ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Nz 2nd T20I: ಓಪನರ್‌ ಆಗಿ ಮತ್ತೆ ಎಡವಿದ ರಿಷಭ್ ಪಂತ್, ಕೊಟ್ಟ ಅವಕಾಶ ಕೈ ಚೆಲ್ಲಿದ ಬ್ಯಾಟರ್

Rishabh pant

ಮೌಂಟ್‌ ಮೌಂಗನ್ಯುಯಿಯಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡಿದೆ. ಓಪನರ್ ಆಗಿ ಕಣಕ್ಕಿಳಿದ ಇಶಾನ್ ಕಿಶನ್ ಹಾಗೂ ರಿಷಭ್ ಪಂತ್ ಜೋಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಎಡವಿದ್ದಾರೆ.

ಮಳೆಯಿಂದಾಗಿ ಕೊಂಚ ಅಡ್ಡಿಯಾಗಿದ್ದ ಪಂದ್ಯದಲ್ಲಿ ರಿಷಭ್ ಪಂತ್ ಓಪನರ್ ಆಗಿ 13 ಎಸೆತಗಳಲ್ಲಿ ಕೇವಲ 6 ರನ್‌ಗಳಿಗೆ ಔಟ್ ಆಗುವ ಮೂಲಕ ಮಿಂಚುವಲ್ಲಿ ವಿಫಲಗೊಂಡರು. 46.15 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಷಭ್ ಪಂತ್ ಪವರ್‌ಪ್ಲೇ ಓವರ್‌ಗಳಲ್ಲಿ ಕಡಿಮೆ ರನ್‌ಗೆ ಔಟಾಗಿದ್ದಷ್ಟೇ ಅಲ್ಲದೆ ಸ್ಟ್ರೈಕ್‌ರೇಟ್ ಕೂಡ ಕಾಪಾಡಿಕೊಳ್ಳುವಲ್ಲಿ ಎಡವಿದ್ರು.

IND vs NZ T20: ರಿಷಭ್ ಪಂತ್‌ಗೆ ಬ್ಯಾಟಿಂಗ್ ಕ್ರಮಾಂಕ ಸೂಚಿಸಿದ ದಿನೇಶ್ ಕಾರ್ತಿಕ್IND vs NZ T20: ರಿಷಭ್ ಪಂತ್‌ಗೆ ಬ್ಯಾಟಿಂಗ್ ಕ್ರಮಾಂಕ ಸೂಚಿಸಿದ ದಿನೇಶ್ ಕಾರ್ತಿಕ್

ಪಂದ್ಯದ ಅಂತಿಮ ಪವರ್‌ಪ್ಲೇ ಓವರ್(6)ನಲ್ಲಿ ಲ್ಯೂಕಿ ಫರ್ಗುಸನ್ ಬೌಲಿಂಗ್‌ನಲ್ಲಿ ಕೆಟ್ಟ ಹೊಡೆತಕ್ಕೆ ಕೈ ಹಾಕಿದ ಪಂತ್, ಕಿವೀಸ್‌ ಬೌಲರ್ ಸೌಥಿ ಹಿಡಿದ ಉತ್ತಮ ಕ್ಯಾಚ್‌ನಿಂದಾಗಿ ಪೆವಿಲಿಯನ್ ಸೇರಬೇಕಾಯಿತು. ಈ ಮೂಲಕ ಚುಟುಕು ಫಾರ್ಮೆಟ್‌ನಲ್ಲಿ ರಿಷಭ್ ತನ್ನ ಕಳಪೆ ಫಾರ್ಮ್ ಮುಂದುವರಿಸಿದ್ದು, ಓಪನರ್‌ ಆಗಿ ಬಡ್ತಿ ಪಡೆದ ಮತ್ತೊಂದು ಪಂದ್ಯದಲ್ಲಿ ವಿಫಲರಾಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಕಳೆದ ಭಾನುವಾರಷ್ಟೇ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ ರಿಷಭ್ ಪಂತ್ ಜಿಂಬಾಬ್ವೆ ವಿರುದ್ಧದ ಪಂದ್ಯ ಹಾಗೂ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆದರು. ಆದ್ರೆ ರಿಷಭ್ ಮಿಂಚುವಲ್ಲಿ ವಿಫಲವಾಗಿದ್ದಲ್ಲದೆ ಭಾರತ 10 ವಿಕೆಟ್‌ಗಳಿಂದ ಸೋಲನ್ನ ಅನುಭವಿಸಿತು.

10 ಓವರ್‌ಗಳಲ್ಲಿ 75 ರನ್‌ಗೆ 2 ವಿಕೆಟ್ ಕಳೆದುಕೊಂಡ ಭಾರತ ಪರ ಇಶಾನ್ ಕಿಶನ್ 31 ಎಸೆತಗಳಲ್ಲಿ 36 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಇಶಾನ್ ಕಿಶನ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ(ನಾಯಕ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಾಹಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್

Story first published: Sunday, November 20, 2022, 13:44 [IST]
Other articles published on Nov 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X