ಆರಂಭಿಕ ಸ್ಥಾನದ ಚರ್ಚೆಗೆ ವಿರಾಮ ಬಿದ್ದಿದೆ: ಶುಬ್ಮನ್ ಆಟಕ್ಕೆ ತಲೆದೂಗಿದ ಆಕಾಶ್ ಚೋಪ್ರ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಭಾರೀ ಪೈಪೋಟಿಯ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಅದರಲ್ಲೂ ಎರಡೂ ತಂಡಗಳು ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಸಿದ್ದು ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಬ್ಮನ್ ಗಿಲ್ ನೀಡಿದ ಪ್ರದರ್ಶನ ಎಲ್ಲರ ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಸ್ಪೋಟಕ ದ್ವಿಶತಕ ಸಿಡಿಸಿದ ಗಿಲ್ ಸಾಕಷ್ಟು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಗಿಲ್ ನೀಡಿರುವ ಈ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಹೊಸ ಭರವಸೆಗೆ ಕಾರಣವಾಗಿದೆ. ಅದರಲ್ಲೂ ಆರಂಭಿಕ ಸ್ಥಾನದ ಚರ್ಚೆಗೆ ಶುಬ್ಮನ್ ಗಿಲ್ ಪ್ರದರ್ಶನ ಸ್ಪಷ್ಟ ಉತ್ತರ ನೀಡಿದಂತಾಗಿದೆ. ಈ ಬಗ್ಗೆ ಆಕಾಶ್ ಚೋಪ್ರ ಕೂಡ ಪ್ರತಿಕ್ರಿಯೆ ನೀಡಿದ್ದು ಶುಬ್ಮನ್ ಗಿಲ್ ಬ್ಯಾಟಿಂಗ್ ಬಗ್ಗೆ ಭಾರೀ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

Ind vs Nz 1st ODI: ಆ ವೇಗಿಯನ್ನು ಪ್ಲೇಯಿಂಗ್ XI ನಿಂದ ಹೊರಗಿಟ್ಟು ತಪ್ಪು ಮಾಡಿತಾ ಟೀಂ ಇಂಡಿಯಾ?Ind vs Nz 1st ODI: ಆ ವೇಗಿಯನ್ನು ಪ್ಲೇಯಿಂಗ್ XI ನಿಂದ ಹೊರಗಿಟ್ಟು ತಪ್ಪು ಮಾಡಿತಾ ಟೀಂ ಇಂಡಿಯಾ?

ಆರಂಭಿಕ ಸ್ಥಾನದ ಚರ್ಚೆ ಅಂತ್ಯ

ಆರಂಭಿಕ ಸ್ಥಾನದ ಚರ್ಚೆ ಅಂತ್ಯ

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಆಕಾಶ್ ಚೋಪ್ರ ಶುಬ್ಮನ್ ಗಿಲ್ ಪ್ರದರ್ಶನದ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಭಾರತೀಯ ತಂಡದ ಆರಂಭಿಕ ಸ್ಥಾನದ ಬಗ್ಗೆ ಎದ್ದಿರುವ ಚರ್ಚೆಗೆ ಭರ್ಜರಿ ದ್ವಿಶತಕ ಸಿಡಿಸುವ ಮೂಲಕ ಶುಬ್ಮನ್ ಗಿಲ್ ಅಂತ್ಯಹಾಡಿದ್ದಾರೆ ಎಂದಿದ್ದಾರೆ ಆಕಾಶ್ ಚೋಪ್ರ. "ಇಶಾನ್ ಕಿಶನ್ ದ್ವಿಶತಕ ಸಿಡಿಸಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅದಕ್ಕೂ ಮುನ್ನ ಶಿಖರ್ ಧವನ್ ಬಗ್ಗೆಗೂ ಮಾತುಗಳು ಜೋರಾಗಿತ್ತು. ಕೆಲ ಸಂದರ್ಭಗಳಲ್ಲಿ ಕೆಎಲ್ ರಾಹುಲ್ ಈ ಸ್ಥಾನದಲ್ಲಿ ಕಣಕ್ಕಿಳಿದಿದ್ದರೆ ಉತ್ತಮ ಎನಿಸುತ್ತಲೂ ಇತ್ತು. ಈಗ ಇದೆಲ್ಲದಕ್ಕೂ ಸಂಪೂರ್ಣ ಉತ್ತರ ದೊರೆತಿದೆ. ಶುಬ್ಮನ್ ಗಿಲ್ ಅವರೇ ಆರಂಭಿಕನಾಗಿ ಕಣಕ್ಕಿಳಿಯಬೇಕು"ಎಂದಿದ್ದಾರೆ ಆಕಾಶ್ ಚೋಪ್ರ.

ಆತ ಆರಂಭಿಕನಾಗಿ ಕಣಕ್ಕಿಳಿಯಲು ಸೂಕ್ತ

ಆತ ಆರಂಭಿಕನಾಗಿ ಕಣಕ್ಕಿಳಿಯಲು ಸೂಕ್ತ

ಮುಂದುವರಿದು ಮಾತನಾಡಿರುವ ಆಕಾಶ್ ಚೋಪ್ರ "ಶುಬ್ಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲು ಹೇಳಿ ಮಾಡಿಸಿರುವ ಆಟಗಾರ. ಕಳೆದ ಒಂದೂವರೆ ತಿಂಗಳಲ್ಲಿ ಭಾರತದಲ್ಲಿ ಇಬ್ಬರು ಆಟಗಾರರು ದ್ವಿಶತಕ ಸಿಡಿಸಿದ್ದಾರೆ. ಇಶಾನ್ ಕಿಶನ್ ಬಾಂಗ್ಲಾದೇಶದ ವಿರುದ್ಧ ದ್ವಿಶತಕ ಸಿಡಿಸಿದರೆ ಶುಬ್ಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ ಸಿಡಿಸಿದ್ದಾರೆ. ಆತ ಅದ್ಭುತವಾಗ ಪ್ರದರ್ಶನ ನೀಡಿದ್ದಾರೆ" ಎಂದಿದ್ದಾರೆ ಆಕಾಶ್ ಚೋಪ್ರ.

ಹಲವು ದಾಖಲೆ ಬರೆದ ಶುಬ್ಮನ್ ಗಿಲ್

ಹಲವು ದಾಖಲೆ ಬರೆದ ಶುಬ್ಮನ್ ಗಿಲ್

ಇನ್ನು ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಶುಬ್ಮನ್ ಗಿಲ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿರುವ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 1000 ರನ್‌ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ ಹೀಗಿತ್ತು: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೀಕರ್ ಭರತ್, ಶಹಬಾಜ್ ಅಹ್ಮದ್, ರಜತ್ ಪಾಟಿದಾರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ಆಡುವ ಬಳಗ; ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್,
ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಜಾಕೋಬ್ ಡಫಿ, ಡೌಗ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಇಶ್ ಸೋಧಿ

For Quick Alerts
ALLOW NOTIFICATIONS
For Daily Alerts
Story first published: Thursday, January 19, 2023, 12:05 [IST]
Other articles published on Jan 19, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X