ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ಏಕದಿನ ಕ್ರಿಕೆಟ್‌ನಲ್ಲಿ ಈತನಿಗೆ ಇನ್ನೂ ಅವಕಾಶ ನೀಡಬೇಕಿದೆ; ವಾಸಿಂ ಜಾಫರ್

IND vs NZ: Give More Chance To Suryakumar Yadav In ODI Cricket Says Wasim Jaffer

ಬುಧವಾರ, ಜನವರಿ 18ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ದಾಖಲೆಯ ದ್ವಿಶತಕದ ನೆರವಿನಿಂದ ಭಾರತ ತಂಡ 12 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಈ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ದೊಡ್ಡ ಮೊತ್ತದ ಸೂಚನೆ ನೀಡಿದ್ದರೂ, 26 ಎಸೆತಗಳಲ್ಲಿ 31 ರನ್‌ ಗಳಿಸಿದ್ದಾಗ ಡೆರಿಲ್ ಮಿಚೆಲ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಸೂರ್ಯಕುಮಾರ್ ಯಾದವ್ ಅವರು ಟಿ20 ಕ್ರಿಕೆಟ್ ಆಡಲು ಅಭ್ಯಾಸ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಪಂದ್ಯಗಳ ನಂತರ 50-ಓವರ್‌ಗಳ ಆಟಕ್ಕೆ ಒಗ್ಗಿಕೊಳ್ಳುತ್ತಾರೆ ಎಂದು ಭಾರತದ ಮಾಜಿ ಬ್ಯಾಟರ್ ವಾಸಿಂ ಜಾಫರ್ ಹೇಳಿದ್ದಾರೆ.

IND vs NZ 1st ODI: ದ್ವಿಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ಈ ದಾಖಲೆ ಮುರಿದ ಶುಭ್ಮನ್ ಗಿಲ್IND vs NZ 1st ODI: ದ್ವಿಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ಈ ದಾಖಲೆ ಮುರಿದ ಶುಭ್ಮನ್ ಗಿಲ್

"ನನ್ನ ಪ್ರಕಾರ, ಈವರೆಗೂ ಸೂರ್ಯಕುಮಾರ್ ಯಾದವ್ ಟಿ20 ಸ್ವರೂಪಕ್ಕೆ ಹೊಂದಿಕೊಂಡಿದ್ದಾರೆ. ಟಿ20ಯಲ್ಲಿ ಹೆಚ್ಚಿನ ಸಮಯ ಮತ್ತು ಓವರ್‌ಗಳು ಇರುವುದಿಲ್ಲ. ಆದರೆ ಏಕದಿನ ಕ್ರಿಕೆಟ್‌ನಲ್ಲಿ 50 ಓವರ್‌ಗಳನ್ನು ಆಡಬೇಕಿದೆ. ಅವರು ಅದನ್ನು ಅರ್ಥಮಾಡಿಕೊಳ್ಳಬೇಕು. 50 ಓವರ್‌ಗಳ ಕ್ರಿಕೆಟ್‌ನಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಿಲ್ಲ, ಇನ್ನೂ ಕೆಲವು ಪಂದ್ಯಗಳ ನಂತರ ಉತ್ತಮವಾಗಿ ಆಡುತ್ತಾರೆ," ಎಂದು ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಹೇಳಿದರು.

IND vs NZ: Give More Chance To Suryakumar Yadav In ODI Cricket Says Wasim Jaffer

ಸೂರ್ಯಕುಮಾರ್ ಯಾದವ್ ಅಪರೂಪದ ಆಟಗಾರನಂತೆ ಕಾಣುತ್ತಿದ್ದಾರೆ ಎಂದು ಹೇಳಿದ ವಾಸಿಂ ಜಾಫರ್, ಏಕದಿನ ಕ್ರಿಕೆಟ್‌ನಲ್ಲಿ 30 ಓವರ್‌ಗಳ ನಂತರ ಬ್ಯಾಟಿಂಗ್‌ಗೆ ಬರುವುದು ತಂಡಕ್ಕೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

"ಪ್ರಸಕ್ತ ಕ್ರಿಕೆಟ್ ಯುಗದಲ್ಲಿ ಮಿಲಿಯನ್ ಡಾಲರ್ ಆಟಗಾರನಂತೆ ಕಾಣುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಔಟಾಗುವ ಮುನ್ನ ಆಕ್ರಮಣಕಾರಿ ಆಟವನ್ನು ಆಡುತ್ತಿದ್ದರು. 30 ಓವರ್‌ಗಳ ಸಮೀಪದಲ್ಲಿ ತಮ್ಮ ಇನ್ನಿಂಗ್ಸ್ ಪ್ರಾರಂಭಿಸಿದರೆ ಅದು ಉತ್ತಮವಾಗಿದೆ. 35ರಿಂದ 40 ಓವರ್‌ಗಳವರೆಗೆ ಆಟಕ್ಕೆ ಹೊಂದಿಕೊಳ್ಳಲು ಸಮಯ ಸಿಗುತ್ತದೆ. ನಂತರ ಅವರು ಟಿ20 ಕ್ರಿಕೆಟ್‌ನಂತೆ ಬ್ಯಾಟ್ ಬೀಸಬಹುದು," ಎಂದು ವಾಸಿಂ ಜಾಫರ್ ತಿಳಿಸಿದರು.

ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 1000 ರನ್ ಗಳಿಸಿದ ಐವರು ಭಾರತೀಯ ಬ್ಯಾಟ್ಸ್‌ಮನ್‌ಗಳುಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 1000 ರನ್ ಗಳಿಸಿದ ಐವರು ಭಾರತೀಯ ಬ್ಯಾಟ್ಸ್‌ಮನ್‌ಗಳು

44 ವರ್ಷದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಾಸಿಂ ಜಾಫರ್ ಅವರು ಸೂರ್ಯಕುಮಾರ್ ಯಾದವ್ ಅವರನ್ನು ಗುಣಮಟ್ಟದ ಆಟಗಾರ ಎಂದು ಕರೆದಿದ್ದು, ಮುಂಬೈ ಮತ್ತು ಮುಂಬೈ ಇಂಡಿಯನ್ಸ್ ತಂಡಕ್ಕಾಗಿ ಆಡಿದಂತೆ ಅವರು ಭಾರತ ತಂಡಕ್ಕಾಗಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Story first published: Thursday, January 19, 2023, 16:11 [IST]
Other articles published on Jan 19, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X