ಗುವಹಾಟಿ: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಭಾನುವಾರ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆಯುವ ಕನಸು ಟೀಮ್ ಇಡಿಯಾದ್ದಾಗಿದೆ. ಇನ್ನು ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಇರಾದೆಯನ್ನು ನ್ಯೂಜಿಲೆಂಡ್ ಹೊಂದಿದೆ.
ರಾಯ್‌ಪುರ್‌ದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಅಬ್ಬರಿಸಿತ್ತು. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಲಯಕ್ಕೆ ಮರಳಿರುವುದು ತಂಡದ ಚಿಂತೆಯನ್ನು ದೂರ ಮಾಡಿದೆ. ಮೂರನೇ ಪಂದ್ಯದಲ್ಲೂ ಇದೇ ಪ್ರದರ್ಶನವನ್ನು ನೀಡಿ, ಇನ್ನು ಎರಡು ಪಂದ್ಯಗಳು ಇರುವಂತೆಯೇ ಸರಣಿಯನ್ನು ವಶಕ್ಕೆ ಪಡೆಯುವ ಕನಸು ಟೀಮ್ ಇಂಡಿಯಾದ್ದಾಗಿದೆ.

ಟೀಮ್ ಇಂಡಿಯಾ ಟೂರ್ನಿಯಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದೆ. ಈ ಸರಣಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಾಗಿದೆ. ಭಾರತದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಎರಡನೇ ಪಂದ್ಯದಲ್ಲೂ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದು ತಂಡದ ಚಿಂತೆಯನ್ನು ದ್ವಿಗುಣ ಮಾಡಿದೆ. ಮೊದಲ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿದ್ದರು. ಇವರ ಬ್ಯಾಟ್ ನಿಂದಲೂ ರನ್ ಹರಿದು ಬಂದರೆ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಬಹುದು.
ತಿಲಕ್ ವರ್ಮಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಸೇರಕೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿದ್ದರು. ಇವರು ಎರಡನೇ ಟಿ20 ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ದಾಖಲೆಯ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಇನ್ನು ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಲಯಕ್ಕೆ ಮರಳಿದ್ದಾರೆ. ಇವರು ಎರಡನೇ ಪಂದ್ಯದಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದರು. ಈ ಇಬ್ಬರೂ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ಶಿವಂ ದುಬೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ. ವೇಗದ ಬೌಲರ್‌ಗಳಾದ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ತಮ್ಮ ಬಿಗುವಿನ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ ತಮ್ಮ ಸ್ಪಿನ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡಬೇಕಿದೆ.
ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ನೀಡಿದ ಪ್ರದರ್ಶನವನ್ನು ಟಿ20 ಕ್ರಿಕೆಟ್‌ನಲ್ಲಿ ನೀಡುವಲ್ಲಿ ವಿಫಲವಾಗಿದೆ. ಆರಂಭಿಕರಾದ ಡೆವೋನ್ ಕಾನ್ವೇ ಹಾಗೂ ಟಿಮ್ ಸಿಫರ್ಟ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚಲ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಈ ಆಟಗಾರರು ಸಮಯೋಚಿತ ಬ್ಯಾಟಿಂಗ್ ನಡೆಸಿದರೆ ಗೆಲುವು ಸಾಧ್ಯ. ವೇಗದ ಬೌಲರ್‌ಗಳಾದ ಮ್ಯಾಟ್ ಹ್ಯಾನ್ರಿ, ಜಾಕೋಬ್ ಡೆಫಿ ಪವರ್ ಪ್ಲೇನಲ್ಲಿ ಬಿಗುವಿನ ದಾಳಿಯನ್ನು ನಡೆಸಿ ಭಾರತ ತಂಡಕ್ಕೆ ಕಾಡಬೇಕಿದೆ. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ನಾಯಕ ಮಿಚಲ್ ಸ್ಯಾಂಟ್ನರ್ ಹಾಗೂ ಇಶ್ ಸೋಧಿ ಸ್ಪಿನ್ ಮೋಡಿ ನಡೆಸುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಗೆಲುವಿನ ಅವಶ್ಯಕತೆ ಇದೆ. ಅಂದಾಗ ಸರಣಿಯಲ್ಲಿ ಪುಟಿದೇಳುವ ಆಸೆ ಫಲಿಸುತ್ತದೆ.