IND vs NZ 3rd T20: ಭಾರತ vs ನ್ಯೂಜಿಲೆಂಡ್ ಫ್ಯಾಂಟಸಿ ಡ್ರೀಮ್ ಟೀಂ, ಆಡುವ ಬಳಗ, ಲೈವ್ ಸ್ಟ್ರೀಮಿಂಗ್ ವಿವರ

ಬುಧವಾರ, ಫೆಬ್ರವರಿ 1ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಅಂತಿಮ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಸೆಣಸಾಡಲಿವೆ. ಸದ್ಯ ಎರಡೂ ತಮಡಗಳು ತಲಾ ಒಂದೊಂದು ಪಂದ್ಯ ಗೆಲ್ಲುವ ಮೂಲಕ ಸರಣಿ 1-1ರಲ್ಲಿ ಸಮಬಲ ಸಾಧಿಸಿವೆ.
ಆತಿಥೇಯ ಭಾರತ ತಂಡಕ್ಕೆ ಕಳವಳಕಾರಿ ಅಂಶವೆಂದರೆ, ಭಾರತದ ಆರಂಭಿಕ ಬ್ಯಾಟರ್‌ಗಳಾದ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಅಗ್ರ ಕ್ರಮಾಂಕದಲ್ಲಿ ಭದ್ರ ಬುನಾದಿ ಹಾಕಲು ವಿಫಲರಾಗುತ್ತಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿರುವ ಈ ಇಬ್ಬರು ಯುವ ಬ್ಯಾಟರ್‌ಗಳು ಟಿ20 ಸ್ವರೂಪದಲ್ಲಿ ಕಳಪೆ ಫಾರ್ಮ್ ನೀಡುತ್ತಿದ್ದಾರೆ.
ಹೀಗಾಗಿ, ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರಲ್ಲಿ ಒಬ್ಬರು ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಪೃಥ್ವಿ ಶಾ ಅವರಿಗೆ ಆಡುವ 11ರ ಬಳಗದಲ್ಲಿ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ.

ಹಾರ್ದಿಕ್ ಪಾಂಡ್ಯ ನಾಯಕತ್ವ ಕೌಶಲ್ಯ ಹೊಗಳಿದ ಲಾಕಿ ಫರ್ಗುಸನ್
ಇನ್ನು ಬೌಲಿಂಗ್‌ನಲ್ಲಿ ಯುಜ್ವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಅವರಲ್ಲಿ ಒಬ್ಬರು ವೇಗಿ ಉಮ್ರಾನ್ ಮಲಿಕ್‌ಗೆ ಅವಕಾಶ ನೀಡಲಿದ್ದಾರೆ. ವಾಷಿಂಗ್ಟನ್ ಸುಂದರ್ ಈಗಾಗಲೇ ಸ್ಪಿನ್ ಆಲ್‌ರೌಂಡರ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಮೂರನೇ ಟಿ20 ಪಂದ್ಯಕ್ಕೂ ಮುನ್ನ ಮಾತನಾಡಿದ ಕಿವೀಸ್ ಆಲ್‌ರೌಂಡರ್ ಲಾಕಿ ಫರ್ಗುಸನ್, ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವ ಕೌಶಲ್ಯವನ್ನು ಹೊಗಳಿದರು ಮತ್ತು ಪಾಂಡ್ಯ ನಾಯಕತ್ವದ ಶೈಲಿಯು ಕೇನ್ ವಿಲಿಯಮ್ಸನ್ ನಾಯಕತ್ವ ರೀತಿ ಇದೆ ಎಂದರು.

ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್. ಬುಧವಾರ, ಫೆಬ್ರವರಿ 1ರಂದು 3ನೇ ಟಿ20 ಪಂದ್ಯ ನಡೆಯಲಿದೆ.
ಪಂದ್ಯದ ಸಮಯ: ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಟಾಸ್ ಸಮಯ ಸಂಜೆ 6.30ಕ್ಕೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ ಮತ್ತು ಡಿಸ್ನಿ + ಹಾಟ್ ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.
ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯದ ಫ್ಯಾಂಟಸಿ ಡ್ರೀಮ್ ಟೀಂ
ವಿಕೆಟ್ ಕೀಪರ್: ಡೆವೊನ್ ಕಾನ್ವೇ
ಬ್ಯಾಟ್ಸ್‌ಮನ್‌ಗಳು: ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್ (ನಾಯಕ)
ಆಲ್‌ರೌಂಡರ್‌ಗಳು: ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ವಾಷಿಂಗ್ಟನ್ ಸುಂದರ್ (ಉಪನಾಯಕ)
ಬೌಲರ್‌ಗಳು: ಇಶ್ ಸೋಧಿ, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್

ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications