Ind vs NZ 3rd ODI : ಭಾರತ vs ನ್ಯೂಜಿಲೆಂಡ್: 3ನೇ ಏಕದಿನ ಪಂದ್ಯ, ವೈಟ್‌ವಾಶ್ ಮೇಲೆ ಭಾರತದ ಕಣ್ಣು

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ ಸರಣಿಯನ್ನು ಈಗಾಗಲೇ ವಶಕ್ಕೆ ಪಡೆದುಕೊಂಡಿದೆ. ಇದೀಗ ಏಕದಿನ ಸರಣಿಯನ್ನು ವೈಟ್‌ವಾಶ್ ಮೂಲಕ ವಶಕ್ಕೆ ಪಡೆಯಲು ರೋಹಿತ್ ಪಡೆ ದೃಷ್ಟಿ ನೆಟ್ಟಿದ್ದರೆ ಕಿವೀಸ್ ಪಡೆ ವೈಟ್‌ವಾಶ್ ಅವಮಾನದಿಂದ ಪಾರಾಗಲು ಸರ್ವ ಪ್ರಯತ್ನ ನಡೆಸಲಿದೆ.
ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರೆ ಎರಡನೇ ಪಂದ್ಯದಲ್ಲಿ ಬೌಲಿಂಗ್ ವಿಭಾಗದ ಅಮೋಘ ಪ್ರದರ್ಶನ ಕಿವೀಸ್ ಪಡೆಗೆ ಆಘಾತ ನೀಡಿತು. ಅದರಲ್ಲೂ ಮೊಹಮ್ಮದ್ ಶಮಿ ಪ್ರದರ್ಶನ ಕಿವೀಸ್ ಪಾಲಿಗೆ ಸೊಲ್ಲೆತ್ತದಂತೆ ಮಾಡಿಬಿಟ್ಟಿತು. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ 8 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.
ಇದೀಗ ಅಂತಿಮ ಪಂದ್ಯಕ್ಕಾಗಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇಂದೋರ್‌ಗೆ ಬಂದಿದ್ದು ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಅಂತಿಮ ಪಂದ್ಯದ ಆತಿಥ್ಯ ವಹಿಸಿಕೊಳ್ಳಲಿದೆ. ಮಂಗಳವಾರ ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯರ ನಡೆಯಲಿದೆ. ನ್ಯೂಜಿಲೆಂಡ್ ಸರಣಿಗೂ ಮುನ್ನ ಶ್ರೀಲಂಕಾ ತಂಡವನ್ನು 3-0 ಅಂತರದಿಂದ ಸೋಲಿಸಿದ ನಂತರ ಆತಿಥೇಯ ಭಾರತ ತಂಡವು ಸತತವಾಗಿ ಏಕದಿನ ಸರಣಿಯನ್ನು ವೈಟ್‌ವಾಶ್ ಮಾಡಲು ಎದುರು ನೋಡುತ್ತಿದೆ. ಐಸಿಸಿ ಪುರುಷರ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಲಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಶ್ರೀಕರ್ ಭರತ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್ , ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಮಾರ್ಕ್ ಚಾಪ್‌ಮನ್, ಡೌಗ್ ಬ್ರೇಸ್‌ವೆಲ್, ಜಾಕೋಬ್ ಡಫ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications