ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ 3rd ODI: ಇಂದೋರ್ ತಲುಪಿದ ಟೀಂ ಇಂಡಿಯಾ, ಸರಣಿ ವೈಟ್‌ವಾಶ್ ಮಾಡಿದರೆ ನಂಬರ್ 1 ಪಟ್ಟ

IND vs NZ 3rd ODI : Team India Reach To Indore For 3rd ODI, Looking For Series Whitewash

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ, ಸರಣಿಯ ಕೊನೆಯ ಪಂದ್ಯವನ್ನು ಆಡಲು ಇಂದೋರ್ ಗೆ ಬಂದಿಳಿದಿದೆ.

ಜನವರಿ 24 ಮಂಗಳವಾರ ಇಂದೋರ್ ನ ಹೋಲ್ಕರ್ ಕ್ರಿಕೆಟ್ ಮೈದಾನದಲ್ಲಿ ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಭಾನುವಾರ ಇಂದೋರ್ ಗೆ ಆಗಮಿಸಿರುವ ಟೀಂ ಇಂಡಿಯಾ ಸದಸ್ಯರ ವಿಶ್ರಾಂತಿ ಪಡೆಯಲಿದ್ದು, ಸೋಮವಾರ ಅಭ್ಯಾಸ ನಡೆಸಲಿದ್ದಾರೆ.

ICC ODI Ranking: ಸತತ ಸೋಲಿನ ಬಳಿಕ ಅಗ್ರಸ್ಥಾನದಿಂದ ಕೆಳಗಿಳಿದ ಕಿವೀಸ್; ನಂ.1 ಸ್ಥಾನದ ಮೇಲೆ ಕಣ್ಣಿಟ್ಟ ಭಾರತ!ICC ODI Ranking: ಸತತ ಸೋಲಿನ ಬಳಿಕ ಅಗ್ರಸ್ಥಾನದಿಂದ ಕೆಳಗಿಳಿದ ಕಿವೀಸ್; ನಂ.1 ಸ್ಥಾನದ ಮೇಲೆ ಕಣ್ಣಿಟ್ಟ ಭಾರತ!

ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದಿರುವ ಟೀಂ ಇಂಡಿಯಾ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ಅವರನ್ನು ನಂಬರ್ 1 ಸ್ಥಾನದಿಂದ ಕೆಳಗಿಳಿಸಿದೆ. ಭಾರತಕ್ಕೆ ಈಗ ಏಕದಿನ ಮಾದರಿಯಲ್ಲಿ ನಂಬರ್ 1 ಆಗುವ ಅವಕಾಶವಿದ್ದು, ಇಂದೋರ್ ನಲ್ಲಿ ನಡೆಯಲಿರುವ ಸರಣಿಯ ಕೊನೆಯ ಪಂದ್ಯವನ್ನು ರೋಹಿತ್ ಶರ್ಮಾ ಪಡೆ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲಿದೆ.

ಹೈದರಾಬಾದ್‌ನಲ್ಲಿ ನಡೆದ ಮೊದಲನೇ ಪಂದ್ಯವನ್ನು 12 ರನ್‌ಗಳಿಂದ ರೋಚಕವಾಗಿ ಗೆದ್ದ ಟೀಂ ಇಂಡಿಯಾ, ರಾಯ್ಪುರದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಾಬಲ್ಯ ಸಾಧಿಸಿತ್ತು. ಕೇವಲ 108 ರನ್‌ಗಳಿಗೆ ಬಲಿಷ್ಠ ಕಿವೀಸ್ ಪಡೆಯನ್ನು ಕಟ್ಟಿಹಾಕಿ ಸುಲಭದ ಗೆಲುವು ಸಾಧಿಸಿತ್ತು.

ಶುಭ್ಮನ್ ಗಿಲ್‌ಗೆ ಹೊಸ ಹೆಸರು ನೀಡಿದ ಸುನಿಲ್ ಗವಾಸ್ಕರ್; ಯುವ ಬ್ಯಾಟರ್ ಪ್ರತಿಕ್ರಿಯೆ ಹೀಗಿದೆಶುಭ್ಮನ್ ಗಿಲ್‌ಗೆ ಹೊಸ ಹೆಸರು ನೀಡಿದ ಸುನಿಲ್ ಗವಾಸ್ಕರ್; ಯುವ ಬ್ಯಾಟರ್ ಪ್ರತಿಕ್ರಿಯೆ ಹೀಗಿದೆ

ಲಯ ಕಂಡುಕೊಂಡ ಬೌಲಿಂಗ್ ಪಡೆ

ಲಯ ಕಂಡುಕೊಂಡ ಬೌಲಿಂಗ್ ಪಡೆ

ರಾಯ್ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಕಿವೀಸ್ ಪಡೆಯ ವಿರುದ್ಧ ಅಬ್ಬರಿಸಿದ್ದರು. ಮೊಹಮ್ಮದ್ ಶಮಿ 3 ವಿಕೆಟ್ ಪಡೆದು ನ್ಯೂಜಿಲೆಂಡ್‌ಗೆ ಆಘಾತ ನೀಡಿದರೆ, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದುಕೊಂಡಿದ್ದರು.

ಇನ್ನು ಪವರ್ ಪ್ಲೇನಲ್ಲಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸುತ್ತಿರುವ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು. ಸ್ಪಿನ್ನರ್ ಕುಲದೀಪ್ ಯಾದವ್ 1 ವಿಕೆಟ್ ಪಡೆದರೆ, ಶಾರ್ದುಲ್ ಠಾಕೂರ್ ಕೂಡ 1 ವಿಕೆಟ್ ಪಡೆದು ಮಿಂಚಿದರು. ಭಾರತದ ಬೌಲಿಂಗ್ ಸುಧಾರಿಸಿರುವುದು ನಾಯಕ ರೋಹಿತ್ ಚಿಂತೆಯನ್ನು ದೂರವಾಗಿಸಿದೆ.

ಅರ್ಧಶತಕ ಬಾರಿಸಿದ ರೋಹಿತ್

ಅರ್ಧಶತಕ ಬಾರಿಸಿದ ರೋಹಿತ್

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇತ್ತೀಚಿನ ದಿನಗಳಲ್ಲಿ ರನ್ ಗಳಿಸಲು ಪರದಾಡುತ್ತಿದ್ದರು. ತಂಡವಾಗಿ ಉತ್ತಮ ಪ್ರದರ್ಶನ ನೀಡಿದರು, ರೋಹಿತ್ ಫಾರ್ಮ್ ತಂಡಕ್ಕೆ ಚಿಂತೆಯಾಗಿತ್ತು. ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳುವ ಸೂಚನೆ ನೀಡಿದ್ದಾರೆ.

ಇಂದೋರ್ ನಲ್ಲಿ ನಡೆಯುವ ಸರಣಿಯ ಅಂತಿಮ ಪಂದ್ಯದಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ತನ್ನ ನಿಜವಾದ ಆಟವನ್ನು ಆಡಿದರೆ, ಭಾರತ ತಂಡಕ್ಕೆ ಮತ್ತೊಂದು ಗೆಲುವು ಕೂಡ ಸುಲಭವಾಗಿ ಸಿಗಲಿದೆ.

ಅಗ್ರಸ್ಥಾನಕ್ಕೇರಲು ಭಾರತಕ್ಕೆ ಅವಕಾಶ

ಅಗ್ರಸ್ಥಾನಕ್ಕೇರಲು ಭಾರತಕ್ಕೆ ಅವಕಾಶ

ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಅಗ್ರಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಇಂಗ್ಲೆಂಡ್ ಸದ್ಯ ಅಗ್ರಸ್ಥಾನಕ್ಕೇರಿದೆ. ಮೂರು ತಂಡಗಳು 113 ಪಾಯಿಂಟ್ ಹೊಂದಿದ್ದರು ರನ್‌ ಸರಾಸರಿಯ ಆಧಾರದ ಮೇಲೆ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ. ಭಾರತ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಭಾರತ ನಂಬರ್ 1 ಸ್ಥಾನಕ್ಕೆ ಜಿಗಿಯಲಿದ್ದು, ನ್ಯೂಜಿಲೆಂಡ್ 4ನೇ ಸ್ಥಾನಕ್ಕೆ ಕುಸಿಯಲಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಮುಂದುವರೆಯಲಿವೆ.

ಇಂದೋರ್ ಹೋಲ್ಕರ್ ಸ್ಟೇಡಿಯಂನಲ್ಲಿ ಭಾರತ ಇದುವರೆಗೂ ಆಡಿರುವ 5 ಏಕದಿನ ಪಂದ್ಯಗಳನ್ನು ಗೆದ್ದಿದೆ. ನ್ಯೂಜಿಲೆಂಡ್ ವಿರುದ್ಧ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ.

ಭಾರತ, ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ XI

ಭಾರತ, ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

Story first published: Sunday, January 22, 2023, 14:51 [IST]
Other articles published on Jan 22, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X