ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ಮಳೆಯಿಂದಾಗಿ ಟೈನಲ್ಲಿ ಅಂತ್ಯಗೊಂಡ ಮೂರನೇ ಟಿ20 ಪಂದ್ಯ, ಸರಣಿ ಗೆದ್ದ ಭಾರತ

IND vs NZ: 3rd T20I Ends In DLS Tie, India Clinch The Series 1-0, Siraj Man of The Player

ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನಿರ್ಣಾಯಕ ಪಂದ್ಯ ಮಳೆಯಿಂದಾಗಿ ಟೈನಲ್ಲಿ ಅಂತ್ಯಗೊಂಡಿದೆ. ಭಾರತ 1-0 ಅಂತರದಲ್ಲಿ 3 ಪಂದ್ಯಗಳ ಟಿ20 ಸರಣಿಯನ್ನುಗೆದ್ದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 160 ರನ್‌ ಗಳಿಸಿತು. 161 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ಮುಗ್ಗರಿಸಿತು. ರಿಷಬ್ ಪಂತ್ ಮತ್ತು ಇಶಾನ್ ಕಿಶನ್ ಮತ್ತೆ ನಿರಾಸೆ ಮೂಡಿಸಿದರು. ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ ಗೋಲ್ಡನ್ ಡಕ್‌ಗೆ ಔಟ್ ಆದರು.

ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಕಳಪೆ ಪ್ರದರ್ಶನ: ನಾಯಕತ್ವ ತೊರೆದ ನಿಕೋಲಸ್ ಪೂರನ್ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಕಳಪೆ ಪ್ರದರ್ಶನ: ನಾಯಕತ್ವ ತೊರೆದ ನಿಕೋಲಸ್ ಪೂರನ್

ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ ಅಜೇಯ 30 ರನ್ ಗಳಿಸಿದ್ದರು. 9 ಓವರ್ ಗಳಲ್ಲಿ ಭಾರತ 4 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದ್ದಾಗ, ಮಳೆಯಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಮಳೆ ಹೆಚ್ಚಾದ ಕಾರಣ ಪಂದ್ಯವನ್ನು ರದ್ದುಗೊಳಿಸುವ ತೀರ್ಮಾನ ಮಾಡಲಾಯಿತು.

ಡಿಎಲ್‌ಎಸ್ ನಿಯಮದ ಪ್ರಕಾರ ಭಾರತ ಗೆಲ್ಲಲು 9 ಓವರ್ ಗಳಲ್ಲಿ 76 ರನ್ ಗಳಿಸಬೇಕಿತ್ತು. ಆದರೆ ಭಾರತ 75 ರನ್ ಗಳಿಸಿದ್ದ ಕಾರಣ, ಪಂದ್ಯವನ್ನು ಟೈ ಆಗಿದೆ ಎಂದು ಘೋಷಿಸಲಾಯಿತು. ಭಾರತ 1-0 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು.

ಗ್ಲೆನ್ ಫಿಲಿಪ್ಸ್, ಡೆವೊನ್ ಕಾನ್ವೇ ಉತ್ತಮ ಬ್ಯಾಟಿಂಗ್

ಗ್ಲೆನ್ ಫಿಲಿಪ್ಸ್, ಡೆವೊನ್ ಕಾನ್ವೇ ಉತ್ತಮ ಬ್ಯಾಟಿಂಗ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಆರಂಭದಲ್ಲೇ ಆಘಾತ ಅನುಭವಿಸಿತು. ಆರಂಭಿಕ ಬ್ಯಾಟರ್ ಫಿನ್ ಅಲೆನ್ ವೈಫಲ್ಯ ಮುಂದುವರೆಸಿದರು. ಕೇವಲ 4 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು. ವಿಲಿಯಮ್ಸನ್ ಬದಲಿಗೆ ಅವಕಾಶ ಪಡೆದ ಮಾರ್ಕ್ ಚಾಪ್ಮನ್ 12 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು.

ಆದರೆ, ಡೆವೊನ್ ಕಾನ್ವೆ ಮತ್ತು ಗ್ಲೆನ್ ಫಿಲಿಪ್ಸ್ ನ್ಯೂಜಿಲೆಂಡ್ ತಂಡಕ್ಕೆ ಆಸರೆಯಾದರು. ಗ್ಲೆನ್ ಫಿಲಿಪ್ಸ್ 33 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್ ಸಹಿತ 54 ರನ್ ಗಳಿಸಿದರು. 146 ರನ್‌ಗಳಿದ್ದಾಗ 3 ವಿಕೆಟ್‌ ಕಳೆದುಕೊಂಡಿದ್ದ ನ್ಯೂಜಿಲೆಂಡ್, 149 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ 19.4 ಓವರ್ ಗಳಲ್ಲಿ 160 ರನ್ ಗಳಿಗೆ ಆಲೌಟ್ ಆಯಿತು.

ಸಿರಾಜ್, ಅರ್ಷದೀಪ್ ಉತ್ತಮ ಬೌಲಿಂಗ್

ಸಿರಾಜ್, ಅರ್ಷದೀಪ್ ಉತ್ತಮ ಬೌಲಿಂಗ್

ಭಾರತದ ಪರವಾಗಿ ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಅದರಲ್ಲೂ, ಮೊಹಮ್ಮದ್ ಸಿರಾಜ್ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. 4 ಓವರ್ ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಕೂಡ ಅಂತಿಮ ಓವರ್ ಗಳಲ್ಲಿ ಉತ್ತಮ ಬೌಲಿಂಗ್ ಮಾಡಿದರು. 4 ಓವರ್ ಗಳಲ್ಲಿ 37 ರನ್ ನೀಡಿ 4 ವಿಕೆಟ್ ಪಡೆದರು. ಹರ್ಷಲ್ ಪಟೇಲ್ 1 ವಿಕೆಟ್ ಪಡೆದರು.

ಮೊಹಮ್ಮದ್ ಸಿರಾಜ್ ಅತ್ಯುತ್ತಮ ಪ್ರದರ್ಶನಕ್ಕಾಗಿ ಪಂದ್ಯದ ಆಟಗಾರ ಪ್ರಶಸ್ತಿ ಪಡೆದರು. ಸೂರ್ಯಕುಮಾರ್ ಯಾದವ್ ಅಮೋಘ ಶತಕಕ್ಕಾಗಿ ಸರಣಿಯ ಆಟಗಾರ ಪ್ರಶಸ್ತಿ ಪಡೆದರು.

ಎರಡೂ ತಂಡಗಳ ಆಡುವ ಬಳಗ

ಎರಡೂ ತಂಡಗಳ ಆಡುವ ಬಳಗ

ಭಾರತ: ಇಶಾನ್ ಕಿಶನ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಟಿಮ್ ಸೌಥಿ(ನಾಯಕ), ಲಾಕಿ ಫರ್ಗುಸನ್

Story first published: Tuesday, November 22, 2022, 16:38 [IST]
Other articles published on Nov 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X