ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ಆತನ ಮೇಲೆ ದೊಡ್ಡ ನಿರೀಕ್ಷೆ ಇದೆ; ಶುಭಮನ್ ಗಿಲ್ ಶ್ಲಾಘಿಸಿದ ದಿನೇಶ್ ಕಾರ್ತಿಕ್

IND vs NZ: Expectations Are High On Him, Dinesh Karthik Praised Shubman Gill

ಭಾರತ ತಂಡದ ಹಿರಿಯ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರು ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಶುಭಮನ್ ಗಿಲ್‌ಗೆ ಸಾಕಷ್ಟು ಸಾಮರ್ಥ್ಯವಿದೆ ಮತ್ತು ಆತ ಟಿ20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡದ ಕರೆಯನ್ನು ಪಡೆಯುವ ಮೊದಲು ಇದು ಸಮಯದ ವಿಷಯವಾಗಿದೆ ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟರು. ಬಲಗೈ ಬ್ಯಾಟ್ಸ್‌ಮನ್ ಶುಭಮನ್ ಗಿಲ್ 2019ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶವನ್ನು ಮಾಡಿದರು, ಆದರೆ ಟಿ20 ಸ್ವರೂಪದಲ್ಲಿ ಇನ್ನೂ ಭಾರತೀಯ ಜೆರ್ಸಿ ಧರಿಸಿರಲಿಲ್ಲ.

ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಈತ 3ನೇ ಕ್ರಮಾಂಕದಲ್ಲಿ ಆಡಬೇಕು; ಆರ್ ಅಶ್ವಿನ್ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಈತ 3ನೇ ಕ್ರಮಾಂಕದಲ್ಲಿ ಆಡಬೇಕು; ಆರ್ ಅಶ್ವಿನ್

ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಭಾರತದ ಪರ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶವನ್ನು ಶುಭಮನ್ ಗಿಲ್ ಹೊಂದಿದ್ದಾರೆ. ಅದರೆ ಶುಕ್ರವಾರ, ನವೆಂಬರ್ 18ರಂದು ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅದು ಸಾಧ್ಯವಾಗಲಿಲ್ಲ.

"ಶುಭಮನ್ ಗಿಲ್ ಕ್ಲಾಸ್ ಮತ್ತು ಸಾಮರ್ಥ್ಯ ಹೊಂದಿರುವ ಆಟಗಾರ. ಭಾರತದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಪೈಪೋಟಿ ಅಪಾರವಾಗಿದೆ ಮತ್ತು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರದರ್ಶನ ನೀಡಬೇಕಾಗಿದೆ. ಆದರೆ ಕಳೆದ ಕೆಲವು ತಿಂಗಳಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಗಿಲ್ ಉತ್ತಮವಾಗಿ ಆಡಿದ್ದಾರೆ," ಎಂದು ಅನುಭವಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ.

IND vs NZ: Expectations Are High On Him, Dinesh Karthik Praised Shubman Gill

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಗುಜರಾತ್ ಟೈಟನ್ಸ್ ತಂಡದ ಪರ ಉತ್ತಮ ರನ್ ಗಳಿಸಿದ್ದು, ಶುಭಮನ್ ಗಿಲ್ ಸ್ವಲ್ಪ ವೇಗವನ್ನು ಪಡೆಯಲು ಸಹಾಯ ಮಾಡಿತು ಎಂದು ದಿನೇಶ್ ಕಾರ್ತಿಕ್ ಹೇಳಿದರು.

"ನಾವು ಶುಭಮನ್ ಗಿಲ್ ಅವರಿಂದ ದೊಡ್ಡದನ್ನು ನಿರೀಕ್ಷಿಸುತ್ತೇವೆ. ಅವರು ಗುಜರಾತ್ ಟೈಟನ್ಸ್ ತಂಡಕ್ಕೆ ದೊಡ್ಡ ಆಟಗಾರರಾಗಿದ್ದಾರೆ ಮತ್ತು ಅಲ್ಲಿ ಅವರು ತಮ್ಮ ಸಾಮರ್ಥ್ಯವನ್ನು ತೋರಿಸಿದರು," ಎಂದು ಕಾರ್ತಿಕ್ ಅಭಿಪ್ರಾಯಪಟ್ಟರು.

2018ರಲ್ಲಿ ಅಂಡರ್-19 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ಶುಭಮನ್ ಗಿಲ್ ಪ್ರಭಾವಶಾಲಿಯಾಗಿದ್ದರು. ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು ಮತ್ತು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧವೂ ಶತಕ ಸಿಡಿಸಿದ್ದರು.

ಮಳೆಯಿಂದ ರದ್ದಾದ ಮೊದಲ ಟಿ20 ಪಂದ್ಯದ ನಂತರ, ಸರಣಿಯ ಎರಡನೇ ಪಂದ್ಯವು ಭಾನುವಾರ, ನವೆಂಬರ್ 20ರಂದು ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆಯಲಿದೆ.

Story first published: Friday, November 18, 2022, 21:19 [IST]
Other articles published on Nov 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X