IND vs NZ 3rd T20: ಭಾರತಕ್ಕೆ 154 ರನ್ ಗುರಿ ನೀಡಿದ ನ್ಯೂಜಿಲೆಂಡ್
ಗುವಾಹಟಿ: ಭರವಸೆಯ ಬೌಲರ್‌ಗಳ ಬಿಗುವಿನ ದಾಳಿಯ ನೆರವಿನಿಂದ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿದೆ.
ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಮಾಡಲು ಮುಂದಾಯಿತು. ಈ ವೇಳೆ ಸೂರ್ಯ ಪಡೆ ಎರಡು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿಯಿತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಡೆವೋನ್ ಕಾನ್ವೇ (1) ಇಲ್ಲದ ಹೊಡೆತಕ್ಕೆ ಮುಂದಾಗಿ ಹರ್ಷಿತ್ ರಾಣಾ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಕ್ಯಾಚ್ ನೀಡಿದರು. ವಿಕೆಟ್ ಕೀಪರ್ ಟಿಮ್ ಸಿಫರ್ಟ್ (12) ಜಸ್ಪ್ರೀತ್ ಬುಮ್ರಾ ಅವರನ್ನು ತಪ್ಪಾಗಿ ಗ್ರಹಿಸಿ ಬೋಲ್ಡ್ ಆದರು. ಮಧ್ಯಮ ಕ್ರಮಾಂಕದಲ್ಲಿ ರಚಿನ್ ರವೀಂದ್ರ (4) ರನ್ ಕಲೆ ಹಾಕುವಲ್ಲಿ ವಿಫಲರಾದರು.

34 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ನ್ಯೂಜಿಲೆಂಡ್ ತಂಡಕ್ಕೆ ಗ್ಲೆನ್ ಫಿಲಿಪ್ಸ್ ಹಾಗೂ ಮಾರ್ಕ್ ಚಾಂಪಮನ್ ಜೋಡಿ ಆಧಾರವಾಯಿತು.ಈ ಜೋಡಿ ತಂಡ ಉತ್ತಮ ಮೊತ್ತ ಕಲೆ ಹಾಕುವತ್ತ ದೃಷ್ಟಿ ನೆಡುವಂತೆ ಮಾಡಿತು. ಈ ಜೋಡಿ 41 ಎಸೆತಗಳಲ್ಲಿ 52 ರನ್ ಸೇರಿಸಿತು. ಈ ಹಂತದಲ್ಲಿ ಮಾರ್ಕ್ ಚಾಂಪಮನ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 32 ರನ್ ಸಿಡಿಸಿ ಔಟ್ ಆದರು. ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಡ್ಯಾರಿಲ್ ಮಿಚಲ್ 14 ರನ್ ಬಾರಿಸಿದರು.
ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಗ್ಲೆನ್ ಫಿಲಿಪ್ಸ್ ಭರ್ಜರಿ ಜೊತೆಯಟದ ಕಾಣಿಕೆ ನೀಡಿದರು. ಇವರು 40 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 48 ರನ್ ಸಿಡಿಸಿದರು. ನಾಯಕ ಮಿಚಲ್ ಸ್ಯಾಂಟ್ನರ್ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 27 ರನ್ ಬಾರಿಸಿದರು. ಕೈಲ್ ಜೇಮಿಸನ್ (3), ಮ್ಯಾಟ್ ಹೆನ್ರಿ (1), ಇಶ್ ಸೋದಿ (ಅಜೇಯ 2), ಜಾಕೋಬ್ ಡಫಿ (ಅಜೇಯ 4) ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಅಂತಿಮವಾಗಿ ನ್ಯೂಜಿಲೆಂಡ್ 9 ವಿಕೆಟ್‌ಗೆ 153 ರನ್ ಸೇರಿಸಿತು.
ಬುಮ್ರಾ ಕಮಾಲ್
ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕೆ ಇಳಿಯದ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಮೂರನೇ ಪಂದ್ಯದಲ್ಲಿ ಕಣಕ್ಕೆ ಇಳಿದರು. ಜಸ್ಪ್ರೀತ್ ಬುಮ್ರಾ ಇನ್ನಿಂಗ್ಸ್‌ನ ಆರನೇ ಓವರ್ ಬೌಲಿಂಗ್ ಮಾಡುವ ಅವಕಾಶ ಪಡೆದರು. ಬುಮ್ರಾ ತಮ್ಮ ಮೊದಲ ಓವರ್‌ನ ಮೊದಲ ಎಸೆತವನ್ನು ಆಫ್-ಸ್ಟಂಪ್ ಕಡೆಗೆ ಎಸೆದರು. ಈ ಚೆಂಡನ್ನು ತಪ್ಪಾಗಿ ಗ್ರಹಿಸಿದ ಆರಂಭಿಕ ಆಟಗಾರ ಟಿಮ್ ಸೀಫರ್ಟ್ ರಕ್ಷಣಾತ್ಮಕ ಆಟವನ್ನು ಆಡಲು ಹೋಗಿ ಬೋಲ್ಡ್ ಆದರು. ಬಳಿಕ ಈ ಚೆಂಡನ್ನು ನೋಡಿದ ಸಿಫರ್ಟ್ ಅಚ್ಚರಿಗೊಂಡರು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲಿಂಗ್ ಮಾಡಿ 17 ರನ್ ನೀಡಿ 3 ವಿಕೆಟ್ ಉರುಳಿಸಿದರು. ಹಾರ್ದಿಕ್ ಪಾಂಡ್ಯ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications