲಿ ಅವರ ಮೇಲೆ ನೆಟ್ಟಿದೆ. ಇವರು ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ 93 ರನ್ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿ ಅಬ್ಬರಿಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

Ind vs NZ 2nd ODI Gill-led India Aims for Series Win Check Live Streaming and Broadcast Details

ಟೀಮ್ ಇಂಡಿಯಾದ ಆರಂಭಿಕ ಆಟಗಾರರಾ ಶುಭಮನ್‌ ಗಿಲ್ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಮಾಜಿ ನಾಯಕ ರೋಹಿತ್‌ ಶರ್ಮಾ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಮೊದಲ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡುವಲ್ಲಿ ವಿಫಲರಾದ ರೋಹಿತ್, ಎರಡನೇ ಏಕದಿನ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟುವ ಅನಿವಾರ್ಯತೆ ಇದೆ. ಇವರು ರಾಜ್‌ಕೋಟ್‌ನಲ್ಲಿ ನ್ಯೂಜಿಲೆಂಡ್ ಬೌಲರ್‌ಗಳನ್ನು ಆಡಬೇಕಿದೆ.

ಗಾಯದ ಬಳಿಕ ಮೈದಾನಕ್ಕೆ ಮರಳಿರುವ ಶ್ರೇಯಸ್‌ ಅಯ್ಯರ್ ಮೊದಲ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಕೆಎಲ್ ರಾಹುಲ್‌ ಜವಾಬ್ದರಿಯುತ ಬ್ಯಾಟಿಂಗ್ ನಡೆಸುವ ಅನಿವಾರ್ಯತೆ ಇದೆ. ಇನ್ನು ವಾಷಿಂಗ್ಟನ್ ಸುಂದರ್ ಗಾಯಕ್ಕೆ ತುತ್ತಾಗಿದ್ದು, ಇವರ ಸ್ಥಾನದಲ್ಲಿ ನಿತೀಶ್‌ ಕುಮಾರ್ ರೆಡ್ಡಿ ಹಾಗೂ ಆಯುಷ್ ಬದೋನಿ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು. ಆಲ್‌ರೌಂಡರ್ ರವೀಂದ್ರ ಜಡೇಜಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

Ind vs NZ 2nd ODI Gill-led India Aims for Series Win Check Live Streaming and Broadcast Details

ವೇಗದ ಬೌಲರ್‌ಗಳಾಗಿ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ. ನುರಿತ ಸ್ಪಿನ್ ಬೌಲರ್ ರೂಪದಲ್ಲಿ ಕುಲ್‌ದೀಪ್ ಯಾದವ್ ಕಣಕ್ಕೆ ಇಳಿಯಲಿದ್ದಾರೆ.

ಭಾರತ ಸಂಭಾವ್ಯ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ/ಆಯುಷ್ ಬದೋನಿ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಗೆಲುವಿನ ಕನಸು

ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಮಾಡಿದ ನ್ಯೂನತೆಗಳನ್ನು ಮೆಟ್ಟಿನಿಂತು ಆಡಬೇಕಿದೆ. ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಅನಿವಾರ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್ ಮಿಚೆಲ್ ಮೊದಲ ಪಂದ್ಯದಲ್ಲಿ ನೀಡಿದ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್ ಅಬ್ಬರದ ಆಟವನ್ನು ಆಡಿದರೆ ಗೆಲುವಿನ ನಗೆ ಬೀರಬಹುದು. ಉಳಿದಂತೆ ನ್ಯೂಜಿಲೆಂಡ್ ಬೌಲರ್‌ಗಳು ಪವರ್ ಪ್ಲೇ, ಮಿಡ್ಲ್ ಓವರ್‌, ಡೆತ್ ಓವರ್‌ಗಳಲ್ಲಿ ಬಿಗಿವಿನ ದಾಳಿ ನಡೆಸಿ ಎದುರಾಳಿ ತಂಡಕ್ಕೆ ಕಾಟ ನೀಡಬೇಕಿದೆ. ಮೊದಲ ಪಂದ್ಯದಲ್ಲಿ 4 ವಿಕೆಟ್‌ ಪಡೆದಿದ್ದ ಕೈಲ್ ಜಾಮಿಸನ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಉಳಿದ ಬೌಲರ್‌ ಸ್ಥಿರ ಬೌಲಿಂಗ್ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ.

ನ್ಯೂಜಿಲೆಂಡ್ ಸಂಭಾವ್ಯ ತಂಡ: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಮಿಚೆಲ್ ಹೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜಾಮಿಸನ್, ಜಾಕ್ ಫೌಲ್ಕ್ಸ್, ಆದಿತ್ಯ ಅಶೋಕ್/ಜೇಡನ್ ಲೆನಾಕ್ಸ್.

ಪಂದ್ಯ ನಡೆಯುವುದು ಯಾವಾಗ?

ಭಾರತೀಯ ಕಾಲಾಮಾನದಂತೆ ಭಾರತ, ನ್ಯೂಜಿಲೆಂಡ್ ನಡುವಣ ಎರಡನೇ ಏಕದಿನ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಅರ್ಧಗಂಟೆ ಮುಂಚಿತವಾಗಿ ಟಾಸ್‌ ನಡೆಯಲಿದೆ.

ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?

ಭಾರತ, ನ್ಯೂಜಿಲೆಂಡ್ ನಡುವಣ ಮೊದಲ ಎರಡನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ ವರ್ಕ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲಿ ನೋಡಬಹುದು.

Story first published: Wednesday, January 14, 2026, 6:30 [IST]
Other articles published on Jan 14, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+