IND vs NZ 5th T20: ಪಂದ್ಯ ನಡೆಯುವ ಸಮಯ, ನೇರಪ್ರಸಾರ, ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ
ಟಿ20 ವಿಶ್ವಕಪ್‌ಗೆ ತಯಾರಿ ನಡೆಸಲು ಶನಿವಾರ ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐದನೇ ಟಿ20 ಪಂದ್ಯ ಕೊನೆಯ ಅವಕಾಶವಾಗಿರಲಿದೆ. ಐಸಿಸಿ ಮೆಗಾ ಇವೆಂಟ್‌ನಲ್ಲಿ ತಮ್ಮ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ಕಂಡುಹಿಡಿದುಕೊಳ್ಳಲು ಇದು ಭಾರತ ತಂಡಕ್ಕೆ ಉತ್ತಮ ಅವಕಾಶ. ಈಗಾಗಲೇ ಸರಣಿಯನ್ನು ಗೆದ್ದುಕೊಂಡಿರುವ ಭಾರತ, ಐದನೇ ಟಿ20 ಪಂದ್ಯವನ್ನು ಗೆದ್ದು ಆತ್ಮ ವಿಶ್ವಾಸದಿಂದ ಟಿ20 ವಿಶ್ವಕಪ್‌ಗೆ ಪ್ರಯಾಣ ಬೆಳೆಸಲು ಯೋಜನೆ ಮಾಡಿಕೊಂಡಿದೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಬಲಾಢ್ಯವಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಲಯದಲ್ಲಿರುವುದು ತಂಡಕ್ಕೆ ಬೂಸ್ಟ್ ನೀಡಿದಂತೆ ಆಗಿದೆ. ನಾಯಕ ಸೂರ್ಯಕುಮಾರ್ ಯಾದವ್ ಸ್ಥಿರ ಪ್ರದರ್ಶನ ನೀಡುತ್ತಿರುವುದು ಸಮಾಧಾನ ತಂದಿದೆ. ಅಭಿಷೇಕ್ ಶರ್ಮಾ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸುತ್ತಿದ್ದಾರೆ. ಆದರೆ ಸಂಜು ಸ್ಯಾಮ್ಸನ್ ಅವರು ಈ ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ.

ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಟೀಮ್ ಇಂಡಿಯಾದ ಜೆರ್ಸಿ ತೊಟ್ಟು ಇದೇ ಮೊದಲ ಬಾರಿಗೆ ಸಂಜು ಸ್ಯಾಮ್ಸನ್ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ ಇವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರಲಿವೆ. ಈ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿ ಟಿ20 ವಿಶ್ವಕಪ್ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಆಸೆ ಸಂಜು ಸ್ಯಾಮ್ಸನ್ ಅವರದ್ದಾಗಿದೆ. ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಆಡಿದ 4 ಪಂದ್ಯಗಳಲ್ಲಿ 3-1 ರಿಂದ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ, ಇನ್ನೊಂದು ಗೆಲುವಿನ ಕನಸು ಕಾಣುತ್ತಿದೆ.
ನ್ಯೂಜಿಲೆಂಡ್ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿದ ರೀತಿ ಐದನೇ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಬ್ಬರಿಸುವ ಇರಾದೆಯನ್ನು ಹೊಂದಿದೆ. ಪಂದ್ಯ ನಡೆಯುವ ಸಮಯ, ಪಿಚ್ ವರದಿ, ನೇರ ಪ್ರಸಾರದ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತ ತಂಡದಲ್ಲಿ ಬದಲಾವಣೆ ಕಾಣಬಹುದಾ? ಹೇಗಿರಲಿದೆ ತಂಡ?
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್/ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಹರ್ಷಿತ್ ರಾಣಾ/ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ/ಕುಲದೀಪ್ ಯಾದವ್.
ಅಂತಿಮ ಟಿ20 ಪಂದ್ಯಕ್ಕಾಗಿ ಕಿವೀಸ್ ಆಡುವ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ ನೀಡಬಹುದು?
ಫಿನ್ ಅಲೆನ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಝಾಕ್ ಫೌಲ್ಕ್ಸ್/ಜೇಮ್ಸ್ ನೀಶಮ್, ಮೈಕಲ್ ಬ್ರೇಸ್‌ವೆಲ್/ಇಶ್ ಸೋಧಿ, ಕೈಲ್ ಜಾಮಿಸನ್/ಮ್ಯಾಟ್ ಹೆನ್ರಿ, ಜಾಕೋಬ್ ಡಫಿ.
ಪಿಚ್ ಹೇಗಿರಲಿದೆ?
ತಿರುವನಂತಪುರಂ ಪಿಚ್ ಕಪ್ಪು ಮಣ್ಣಿನಿಂದ ಕೂಡಿರುವ ಸಾಧ್ಯತೆ ಇದೆ. ಈ ಪಿಚ್ ಬ್ಯಾಟರ್‌ಗಳಿಗೆ ಸವಾಲು ಎಸೆಯುವ ಸಂಭವವಿದೆ. ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಪಿಚ್ ನೆರವು ನೀಡಿದರೆ, ಸ್ಪಿನ್ ಬೌಲರ್‌ಗಳು ಸಹ ಈ ಪಿಚ್ ಲಾಭ ಪಡೆಯಬಹುದಾಗಿದೆ. ಇನ್ನು ಈ ಮೈದಾನದಲ್ಲಿ ಈಗಾಗಲೇ 2 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಲಾಗಿದ್ದು, ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ.

ಪಂದ್ಯವನ್ನು ನೋಡುವುದು ಎಲ್ಲಿ?
ಭಾರತ, ನ್ಯೂಜಿಲೆಂಡ್ ನಡುವಣ ಐದನೇ ಹಾಗೂ ಕೊನೆಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಪಂದ್ಯ ನಡೆಯುವ ಸಮಯ ಯಾವಾಗ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ಸಂಜೆ 7ಕ್ಕೆ ಆರಂಭವಾಗಲಿದ್ದು, ಟಾಸ್ ಪಂದ್ಯಕ್ಕೂ ಅರ್ಧಗಂಟೆ ಮುಂಚಿತವಾಗಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications