IND vs NZ 4th T20: ಪಂದ್ಯದ ಸಮಯ, ನೇರ ಪ್ರಸಾರ, ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಟಿ20 ಪಂದ್ಯ ಬುಧವಾರ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ, ಮತ್ತೊಂದು ಸರಣಿ ಕ್ಲೀನ್ ಸ್ವೀಪ್‌ಗೆ ಹತ್ತಿರವಾಗುವ ಕನಸು ಭಾರತ ತಂಡದ್ದಾಗಿದೆ. ಈಗಾಗಲೇ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 3-0 ಮುನ್ನಡೆ ಸಾಧಿಸಿದೆ. ನ್ಯೂಜಿಲೆಂಡ್ ಮೊದಲ ಗೆಲುವಿನ ಹುಡುಕಾಟದಲ್ಲಿದೆ.
ಟೀಮ್ ಇಂಡಿಯಾದ ಪರ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಟಿ20 ವಿಶ್ವಕಪ್ ಸನಿಹದ ಸಮಯದಲ್ಲಿ ಸಂಜು ಸ್ಯಾಮ್ಸನ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದಾರೆ. ಮುಂದಿನ ಪಂದ್ಯಗಳಲ್ಲೂ ಸಂಜು ಇದೇ ರೀತಿಯ ಆಟವನ್ನು ಆಡಿದಲ್ಲಿ ಅವರ ಸ್ಥಾನಕ್ಕೂ ಕುತ್ತು ಬರಬಹುದಾಗಿದೆ. ಇನ್ನು ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ ನಡೆಸುತ್ತಿರುವುದು ಸಂಜು ಸ್ಯಾಮ್ಸನ್ ಅವರ ಮುಖದಲ್ಲಿ ಚಿಂತೆಯ ಗೆರೆಗಳು ಏಳುವಂತೆ ಮಾಡಿವೆ.

ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದಕ್ಕೆ ಇನ್ನೇರೆಡು ಪಂದ್ಯಗಳಲ್ಲಿ ಉತ್ತರ ಸಿಗಲಿದೆ. ಟೀಮ್ ಇಂಡಿಯಾದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಇದು ಬೆಸ್ಟ್ ಟೈಮ್ ಆಗಿದೆ. ಮಧ್ಯಮ ಕ್ರಮಾಂಕದಲ್ಲಿ ಭರವಸೆಯ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇನ್ನು ವೇಗದ ಬೌಲರ್‌ಗಳು ಹಾಗೂ ಸ್ಪಿನ್ ಬೌಲರ್‌ಗಳು ಲಯದಲ್ಲಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರರು ಸಹ ಒತ್ತಡದಲ್ಲಿದ್ದಾರೆ. ಸರಣಿಯಲ್ಲಿ ಕಿವೀಸ್ ತಂಡ ಮೊದಲ ಗೆಲುವಿನ ನಗೆ ಬೀರಲು ಸಂಘಟಿತ ಆಟವನ್ನು ಆಡುವ ಅನಿವರ್ಯತೆ ಇದೆ. ಪಂದ್ಯದ ಸಮಯ, ನೇರ ಪ್ರಸಾರ, ಪ್ಲೇಯಿಂಗ್ ಇಲೆವೆನ್, ಪಿಚ್ ವರದಿಯ ಬಗ್ಗೆ ಮಾಹಿತಿ ಇಲ್ಲಿದೆ.
ವಿಶಾಖಪಟ್ಟಣಂನ ಪಿಚ್ ಹೇಗಿದೆ?
ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಪೂರಕವಾಗಿದೆ. ಈ ಪಿಚ್‌ನಲ್ಲಿ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದಾಗಿದೆ. ಈ ಪಿಚ್‌ನಲ್ಲಿ ಮೊದಲ ಇನಿಂಗ್ಸ್ ಮೊತ್ತ ಸುಮಾರು 170-180 ರನ್ ಇರುತ್ತದೆ. ಹೊಸ ಚೆಂಡಿನೊಂದಿಗೆ ವೇಗಿಗಳು ಆರಂಭದಲ್ಲಿ ಅಬ್ಬರಿಸಿದರೆ, ಸ್ಪಿನ್ ಬೌಲರ್‌ಗಳು ಸಹ ಬಿಗುವಿನ ದಾಳಿ ನಡೆಸ ಮಿಂಚಬಹುದು. ಎರಡನೇ ಇನಿಂಗ್ಸ್‌ನಲ್ಲಿ ಮಂಜು ಬೀಳುವ ಸಾಧ್ಯತೆ ಇದ್ದು, ಟಾಸ್ ಮಹತ್ವದ ಪಾತ್ರವನ್ನು ವಹಿಸಲಿದೆ.
4ನೇ ಟಿ20 ಪಂದ್ಯಕ್ಕೆ ಭಾರತದ ಆಡುವ ಬಳಗ ಹೇಗಿರಲಿದೆ?
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್/ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ/ರವಿ ಬಿಷ್ಣೋಯ್.
ನ್ಯೂಜಿಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ಡೆವೊನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.
ಭಾರತ, ನ್ಯೂಜಿಲೆಂಡ್ ನಡುವಿನ ಪಂದ್ಯ ನಡೆಯುವುದು ಯಾವಾಗ?
ಭಾರತ, ನ್ಯೂಜಿಲೆಂಡ್ ನಡುವಿನ ಪಂದ್ಯ ಸಂಜೆ 7ಕ್ಕೆ ನಡೆಯಲಿದ್ದು, ಟಾಸ್ ಪಂದ್ಯಕ್ಕೂ ಅರ್ಧಗಂಟೆ ಮುಂಚೆ ನಡೆಯಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಎಲ್ಲಿ ನೋಡಬಹುದು?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications