ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸರಣಿ ಗೆದ್ದ ಬಳಿಕ ನಾಯಕನ ಮಾತು: ಯುವ ಆಟಗಾರರ ಪ್ರದರ್ಶನಕ್ಕೆ ಹಾರ್ದಿಕ್ ವಿಶೇಷ ಮೆಚ್ಚುಗೆ

Ind vs NZ: Hardik Pandya valuable advice to young cricketers after series victory against New Zealand

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಕೂಡ ಟೀಮ್ ಇಂಡಿಯಾ ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಅಹ್ಮದಾಬಾದ್‌ನಲ್ಲಿ ನಡೆದ ನಿರ್ಣಾಯಕ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಬ್ಬರಿಸಿದ ಭಾರತ ತಂಡ ಅಮೋಘ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ.

ಈ ಸರಣಿಯಲ್ಲಿ ಭಾರತದ ಯುವ ಆಟಗಾರರು ನೀಡಿದ ಪ್ರದರ್ಶನಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಟಿವಿಯಲ್ಲಿ ಶುಬ್ಮನ್ ಗಿಲ್ ಜೊತೆಗೆ ಮಾತನಾಡಿದ್ದು ಈ ಸಂದರ್ಭದಲ್ಲಿ ಯುವ ಆಟಗಾರರಿಗೆ ಕೆಲ ವಿಶೇಷ ಸಲಹೆಗಳನ್ನು ಕೂಡ ನೀಡಿದ್ದಾರೆ.

IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್

ಯುವ ಆಟಗಾರರಿಗೆ ಹಾರ್ದಿಕ್ ಸಲಹೆ

ಯುವ ಆಟಗಾರರಿಗೆ ಹಾರ್ದಿಕ್ ಸಲಹೆ

"ಸಾಕಷ್ಟು ಯುವ ಆಟಗಾರರು ತಂಡದಲ್ಲಿದ್ದಾರೆ. ಜೀವನದಲ್ಲಿ ಕಠಿಣ ಪರಿಶ್ರಮ ಮಾತ್ರವೇ ಉನ್ನತ ಮಟ್ಟಕ್ಕೇರಲು ಇರುವ ದಾರಿಯಾಗಿದೆ. ಅದೇ ಸಂದರ್ಭದಲ್ಲಿ ನಿಮ್ಮ ಕೆಲಸದ ಮೇಲೆ ಪ್ರಾಮಾಣಿಕವಾಗಿ ತೊಡಗಿಸಿಕೊಂಡರೆ ಮಾತ್ರವೇ ಯಶಸ್ಸು ಸಾಧ್ಯವಿದೆ. ನಮ್ಮ ತಂಡದಲ್ಲಿರುವ ಎಲ್ಲರು ಕೂಡ ಅತ್ಯುನ್ನತ ಸಾಧನೆ ಮಾಡಿರುವುದನ್ನು ನೀವು ನೋಡಬಹುದು" ಎಂದಿದ್ದಾರೆ ಟೀಮ್ ಇಂಡಿಯಾ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ.

ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ ಹಾರ್ದಿಕ್

ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ ಹಾರ್ದಿಕ್

ಇನ್ನು ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಮೊದಲಿಗೆ ಬೌಲಿಂಗ್ ಬ್ಯಾಟಿಂಗ್‌ನಲ್ಲಿ ಕೇವಲ 17 ಎಸೆತಗಳಲ್ಲಿ 30 ರನ್‌ ಬಾರಿಸಿದ ಹಾರ್ದಿಕ್ ಪಾಂಡ್ಯ ಬಳಿಕ ಬೌಲಿಂಗ್‌ನಲ್ಲಿಯೂ ಅದ್ಭುತ ದಾಳಿ ನಡೆಸಿದರು. ನಾಲ್ಕು ಓವರ್‌ಗಳ ಬೌಲಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 16 ರನ್‌ಗಳನ್ನು ನೀಡಿ 4 ವಿಕೆಟ್ ಸಂಪಾದಿಸಿದರು. ಉಳಿದಂತೆ ಅರ್ಷ್‌ದೀಪ್ ಸಿಂಗ್, ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ತಲಾ ಎರಡು ವಿಕೆಟ್ ಪಡೆದುಕೊಂಡರು.

ಟೆಸ್ಟ್ ಸರಣಿಗೆ ಸಜ್ಜಾಗಲಿದೆ ಭಾರತ

ಟೆಸ್ಟ್ ಸರಣಿಗೆ ಸಜ್ಜಾಗಲಿದೆ ಭಾರತ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಇನ್ನು ಟೆಸ್ಟ್ ಸರಣಿಗೆ ಸಜ್ಜಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಫೆಬ್ರವರಿ 9ರಿಂದ ಆರಂಭವಾಗಲಿದ್ದು ಇದಕ್ಕಾಗಿ ಆಸ್ಟ್ರೇಲಿಯಾ ತಂಡ ಈಗಾಗಲೇ ಭಾರತಕ್ಕೆ ಆಗಮಿಸಿದೆ. ಸದ್ಯ ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿಯೇ ಇದ್ದು ಆಲೂರಿನಲ್ಲಿರುವ ಕ್ರೀಡಾಂಗಣದಲ್ಲಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಟೀಮ್ ಇಂಡಿಯಾ ರೋಹಿತ್ ಶರ್ಮಾ ನೇತೃತ್ವದಲ್ಲಿ ಕಣಕ್ಕಿಳಿಯಲಿದ್ದು ಮೊದಲ ಎರಡು ಪಂದ್ಯಗಳಿಗೆ ಈಗಾಗಲೇ ಸ್ಕ್ವಾಡ್ ಘೋಷಣೆ ಮಾಡಲಾಗಿದೆ.

Story first published: Thursday, February 2, 2023, 13:25 [IST]
Other articles published on Feb 2, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X