ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ನಿರ್ಣಾಯಕ ಪಂದ್ಯಕ್ಕಾಗಿ ಲಕ್ನೋಗೆ ಬಂದಿಳಿದ ಹಾರ್ದಿಕ್ ಪಡೆ

 IND vs NZ 2nd t20I: Team India reaches Lucknow for 2nd T20I match

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯವನ್ನಾಡಲು ಟೀಮ್ ಇಂಡಿಯಾ ಲಕ್ನೋಗೆ ಬಂದಿಳಿದಿದೆ. ಈ ಸರಣಿಯ ಎರಡನೇ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಡಾಂಗಣದಲ್ಲಿ ನಡೆಯಲಿದ್ದು ಅಂತಿಮ ಸಿದ್ಧತೆಯನ್ನು ನಡೆಸಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಕಾರಣ ಭಾನುವಾರದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಟೀಮ್ ಇಂಡಿಯಾ.

ಈ ಪಂದ್ಯ ಲಕ್ನೋದ ಎಕಾನ ಸ್ಟೇಡಿಯಂನಲ್ಲಿ ನಡೆಯಲಿದ್ದು ಭಾರೀ ಪೈಪೋಟಿಯ ಪಂದ್ಯ ನಡೆಯುವ ನಿರೀಕ್ಷೆಯಿದೆ. ಸರಣಿಯಲ್ಲಿ ಸಮಬಲ ಸಾಧಿಸಲು ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಮ್ ಇಂಡಿಯಾ ಸಜ್ಜಾಗಿದ್ದರೆ ಮೊದಲ ಪಂದ್ಯದಲ್ಲಿ ಸಾಧಿಸಿರುವ ಮುನ್ನಡೆಯನ್ನು ಮುಂದುವರಿಸುವ ವಿಶ್ವಾಸದಲ್ಲಿದೆ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್. ರಾಂಚಿಯಲ್ಲಿ ಭಾರತದ ಬ್ಯಾಟರ್‌ಗಳ ವಿರುದ್ಧ ಕಿವಿಸ್ ಸ್ಪಿನ್ನರ್‌ಗಳು ಅದ್ಭುತ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದು ಪ್ರವಾಸಿಗರ ಆತ್ಮವಿಶ್ವಾಸ ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?

ಇನ್ನು ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯಲಿದೆಯಾ ಎಂಬದು ಈಗಿರುವ ಕುತೂಹಲ. ಯುವ ಆಟಗಾರ ಪೃಥ್ವಿ ಶಾಗೆ ಈ ನಿರ್ಣಾಯಕ ಪಂದ್ಯದಲ್ಲಿ ಅವಕಾಶ ದೊರೆಯಬಹುದಾ ಎಂಬುದು ಒಂದು ಪ್ರಶ್ನೆಯಾಗಿದ್ದರೆ ಫಾರ್ಮ್ ಕಳೆದುಕೊಂಡಿರುವ ಯುವ ವೇಗಿ ಅರ್ಶ್‌ದೀಪ್‌ಗೆ ಮತ್ತೊಂದು ಅವಕಾಶ ದೊರೆಯಬಹುದಾ ಎಂಬುದು ಕೂಡ ಪ್ರಮುಖ ಕುತೂಹಲವಾಗಿದೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಭಾನುವಾರ ಲಕ್ನೋದ ಎಕಾನ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರವನ್ನು ಸ್ಟಾರ್‌ ಸ್ಪೋರ್ಟ್ಸ್ ವಾಹಿನಿಯಲ್ಲಿ ನೀಡಲಿದೆ. ಅಲ್ಲದೆ ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

Women's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆWomen's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆ

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಶಿವಂ ಮಾವಿ, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಇಶ್ ಸೋಧಿ, ಜಾಕೋಬ್ ಡಫ್ಫಿ, ಲಾಕಿ ಫರ್ಗ್ಯೂಸನ್, ಬ್ಲೇರ್ ಟಿಕ್ನರ್

Story first published: Saturday, January 28, 2023, 23:47 [IST]
Other articles published on Jan 28, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X