ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ 3rd ODI: 3ನೇ ಏಕದಿನ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ಸಾಧ್ಯತೆ : ರೋಹಿತ್ ಶರ್ಮಾ ಹೇಳಿದ್ದೇನು?

IND vs NZ 3rd ODI : Ahead Of Test Series Mohammed Shami Or Siraj Likely Rested For 3rd ODI

ನ್ಯೂಜಿಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಇಂದೋರ್ ನಲ್ಲಿ ಸರಣಿಯ ಕೊನೆಯ ಪಂದ್ಯ ಜನವರಿ 24ರಂದು ಮಂಗಳವಾರ ನಡೆಯಲಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿ ಮುಕ್ತಾಯದ ನಂತರ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಸೆಣೆಸಲಿದೆ. ಇದೇ ಕಾರಣಕ್ಕೆ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಭಾರತೀಯ ಕ್ರಿಕೆಟ್‌ನ ಭವಿಷ್ಯದ ಕುರಿತು ದೊಡ್ಡ ಹೇಳಿಕೆ ನೀಡಿದ ಮಾಜಿ ನಾಯಕ ಕಪಿಲ್ ದೇವ್ಭಾರತೀಯ ಕ್ರಿಕೆಟ್‌ನ ಭವಿಷ್ಯದ ಕುರಿತು ದೊಡ್ಡ ಹೇಳಿಕೆ ನೀಡಿದ ಮಾಜಿ ನಾಯಕ ಕಪಿಲ್ ದೇವ್

ಭಾರತ ತಂಡದ ಪ್ರಮುಖ ವೇಗಿಗಳಾದ ಮೊಹಮ್ಮದ್ ಶಮಿ ಅಥವಾ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಹಿರಿಯ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದ್ದು, ಉಮ್ರಾನ್ ಮಲಿಕ್ ತಂಡಕ್ಕೆ ವಾಪಸಾಗುವ ಸಾಧ್ಯತೆ ಇದೆ.

ಇನ್ನು ಸ್ಪಿನ್ನರ್ ಕುಲದೀಪ್ ಯಾದವ್‌ಗೆ ಕೂಡ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಅವರ ಬದಲಾಗಿ ಯುಜುವೇಂದ್ರ ಚಹಾಲ್‌ರನ್ನು ಕಣಕ್ಕಿಳಿಸಬಹುದು. ಈಗಾಗಲೇ ಸರಣಿಯನ್ನು ಗೆದ್ದಿರುವ ಭಾರತ ತಂಡ ಈ ಪಂದ್ಯದಲ್ಲಿ ಹಲವು ಪ್ರಯೋಗಗಳನ್ನು ಮಾಡುವ ಸಾಧ್ಯತೆ ಕೂಡ ಇದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ತಂಡದ ಎಲ್ಲಾ ಆಟಗಾರರಿಗೆ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಭಾರತ ತಂಡವನ್ನು ನೋಡಿ ಕಲಿಯಿರಿ: ಪಾಕಿಸ್ತಾನ ತಂಡವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಕ್ರಿಕೆಟಿಗಭಾರತ ತಂಡವನ್ನು ನೋಡಿ ಕಲಿಯಿರಿ: ಪಾಕಿಸ್ತಾನ ತಂಡವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಕ್ರಿಕೆಟಿಗ

ರೋಹಿತ್ ಶರ್ಮಾ ಹೇಳಿದ್ದೇನು?

ರೋಹಿತ್ ಶರ್ಮಾ ಹೇಳಿದ್ದೇನು?

"ಮೊಹಮ್ಮದ್ ಶಮಿ ಮತ್ತು ಸಿರಾಜ್ ಅತ್ಯುತ್ತಮ ಬೌಲಿಂಗ್ ಕೌಶಲ್ಯಗಳನ್ನು ಹೊಂದಿದ್ದಾರೆ. ಅವರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅವರು ಬಹುಮಾನಗಳನ್ನು ಪಡೆಯುವುದನ್ನು ನೋಡಿ ಸಂತೋಷವಾಗುತ್ತದೆ. ಶಮಿ ಮತ್ತು ಸಿರಾಜ್‌ ದಿರ್ಘ ಬೌಲಿಂಗ್ ಮಾಡುವುದನ್ನು ಮುಂದುವರೆಸಿದರು. ಟೆಸ್ಟ್ ಸರಣಿ ಬರುತ್ತಿದೆ ಎಂದು ನಾನು ಅವರಿಗೆ ನೆನಪಿಸಿದೆ. ನಾವು ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ" ಎಂದು ರೋಹಿತ್ ಶರ್ಮಾ ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ಮುಕ್ತಾಯದ ಬಳಿಕ ಹೇಳಿದ್ದರು.

ಭಾರತ ಈಗಾಗಲೇ ಸರಣಿ ಗೆದ್ದಿರುವುದರಿಂದ ಸೋಲಿನ ಭಯವಿಲ್ಲದೆ ತಂಡದಲ್ಲಿ ಹಲವು ಪ್ರಯೋಗಗಳನ್ನು ಮಾಡಬಹುದಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಕೆಲವು ಆಟಗಾರರಿಗೆ ಅವಕಾಶ ನೀಡಬಹುದಾಗಿದೆ.

ಏಕದಿನ ವಿಶ್ವಕಪ್‌ ದೃಷ್ಟಿಯಿಂದ ಹೊಸ ಪ್ರಯೋಗ?

ಏಕದಿನ ವಿಶ್ವಕಪ್‌ ದೃಷ್ಟಿಯಿಂದ ಹೊಸ ಪ್ರಯೋಗ?

2023ರಲ್ಲಿ ಏಕದಿನ ವಿಶ್ವಕಪ್ ಬರುತ್ತಿದ್ದು, ಭಾರತ ತಂಡ ಸಿದ್ಧತೆ ಆರಂಭಿಸಿದೆ. ಇದೇ ಕಾರಣಕ್ಕಾಗಿಯಾದರೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ನಿರೀಕ್ಷಿಸಬಹುದಾಗಿದೆ. ಉಮ್ರಾನ್ ಮಲಿಕ್ ಜೊತೆಗೆ ಭರವಸೆಯ ಆಲ್‌ರೌಂಡರ್ ಶಹಬಾಜ್ ಅಹ್ಮದ್ ಕೂಡ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಶ್ರೇಯಸ್ ಅಯ್ಯರ್ ಬದಲಿಗೆ ರಜತ್ ಪಟಿದಾರ್ ಸರಣಿಗೆ ಆಯ್ಕೆಯಾದರೂ ಇದುವರೆಗೂ ಅವಕಾಶ ಪಡೆದಿಲ್ಲ, ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ಈ ಬಗ್ಗೆ ಕೂಡ ಯೋಚಿಸಿರಬಹುದು. ಕುಲದೀಪ್ ಯಾದವ್‌ಗೆ ವಿಶ್ರಾಂತಿ ನೀಡಿದರೆ ಹಿರಿಯ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಕೂಡ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಇಂದೋರ್ ಬ್ಯಾಟಿಂಗ್‌ಗೆ ಹೆಚ್ಚು ನೆರವು ನೀಡುವ ಪಿಚ್ ಆಗಿದೆ. ಇದುವರೆಗೂ ಇಲ್ಲಿ ಭಾರತ 5 ಏಕದಿನ ಪಂದ್ಯಗಳನ್ನಾಡಿದ್ದು ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಪಿಚ್‌ನಲ್ಲಿ ಒಬ್ಬ ಬ್ಯಾಟರ್ ಹೆಚ್ಚುವರಿಯಾಗಿ ಬೇಕು ಎನಿಸಿದರೆ ರಜತ್ ಪಟಿದಾರ್ ಅವಕಾಶ ಪಡೆಯುವ ಸಾಧ್ಯತೆ ಇದೆ.

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI

ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್/ ಶಹಬಾಜ್ ಅಹ್ಮದ್, ಕುಲದೀಪ್ ಯಾದವ್/ ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ/ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.

Story first published: Sunday, January 22, 2023, 22:33 [IST]
Other articles published on Jan 22, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X