ಭಾರತ, ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯ ಆರಂಭವಾಗುವ ಸಮಯ, ನೇರಪ್ರಸಾರ, ಪಿಚ್ ಮಾಹಿತಿ
ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು ಗೆದ್ದು ಬೀಗಿರುವ ಟೀಮ್ ಇಂಡಿಯಾ ಮತ್ತೊಂದು ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾನುವಾರ ಇಂದೋರ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವು ಸಾಧಿಸಲು ಟೀಮ್ ಇಂಡಿಯಾ ಯೋಜನೆಯನ್ನು ಹಾಕಿಕೊಂಡಿದೆ. ವರ್ಷದ ಮೊದಲ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸುವ ಇರಾದೆ ಗಿಲ್ ಪಡೆಯದ್ದಾಗಿದೆ.
ಈಗಾಗಲೇ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ. ಈ ಸರಣಿಯ ಬಳಿಕ ಬಹು ನಿರೀಕ್ಷಿತ ಟಿ20 ಸರಣಿ ನಡೆಯಲಿದ್ದು, ಈ ಸರಣಿಗೆ ಭಾರತ ತಂಡ ಗೆಲುವಿನ ಆತ್ಮವಿಶ್ವಾಸದೊಂದಿಗೆ ಇಳಿಯಲು ಸಜ್ಜಾಗಿದೆ. ಹಾಗಿದ್ದರೆ ಇಂದೋರ್‌ನಲ್ಲಿ ನಡೆಯುವ ಪಂದ್ಯವನ್ನು ವೀಕ್ಷಿಸುವುದು ಎಲ್ಲಿ, ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಮೂರನೇ ಪಂದ್ಯಕ್ಕಾಗಿ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ/ಆಯುಷ್ ಬದೋನಿ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ/ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್ ತಂಡದ ಹೇಗಿರಲಿದೆ?
ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಮಿಚೆಲ್ ಹೇ, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜಾಮಿಸನ್, ಝಾಕ್ ಫೌಲ್ಕ್ಸ್, ಆದಿತ್ಯ ಅಶೋಕ್/ಜೇಡನ್ ಲೆನಾಕ್ಸ್.
ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೋಡಬಹುದು.
ಪಂದ್ಯ ಆರಂಭವಾಗುವ ಸಮಯ ಯಾವಾಗ?
ಭಾರತ, ನ್ಯೂಜಿಲೆಂಡ್ ನಡುವಣ ಪಂದ್ಯ 1.30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
ಪಿಚ್ ಹೇಗಿರಲಿದೆ?
ಇಂದೋರ್‌ನ ಪಿಚ್ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ನೆರವು ನೀಡುತ್ತದೆ. ಹೀಗಾಗಿ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದಾಗಿದೆ. ಅಲ್ಲದೆ 14 ವರ್ಷಗಳ ಹಿಂದೆ ವೀರೇಂದ್ರ ಸೆಹ್ವಾಗ್ ಇದೇ ಮೈದಾನದಲ್ಲಿ 219 ರನ್ ಸಿಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications