ಟಾಸ್ ಗೆದ್ದು ಯಾವುದು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನೇ ಮರೆತ ರೋಹಿತ್!: ತಮಾಷೆಯ ವಿಡಿಯೋ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಮೊದಲ ಪಂದ್ಯ ಗೆದ್ದಿರುವ ಭಾರತ ಈ ಪಂದ್ಯದಲ್ಲಿಯೂ ಗೆದ್ದು ಸರಣಿ ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ. ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಟಾಸ್ ಪ್ರಕ್ರಿಯೆ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದ ಬಳಿಕ ಯಾವುದನ್ನು ಆಯ್ಕೆ ಮಾಡಬೇಕು ಎಂಬುದನ್ನು ಮರೆತು ಗೊಂದಲಕ್ಕೀಡಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ ನಗುವಿಗೆ ಕಾರಣವಾದರು.
ರಾಯ್‌ಪುರದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದ ಟಾಸ್ ಸಂದರ್ಭದಲ್ಲಿ ಇತ್ತಂಡಗಳ ನಾಯಕರ ಜೊತೆಗೆ ನಿರೂಪಕ ರವಿ ಶಾಸ್ತ್ರಿ ಹಾಗೂ ಮ್ಯಾಚ್ ರೆಫ್ರಿ ಜಾವಗಲ್ ಶ್ರೀನಾಥ್ ಇದ್ದರು. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದಿರುವುದಾಗಿ ರೆಫ್ರಿ ತಿಳಿಸಿದರು. ಆದರೆ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಮರೆತಿದ್ದರು.
ರೋಹಿತ್ ಶರ್ಮಾ ಮೊದಲಿಗೆ ಎರಡ್ಮೂರು ಸೆಕಂಡುಗಳ ಕಾಲ ಯೋಚಿಸಿ ನಾವೇನು ಆಯ್ಕೆ ಮಾಡಿಕೊಳ್ಳಬೇಕು ಎನ್ನುತ್ತಾ, ತಲೆಗೆ ಕೈಯಿಟ್ಟು ಯೋಚಿಸುತ್ತಾ ನಿಂತುಬಿಟ್ಟರು. ನಾಯಕ ರೋಹಿತ್ ಶರ್ಮಾ ನಿರ್ಧಾರಕ್ಕಾಗಿ ರೆಫ್ರಿ ಜಾವಗಲ್ ಶ್ರೀನಾಥ್ ನಗುತ್ತಾ ಕಾದು ನಿಂತಿದ್ದರೆ ಎದುರಾಳಿ ನಾಯಕ ಟಾಮ್ ಲಾಥಮ್ ಕೂಡ ರೋಹಿತ್ ಮುಖನೋಡಿ ನಗುತ್ತಾ ನಿಂತಿದ್ದರು. ಬಳಿಕ 8-10 ಸೆಕೆಂಡ್‌ಗಳ ಕಾಲ ಯೋಚಿಸಿದ ಬಳಿಕ 'ಮೊದಲಿಗೆ ಬೌಲಿಂಗ್ ನಡೆಸುತ್ತೇವೆ' ಎಂದು ದೃಢವಾಗಿ ರೆಫ್ರಿಗೆ ತಿಳಿಸಿದರು. ಈ ಸನ್ನಿವೇಶ ಅಭಿಮಾನಿಗಳಲ್ಲಿ ನಗು ತರಿಸಿದೆ.
ಇನ್ನು ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಇತರ ಸದಸ್ಯರು ತಾಲೀಮು ನಡೆಸುತ್ತಿದ್ದರು. ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಶ್ರೇಯಸ್ ಐಯ್ಯರ್ ಮೊದಲಾದ ಆಟಗಾರರು ರೋಹಿತ್ ಗೊಂದಲಕ್ಕೀಡಾಗಿರುವುದನ್ನು ಗಮನಿಸಿ ನಗುತ್ತಾ ಕುತೂಹಲದಿಂದ ನೋಡುತ್ತಿರುವುದು ಈ ವಿಡಿಯೋದಲ್ಲಿ ಗಮನಿಸಬಹುದು.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಇನ್ನು ನ್ಯೂಜಿಲೆಂಡ್ ತಂಡ ಕೂಡ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿದಿದ್ದು ಪಂದ್ಯದ ಮೇಲೆ ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಯುಜ್ವೇಂದ್ರ ಚಹಾಲ್, ಶ್ರೀಕರ್ ಭರತ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಮಾರ್ಕ್ ಚಾಪ್ಮನ್, ಡೌಗ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications