IND vs NZ 3rd T20: ಪಂದ್ಯದ ನೇರಪ್ರಸಾರ, ಪ್ಲೇಯಿಂಗ್ ಇಲೆವೆನ್, ಸಮಯ, ಪಿಚ್ ವರದಿ ಇಲ್ಲಿದೆ
ಗುವಾಹಟಿ: ಬ್ಯಾಟರ್‌ಗಳ ಪಾಲಿನ ಸ್ವರ್ಗ ಎಂದೇ ಕರೆಸಿಕೊಳ್ಳುವ ಬರ್ಸಾಪರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಕಿವೀಸ್ ತಂಡಗಳು ಹೋರಾಟ ನಡೆಸಲಿವೆ. ಐದು ಟಿ20 ಪಂದ್ಯಗಳ ಸರಣಿಯ ಮೂರನೇ ಪಂದ್ಯ ಇದಾಗಿದ್ದು, ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಈಗಾಗಲೇ ಆಡಿರುವ ಎರಡೂ ಟಿ20 ಪಂದ್ಯಗಳನ್ನು ಗೆದ್ದಿದ್ದು ಸರಣಿಯಲ್ಲಿ 2-0 ಮುನ್ನಡೆಯಲ್ಲಿದೆ. ಮೂರನೇ ಪಂದ್ಯವನ್ನು ಗೆದ್ದು, ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆ ಸರಣಿ ಗೆಲುವಿನ ನಗೆ ಬೀರುವ ಇರಾದೆ ಸೂರ್ಯ ಪಡೆಯದ್ದಾಗಿದೆ.
ನ್ಯೂಜಿಲೆಂಡ್ ತಂಡಕ್ಕೂ ಇದು ಮಹತ್ವದ ಪಂದ್ಯವಾಗಿದೆ. ಈ ಪಂದ್ಯ ಪ್ರವಾಸಿ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಇರಾದೆ ಕಿವೀಸ್ ತಂಡದ್ದಾಗಿದೆ. ಆದರೆ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರರು ಜವಾಬ್ದಾರಿಯುತ ಆಟವನ್ನು ಆಡುವ ಅನಿವಾರ್ಯತೆ ಇದೆ. ಈ ಹಿಂದಿನ ಎರಡು ಪಂದ್ಯಗಳಲ್ಲಿ ಮಾಡಿದ ತಪ್ಪನ್ನು ಮೆಟ್ಟಿನಿಂತಲ್ಲಿ ಮಾತ್ರ ಗೆಲುವು ಸಾಧಿಸಲು ಸಾಧ್ಯ.

ಈ ಪಿಚ್‌ನಲ್ಲಿ ಬ್ಯಾಟರ್‌ಗಳ ಆರ್ಭಟ ಜೋರಾಗಿರುತ್ತದೆ. ಈ ಪಂದ್ಯದಲ್ಲಿ ಮತ್ತೊಮ್ಮೆ ಬಿಗ್ ಸ್ಕೊರ್ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಭಿಮಾನಿಗಳಿಗೆ ರಸದೌತಣ ಪಕ್ಕಾ ಆದಂತೆ ಕಾಣುತ್ತಿದೆ. ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವ ಮಿಚೆಲ್ ಸ್ಯಾಂಟ್ನರ್ ಪಡೆಗೆ ಇಂದು ಅಕ್ಷರಶಃ 'ಅಗ್ನಿಪರೀಕ್ಷೆ'. ನ್ಯೂಜಿಲೆಂಡ್ ತಂಡ ಸಹ ಟಿ20 ವಿಶ್ವಕಪ್‌ಗೂ ಮುನ್ನ ಲಯಕ್ಕೆ ಮರಳುವ ಅನಿವಾರ್ಯತೆ ಇದೆ.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಇಶಾನ್ ಕಿಶನ್ ಎರಡನೇ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇವರ ಮೇಲೆ ಈಗ ನಿರೀಕ್ಷೆಗಳು ಹೆಚ್ಚಿವೆ. ನಾಯಕ ಸೂರ್ಯಕುಮಾರ್ ಯಾದವ್ ಲಯಕ್ಕೆ ಮರಳಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಇನ್ನು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಿದರೆ ಟೀಮ್ ಇಂಡಿಯಾ ಸರಣಿ ಗೆಲುವಿನ ಆಸೆ ಫಲಿಸುತ್ತದೆ. ಈ ಪಂದ್ಯ ಆರಂಭವಾಗುವ ಸಮಯ, ಪಿಚ್ ವರದಿ, ನೇರ ಪ್ರಸಾರದ ಮಾಹಿತಿ ಇಲ್ಲಿದೆ.
ಪಿಚ್ ವರದಿ ಏನು ಹೇಳುತ್ತದೆ?
ಗುವಾಹಟಿಯಲ್ಲಿ ನಡೆದ ಕಳೆದ ಎರಡು ಟಿ20 ಪಂದ್ಯಗಳು ಹೈ-ಸ್ಕೋರಿಂಗ್ ಆಗಿದ್ದವು . ಹಾಗಾಗಿ ಈ ಬಾರಿಯೂ ರನ್ ಮಳೆ ನಿರೀಕ್ಷಿಸಬಹುದಾಗಿದೆ. ಇಲ್ಲಿನ ಪಿಚ್ ಕಪ್ಪು ಮಣ್ಣಿನಿಂದ ಕೂಡಿದ್ದಾಗಿರಬಹುದು. ಟಾಸ್ ಗೆದ್ದ ತಂಡ ಫೀಲ್ಡಿಂಗ್ ಮಾಡಲು ಮುಂದಾಗುತ್ತದೆ. ಪಂದ್ಯಕ್ಕೆ ಇಬ್ಬನಿಯ ಕಾಟ ಇರಲಿದೆ.
ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ/ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್/ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್ ಮಹತ್ವದ ಪಂದ್ಯದಲ್ಲಿ ಯಾರಿಗೆಲ್ಲಾ ಕಣಕ್ಕೆ ಇಳಿಸಬಹುದು?
ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಜಾಕೋಬ್ ಡಫಿ, ಇಶ್ ಸೋಧಿ
ಭಾರತ, ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯ ನಡೆಯುವುದು ಎಲ್ಲಿ? ಯಾವಾಗ?
3ನೇ ಟಿ20 ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಅರ್ಧಗಂಟೆ ಮುಂಚಿತವಾಗಿ ಟಾಸ್ ನಡೆಯಲಿದೆ.
ಭಾರತ, ನ್ಯೂಜಿಲೆಂಡ್ ಟಿ20 ಸರಣಿಯನ್ನು ವೀಕ್ಷಿಸುವುದು ಎಲ್ಲಿ?
ಭಾರತ, ನ್ಯೂಜಿಲೆಂಡ್ ನಡುವಣ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಜಿಯೋಹಾಟ್‌ಸ್ಟಾರ್ ಆನ್‌ಲೈನ್‌ನಲ್ಲೂ ನೇರ ಪ್ರಸಾರವನ್ನು ನೋಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications