IND vs NZ 4th T20: ಬದಲಿ ಆಟಗಾರರಿಗೆ ತಂಡದಲ್ಲಿ ಸಿಗುತ್ತಾ ಚಾನ್ಸ್: ಅಭಿಷೇಕ್, ಸೂರ್ಯ ಪ್ರಮುಖ ಆಕರ್ಷಣೆ
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ನಾಲ್ಕನೇ ಟಿ20 ಪಂದ್ಯ ಬುಧವಾರ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ, ಕ್ಲೀನ್ ಸ್ವೀಪ್‌ನತ್ತ ದೃಷ್ಟಿ ಹರಿಸುವ ಇರಾದೆ ಸೂರ್ಯಕುಮಾರ್ ಯಾದವ್ ಪಡೆಯದ್ದಾಗಿದೆ. ಇನ್ನು ಸತತ ಸೋಲುಗಳಿಂದ ಕಂಗೆಟ್ಟಿರುವ ನ್ಯೂಜಿಲೆಂಡ್ ನಾಲ್ಕನೇ ಟಿ20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯದ ಟ್ರ್ಯಾಕ್‌ಗೆ ಮರಳುವ ಅನಿವಾರ್ಯತೆ ಇದೆ. ಈ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲುವ ಹಾಟ್ ಫೇವರಿಟ್ ಆಗಿದೆ.
ಟೀಮ್ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮುಖಭಂಗ ಅನುಭವಿಸಿತ್ತು. ಬಳಿಕ ನಡೆದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದೆ. ಈ ವೇಳೆ ತಂಡದ ಆಟಗಾರರ ಭರ್ಜರಿ ಪ್ರದರ್ಶನ ನೀಡಿ ಜಯದಲ್ಲಿ ತಮ್ಮ ಕಾಣಿಕೆ ನೀಡುತ್ತಿದ್ದಾರೆ. ಟಿ20 ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾದ ಆಟಗಾರರು ಲಯಕ್ಕೆ ಮರಳಿರುವುದು ತಂಡಕ್ಕೆ ಬೂಸ್ಟ್ ನೀಡಿದಂತೆ ಆಗಿದೆ.

ಅಂಕಿ ಅಂಶಗಳ ಲೆಕ್ಕಾಚಾರದಲ್ಲೂ ಟೀಮ್ ಇಂಡಿಯಾ ಬಲಾಢ್ಯವಾಗಿದೆ. ತವರಿನಲ್ಲಿ ಮತ್ತೊಂದು ಸರಣಿಯನ್ನು ಕ್ಲೀನ್ ಸ್ವೀಪ್ ಸಾಧನೆ ಮಾಡಿ, ನ್ಯೂಜಿಲೆಂಡ್ ತಂಡಕ್ಕೆ ಪೆಟ್ಟು ನೀಡುವ ಇರಾದೆ ಭಾರತ ತಂಡದ್ದಾಗಿದೆ. ಭಾರತ ತಂಡಕ್ಕೆ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೊಂಚ ತಲೆ ನೋವು ತಂದಿದ್ದಾರೆ. ಇವರು ಸತತ ಮೂರು ಪಂದ್ಯಗಳಲ್ಲಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇವರು ಟಿ20 ವಿಶ್ವಕಪ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಮುಂದಿನ ಪಂದ್ಯಗಳಲ್ಲಿ ಅಬ್ಬರದ ಪ್ರದರ್ಶನ ನೀಡುವುದು ಅನಿವಾರ್ಯವಾಗಿದೆ.
ಅಭಿಷೇಕ್ ಮೇಲೆ ಕಣ್ಣು
ಟೀಮ್ ಇಂಡಿಯಾದ ಯುವ ಸ್ಫೋಟಕ ಆಟಗಾರ ಅಭಿಷೇಕ್ ಶರ್ಮಾ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಮೂರನೇ ಟಿ20 ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿ ಮಿಂಚಿದ್ದರು. ನಾಲ್ಕನೇ ಟಿ20 ಪಂದ್ಯದಲ್ಲಿ ಇವರು ಹೇಗೆ ಆಡಲಿದ್ದಾರೆ ಎಂಬ ಬಗ್ಗೆ ಕುತೂಹಲ ಮನೆ ಮಾಡಿದೆ. ಇನ್ನು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಲಯಕ್ಕೆ ಮರಳಿದ್ದಾರೆ. ಇವರು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವುದು ತಂಡಕ್ಕೆ ಬಲ ತಂದಿದೆ. ಮೂರನೇ ಕ್ರಮಾಂಕದಲ್ಲಿ ಆಡುವ ಅವಕಾಶವನ್ನು ಪಡೆದು ಅಬ್ಬರಿಸುತ್ತಿರುವ ಇಶಾನ್ ಕಿಶನ್ ಅವರ ಮೇಲೆ ಭರವಸೆ ಹೆಚ್ಚಿದೆ.

ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳಲಿರುವ ಶಿವಂ ದುಬೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ. ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಬಿಗುವಿನ ದಾಳಿಯ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡಬೇಕಿದೆ. ಸ್ಪಿನ್ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳುವ ವರುಣ್ ಚಕ್ರವರ್ತಿ ಕಮಾಲ್ ನಡೆಸುವ ಅವಶ್ಯಕತೆ ಇದೆ.
ಒತ್ತಡದಲ್ಲಿ ನ್ಯೂಜಿಲೆಂಡ್
ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ನೀಡಿದ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ತಂಡದ ಸ್ಟಾರ್ ಬ್ಯಾಟರ್‌ಗಳು ಜವಾಬ್ದಾರಿ ಬ್ಯಾಟಿಂಗ್ ನಡೆಸಬೇಕಿದೆ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಅವರು ಭಾರತದ ಬೌಲರ್‌ಗಳನ್ನು ಕಟ್ಟಿಹಾಕಬೇಕಿದೆ. ಗ್ಲೆನ್ ಫಿಲಿಪ್ಸ್ ಉತ್ತಮ ಲಯದಲ್ಲಿದ್ದು ಇವರಿಗೆ ಬೇರೆ ಬ್ಯಾಟರ್‌ಗಳು ಉತ್ತಮ ಸಾಥ್ ನೀಡುವ ಅನಿವಾರ್ಯತೆ ಇದೆ. ಡ್ಯಾರಿಲ್ ಮಿಚಲ್ ಏಕದಿನ ಸರಣಿಯಲ್ಲಿ ಆಡಿದ ಧಾಟಿಯಲ್ಲಿ ಬ್ಯಾಟಿಂಗ್ ನಡೆಸಿದರೆ ಮೊದಲ ಗೆಲುವಿನ ನಗೆ ಬೀರಬಹುದು. ಸ್ಪಿನ್ ವಿಭಾಗದಲ್ಲಿ ಇಶ್ ಸೋಧಿ ಹಾಗೂ ಮಿಚೆಲ್ ಸ್ಯಾಂಟ್ನರ್ ಪರಿಣಾಮಕಾರಿ ಬೌಲಿಂಗ್ ದಾಳಿ ನಡೆಸಬೇಕಿದೆ. ವೇಗದ ಬೌಲರ್‌ಗಳು ಪವರ್ ಫುಲ್ ದಾಳಿ ಸಂಘಟಿಸುವ ಅನಿವಾರ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications