IND vs NZ 3rd ODI: ಭಾರತ vs ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ, ಟಿವಿ & ಲೈವ್ ಸ್ಟ್ರೀಮಿಂಗ್ ವಿವರ

ಮಂಗಳವಾರ, ಜನವರಿ 24ರಂದು ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್‌ಸ್ವೀಪ್ ಮಾಡಲು ಎದುರು ನೋಡುತ್ತಿದೆ.

2023ರ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯುವ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಆಯೋಜಿಸಲು ಸಿದ್ಧವಾಗಿರುವ ಭಾರತ ತಂಡ, ಅದಕ್ಕೂ ಮುನ್ನ ಏಕದಿನ ಕ್ರಿಕೆಟ್‌ನಲ್ಲಿ ನಂ.1 ಸ್ಥಾನಕ್ಕೇರುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಾನು ಎದುರಿಸಿದ ಕಠಿಣ ಬೌಲರ್ ಯಾರೆಂದು ತಿಳಿಸಿದ ಚೇತೇಶ್ವರ ಪೂಜಾರಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಾನು ಎದುರಿಸಿದ ಕಠಿಣ ಬೌಲರ್ ಯಾರೆಂದು ತಿಳಿಸಿದ ಚೇತೇಶ್ವರ ಪೂಜಾರ

ನ್ಯೂಜಿಲೆಂಡ್ ಸರಣಿಗೂ ಮುನ್ನ ಶ್ರೀಲಂಕಾ ತಂಡವನ್ನು 3-0 ಅಂತರದಿಂದ ಸೋಲಿಸಿದ ನಂತರ ಆತಿಥೇಯ ಭಾರತ ತಂಡವು ಸತತವಾಗಿ ಏಕದಿನ ಸರಣಿಯನ್ನು ವೈಟ್‌ವಾಶ್ ಮಾಡಲು ಎದುರು ನೋಡುತ್ತಿದೆ. ಐಸಿಸಿ ಪುರುಷರ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಲಿದೆ.

ಮತ್ತೊಂದು ವೈಯಕ್ತಿಕ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ

ಮತ್ತೊಂದು ವೈಯಕ್ತಿಕ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ

ಶನಿವಾರ, ಜನವರಿ 21ರಂದು ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿ ರೋಹಿತ್ ಶರ್ಮಾ ಬಳಗ ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಬಾಕಿ ಇರುವಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವೈಯಕ್ತಿಕ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ನ್ಯೂಜಿಲೆಂಡ್ ತಂಡದ ವಿರುದ್ಧ 13ನೇ ಅರ್ಧಶತಕ ಬಾರಿಸಿ, ಕಿವೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಅರ್ಧಶತಕಗಳನ್ನು ಗಳಿಸಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕುವ ಉತ್ಸಾಹದಲ್ಲಿದ್ದಾರೆ.

ಭಾರತ ತಂಡದ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆ

ಭಾರತ ತಂಡದ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆ

ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆ ಮಾಡಲಿದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಿಗೆ ಅವಕಾಶ ನೀಡುವ ಮುನ್ಸೂಚನೆಯನ್ನು ರೋಹಿತ್ ಶರ್ಮಾ ನೀಡಿದ್ದಾರೆ. ಕಳೆದೆರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ ಆಟಗಾರರು ಅಂತಿಮ 11ರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಉಮ್ರಾನ್ ಮಲಿಕ್, ರಜತ್ ಪಾಟಿದಾರ್, ಯುಜ್ವೇಂದ್ರ ಚಹಾಲ್, ಶಹಬಾಜ್ ಅಹ್ಮದ್ ಅವರಂತಹ ಆಟಗಾರರು ಮೂರನೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲಿದ್ದಾರೆ. ಇನ್ನು ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಇನ್ನೂ ಈಗಾಗಲೇ ಸರಣಿ ಕಳೆದುಕೊಂಡಿರುವ ಪ್ರವಾಸಿ ನ್ಯೂಜಿಲೆಂಡ್ ತಂಡದಲ್ಲಿಯೂ ಕೆಲ ಬದಲಾವಣೆಗಳಾಗಲಿದ್ದು, ಎರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಭಾರತ vs ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯದ ವಿವರ

ಭಾರತ vs ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯದ ವಿವರ

ಸ್ಥಳ ಮತ್ತು ದಿನಾಂಕ: ಮಂಗಳವಾರ, ಜನವರಿ 24. ಹೋಳ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಇಂದೋರ್.

ಪಂದ್ಯದ ಸಮಯ: ಭಾರತ vs ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಟಾಸ್ ಸಮಯ ಮಧ್ಯಾಹ್ನ 1 ಗಂಟೆಗೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಭಾರತ vs ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಭಾರತ vs ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ

ಭಾರತ vs ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮೊಹಮ್ಮದ್ ಶಮಿ,

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೌಗ್ ಬ್ರೇಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಬ್ಲೇರ್ ಟಿಕ್ನರ್

For Quick Alerts
ALLOW NOTIFICATIONS
For Daily Alerts
Story first published: Monday, January 23, 2023, 16:26 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X