IND vs NZ 2nd ODI: ಎರಡನೇ ಏಕದಿನ ಪಂದ್ಯಕ್ಕೆ ಮತ್ತೆ ಮಳೆ ಕಾಟ; ತಾತ್ಕಾಲಿಕ ಸ್ಥಗಿತ

ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯಕ್ಕೆ ಮಳೆ ಕಾಟ ಎದುರಾಗಿದ್ದು, ಭಾರತದ ಬ್ಯಾಟಿಂಗ್ ವೇಳೆ ಜಿಟಿಜಿಟಿ ಮಳೆಯ ಪರಿಣಾಮ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಎರಡನೇ ಬಾರಿ ಮಳೆ ಬಂದು ಪಂದ್ಯ ಸ್ಥಗಿತಗೊಂಡಾಗ 12.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ರನ್ ಗಳಿಸಿದೆ.
ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶಿಖರ್ ಧವನ್ 3 ರನ್ ಗಳಿಸಿ ಔಟಾಗಿದ್ದು, ಶುಭಮನ್ ಗಿಲ್ 45 ರನ್ ಮತ್ತು ಸೂರ್ಯಕುಮಾರ್ ಯಾದವ್ 34 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಪ್ರವಾಸಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರಿಗೆ ಅವಕಾಶ ನೀಡಿದೆ. ಇನ್ನು ಆತಿಥೇಯ ನ್ಯೂಜಿಲೆಂಡ್ ತಂಡವು ಒಂದು ಬದಲಾವಣೆ ಮಾಡಿದ್ದು, ಆಡಮ್ ಮಿಲ್ನೆ ಬದಲಿಗೆ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಆಡಿಸುತ್ತಿದೆ.
ಭಾರತ vs ನ್ಯೂಜಿಲೆಂಡ್ ಆಡುವ 11ರ ಬಳಗ
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲ್ಯೂಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications