ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ 2nd ODI: ಮಳೆಯಿಂದ 2ನೇ ಏಕದಿನ ಪಂದ್ಯ ರದ್ದು; ಸರಣಿಯಲ್ಲಿ ನ್ಯೂಜಿಲೆಂಡ್ ಮುನ್ನಡೆ

IND vs NZ: 2nd ODI Match Abandoned Due To Rain; New Zealand Lead In the Series

ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆತಿಥೇಯ ನ್ಯೂಜಿಲೆಂಡ್ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ಭಾರತ ತಂಡ 12.5 ಓವರ್‌ಗಳಲ್ಲಿ 1 ವಿಕೆಟ್‌ಗೆ 89 ರನ್ ಗಳಿಸಿದ್ದಾಗ ಎರಡನೇ ಬಾರಿ ಮಳೆ ಆಟಕ್ಕೆ ಅಡ್ಡಿಪಡಿಸಿದಾಗ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಿತು. ಮೊದಲ ಬಾರಿಗೆ ಮಳೆಯಿಂದಾಗಿ ಪಂದ್ಯ ನಿಂತಾಗ ಪ್ರತಿ ತಂಡಕ್ಕೆ 29 ಓವರ್‌ಗಳಿಗೆ ಇಳಿಸಲಾಗಿತ್ತು.

ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡರು. ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶಿಖರ್ ಧವನ್ 3 ರನ್ ಗಳಿಸಿ ಔಟಾಗಿದ್ದರು. ಶುಭಮನ್ ಗಿಲ್ 45 ರನ್ ಮತ್ತು ಸೂರ್ಯಕುಮಾರ್ ಯಾದವ್ 34 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.

World Cup 2023: ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಎಚ್ಚರಿಕೆಗೆ ಖಡಕ್ ತಿರುಗೇಟು ಕೊಟ್ಟ ಕ್ರೀಡಾ ಸಚಿವWorld Cup 2023: ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಎಚ್ಚರಿಕೆಗೆ ಖಡಕ್ ತಿರುಗೇಟು ಕೊಟ್ಟ ಕ್ರೀಡಾ ಸಚಿವ

ಎರಡನೇ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿತ್ತು. ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರಿಗೆ ಅವಕಾಶ ನೀಡಿತ್ತು. ಇನ್ನು ಆತಿಥೇಯ ನ್ಯೂಜಿಲೆಂಡ್ ತಂಡವು ಒಂದು ಬದಲಾವಣೆ ಮಾಡಿದ್ದರು. ಆಡಮ್ ಮಿಲ್ನೆ ಬದಲಿಗೆ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಆಡಿಸಲಾಗಿತ್ತು.

Story first published: Sunday, November 27, 2022, 13:35 [IST]
Other articles published on Nov 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X