IND VS NZ 2ND T20: ಭಾರತಕ್ಕೆ 209 ರನ್ ಗುರಿ ನೀಡಿದ ಕಿವೀಸ್
ರಾಯ್‌ಪುರ್: ಸಂಘಟಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಎರಡನೇ ಟಿ20 ಪಂದ್ಯದಲ್ಲಿ 209 ರನ್‌ಗಳ ಸವಾಲಿನ ಗುರಿಯನ್ನು ಟೀಮ್ ಇಂಡಿಯಾಗೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ಡೆವೊನ್ ಕಾನ್ವೇ ಹಾಗೂ ಟಿಮ್ ಸೀಫರ್ಟ್ ಜೋಡಿ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಪವರ್ ಪ್ಲೇನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಆರಂಭಿಕರು ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನೆರವಾಯಿತು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 43 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಡೆವೊನ್ ಕಾನ್ವೇ 9 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 19 ರನ್ ಬಾರಿಸಿ ಔಟ್ ಆದರು. ಇನ್ನೋರ್ವ ಆರಂಭಿಕ ಆಟಗಾರ ಟಿಮ್ ಸೀಫರ್ಟ್ 13 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 24 ರನ್ ಸೇರಿಸಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದರು.

ಮೂರನೇ ವಿಕೆಟ್‌ಗೆ ಗ್ಲೆನ್ ಫಿಲಿಪ್ಸ್ ಹಾಗೂ ರಚಿನ್ ರವೀಂದ್ರ ಜೋಡಿ ತಂಡಕ್ಕೆ ಆಧಾರವಾಯಿತು. ಈ ಜೊಡಿ ಸಹ ವೇಗವಾಗಿ ರನ್ ಕಲೆ ಹಾಕುವತ್ತ ಚಿತ್ತ ನೆಟ್ಟಿತು. ಈ ಜೋಡಿ 27 ಎಸೆತಗಳಲ್ಲಿ 55 ರನ್ ಕಾಣಿಕೆ ನೀಡಿ ಮುನ್ನುಗುತ್ತಿದ್ದಾಗ 19 ರನ್ ಬಾರಿಸಿದ್ದ ಫಿಲಿಪ್ಸ್ ಅವರಿಗೆ ಖೆಡ್ಡ ತೋಡುವಲ್ಲಿ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ ಸಫಲರಾದರು. ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಡ್ಯಾರಿಲ್ ಮಿಚಲ್ ಆಟ 18 ರನ್‌ಗಳಿಗೆ ಕೊನೆಯಾಯಿತು.
ರಚಿನ್ ಮಿಂಚು
ಭರವಸೆಯ ಆಟಗಾರ ರಚಿನ್ ರವೀಂದ್ರ ಸ್ಥಿರ ಪ್ರದರ್ಶನ ನೀಡಿದರು. ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿದ ರಚಿನ್ 26 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ಸಹಾಯದಿಂದ 44 ರನ್ ಸಿಡಿಸಿದರು.
ಕೆಳ ಕ್ರಮಾಂಕದಲ್ಲಿ ನಾಯಕ ಮಿಚಲ್ ಸ್ಯಾಂಟ್ನರ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಇವರು 27 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 47 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಝಾಕ್ ಫೌಲ್ಕ್ಸ್ ಅಜೇಯ 12 ರನ್ ಸಿಡಿಸಿ ತಂಡದ ಮೊತ್ತ 200 ಗಡಿ ದಾಟುವಲ್ಲಿ ನೆರವಾದರು. ಅಂತಿಮವಾಗಿ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿತು.
ಭಾರತದ ಪರ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications