For Quick Alerts
ALLOW NOTIFICATIONS  
For Daily Alerts
 

ಇಂದು ಭಾರತ ಮುಟ್ಟಿದ್ದೆಲ್ಲಾ ಚಿನ್ನವಾಗಿತ್ತು ಎಂದ ಕಿವೀಸ್ ನಾಯಕ ಟಾಮ್ ಲ್ಯಾಥಮ್

IND vs NZ 2nd ODI: New Zealand skipper Tom Latham praises Indian side said Everything India did worked

ಭಾರತ ಹಾಗೂ ನ್ಯೂಜಿಲೆಂಡ್ ತಮಡಗಳ ನಡುವಿನ ಏಕದಿನ ಸರಣಿಯ ಮೊದಲ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸರ್ವಾಂಗೀಣ ಪ್ರದರ್ಶನ ನಿಡಿದ್ದು ಭರ್ಜರಿ ಗೆಲುವು ಸಾಧಿಸಿದೆ. ಮೊದಲುಇಗೆ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಕೇವಲ 108 ರನ್‌ಗಳಿಗೆ ಆಲೌಟ್ ಮಾಡಿತ್ತು. ಬಳಿಕ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿರುವ ಭಾರತ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ.

ಈ ಮೂಲಕ ಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಸರಣಿಯ ಅಂತಿಮ ಪಂದ್ಯ ಇನ್ನೂ ಬಾಕಿಯುವಂತೆಯೇ ಈ ಸಾಧನೆ ಮಾಡಿದೆ. ಇನ್ನು ಈ ಪಂದ್ಯದ ಬಳಿಕ ಮಾತನಾಡಿರುವ ನ್ಯೂಜಿಲೆಂಡ್ ತಂಡದ ಹಂಗಾಮಿ ನಾಯಕ ಟಾಮ್ ಲ್ಯಾಥಮ್ ಭಾರತದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಇಂದು ಭಾರತ ತಂಡ ಎಲ್ಲವೂ ಅಂದುಕೊಂಡಂತೆಯೇ ನಡೆಯಿತು ಎಂದಿದ್ದಾರೆ. ಇನ್ನು ಮುಂದುವರಿದ ಅವರು ತಮ್ಮ ತಂಡದ ಅಗ್ರ ಕ್ರಮಾಂಕದ ಬ್ಯಾಟಿಂಗ್ ಇಂದು ಪೈಫಲ್ಯ ಅನುಭವಿಸಿತು ಎಂದಿದ್ದಾರೆ.

"ಬ್ಯಾಟಿಂಗ್‌ನಲ್ಲಿ ಅಗ್ರ ಕ್ರಮಾಂಕದಿಂದ ನೈಜ ಸಾಮರ್ಥ್ಯ ಬಾರಲಿಲ್ಲ. ಭಾರತ ಸೂಕ್ತವಾದ ಸ್ಥಳದಲ್ಲಿಯೇ ಬೌಲಿಂಗ್ ನಡೆಸುತ್ತಿತ್ತು. ಇದು ನಾವು ಏನೇ ಮಾಡಿದರೂ ವಿರುದ್ಧವಾಗಿ ನಡೆಯುವಂತಾ ದಿನವಾಗಿತ್ತು. ಮತ್ತೊಂದಡೆ ಭಾರತ ಇಂದು ಏನು ಮಾಡಿದರೂ ಯಶಸ್ಸು ದೊರೆಯುತ್ತಿತ್ತು" ಎಂದಿದ್ದಾರೆ ಟಾಮ್ ಲ್ಯಾಥಮ್.

ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಮೊಹಮ್ಮದ್ ಶಮಿ ನೇತೃತ್ವದ ಭಾರತದ ವೇಗದ ಬೌಲಿಂಗ್ ಪಡೆ ಭರ್ಜರಿ ಪ್ರದರ್ಶನ ನೀಡಿತ್ತು. ಹೀಗಾಗಿ ನ್ಯೂಜಿಲೆಂಡ್ ತಂಡವನ್ನು ಕೇವಲ 108 ರನ್‌ಗಳಿಗೆ ಆಲೌಟ್ ಮಾಡಲು ಭಾರತ ಯಶಸ್ವಿಯಾಯಿತು. ಶಮಿ ಮೂರು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಪಡೆದರು.

ಇನ್ನು 109 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅದ್ಭುತ ಜೊತೆಯಾಟ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 72 ರನ್‌ಗಳ ಜೊತೆಯಾಟ ನೀಡುವ ಮೂಲಕ ಕಿವೀಸ್ ಪಡೆಗೆ ಸಣ್ಣ ಅವಕಾಶವೂ ಇಲ್ಲದಂತೆ ಮಾರುವಲ್ಲಿ ಯಶಸ್ವಿಯಾದರು. ನಾಯಕ ರೋಹಿತ್ ಅರ್ಧ ಶತಕ ಸಿಡಿಸಿ ವಿಕೆಟ್ ಕಳೆದುಕೊಂಡರು. ಬಳಿಕ ಬಂದ ವಿರಾಟ್ ಕೊಹ್ಲಿ 11 ರನ್‌ಗಳಿಗೆ ಔಟಾಗಿ ಫೆವಿಲಿಯನ್‌ಗೆ ಸೇರಿಕೊಂಡರು. ಶುಬ್ಮನ್ ಗಿಲ್ ಅಜೇಯ 40 ರನ್ ಸಿಡಿಸಿದರೆ ಇಶಾನ್ ಕಿಶನ್ ಅಜೇಯ 8 ರನ್‌ಗಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಎರಡನೇ ಗೆಲುವು ಸಾಧಿಸಿದ್ದು ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ ಚೇತೇಶ್ವರ ಪೂಜಾರ
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಯುಜ್ವೇಂದ್ರ ಚಹಾಲ್, ಶ್ರೀಕರ್ ಭರತ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಮಾರ್ಕ್ ಚಾಪ್ಮನ್, ಡೌಗ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ

Story first published: Saturday, January 21, 2023, 20:53 [IST]
Other articles published on Jan 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+