ಭಾರತ vs ನ್ಯೂಜಿಲೆಂಡ್: ಪೂಜಾರಾಗೆ ನೆಟ್‌ನಲ್ಲಿ ಬೌಲಿಂಗ್ ಮಾಡಿದ ಕೋಚ್ ದ್ರಾವಿಡ್: ವಿಡಿಯೋ

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧಧ ಟೆಸ್ಟ್ ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೇಲುಗೈ ಸಾಧಿಸಲು ಎರಡೂ ತಂಡಗಳ ಆಟಗಾರರು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಪಂದ್ಯದ ಆರಂಭಕ್ಕೆ ಒಂದು ದಿನ ಮುನ್ನ ಎರಡು ತಂಡಗಳ ಆಟಗಾರರು ಭಾರೀ ಅಭ್ಯಾಸವನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಕ್ಯಾಂಪ್‌ನಿಂದ ವಿಶೇಷವಾದ ದೃಶ್ಯವೊಂದು ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾದ ಆಟಗಾರರ ಅಭ್ಯಾಸದ ಸಂದರ್ಭದಲ್ಲಿ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬೌಲಿಂಗ್ ಮಾಡಿದ್ದಾರೆ. ನೆಟ್ಸ್‌ನಲ್ಲಿ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರೆ ರಾಹುಲ್ ದ್ರಾವಿಡ್ ಲೆಗ್ ಸ್ಪಿನ್ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿಡಿಯೋಗೆ ಟ್ವಿಟ್ಟರ್‌ನಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಆಟಗಾರರು ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದನ್ನ ಬಿಸಿಸಿಐ ತಿಳಿಸಲ್ಲ: ಅರುಣ್ ಧುಮಾಲ್ಆಟಗಾರರು ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದನ್ನ ಬಿಸಿಸಿಐ ತಿಳಿಸಲ್ಲ: ಅರುಣ್ ಧುಮಾಲ್

ಬಿಸಿಸಿಐನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದಕ್ಕೆ "ಯಾರಾದರೂ ಕೆಲ ಬಲ ಆಫ್ ಸ್ಪಿನ್ ದಾಳಿಯನ್ನು ಎದುರಿಸುತ್ತೀರಾ?" ಎಂದು ಕ್ಯಾಪ್ಶನ್ ನೀಡಲಾಗಿದೆ. ನೆಟ್‌ನಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ಚೇತೇಶ್ವರ್ ಪೂಜಾರಾಗೆ ಹಲವು ಎಸೆತಗಳನ್ನು ಬೌಲಿಂಗ್ ಮಾಡಿದ್ದಾರೆ ರಾಹುಲ್ ದ್ರಾವಿಡ್.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5 ವಿಕೆಟ್ ಪಡೆದಿದ್ದಾರೆ ದ್ರಾವಿಡ್: ರಾಹುಲ್ ದ್ರಾವಿಡ್ ಬೌಲಿಂಗ್ ಮಾಡುವ ದೃಶ್ಯ ಅತ್ಯಂತ ಅಪರೂಪದ್ದಾಗಿದೆ. ಬಹುತೇಕ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿಯಾಗಬಹುದು, ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಕೂಡ ಮಾಡಿದ್ದಾರೆ. ಮಾತ್ರವಲ್ಲದೆ ಒಟ್ಟು ಐದು ವಿಕೆಟ್‌ಗಳನ್ನು ಕೂಡ ದ್ರಾವಿಡ್ ಸಂಪಾದಿಸಿದ್ದಾರೆ. ಇದರಲ್ಲಿ ನಾಲ್ಕು ವಿಕೆಟ್‌ಗಳು ಏಕದಿನ ಮಾದರಿಯಲ್ಲಿ ದೊರೆತಿದ್ದರೆ ಒಂದು ವಿಕೆಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸಂಪಾದಿಸಿದ್ದಾರೆ.

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್‌: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್‌: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ದ್ರಾವಿಡ್ ಪರಿಶ್ರಮಕ್ಕೆ ಮೆಚ್ಚುಗೆ: ಟೀಮ್ ಇಂಡಿಯಾದ ಕೋಚ್ ಆಗಿ ರಾಹುಲ್ ದ್ರಾವಿಡ್ ಮೊದಲ ಟೆಸ್ಟ್ ಪಂದ್ಯವನ್ನು ಎದುರಿಸಲು ಸಜ್ಜಾಗುತ್ತಿದ್ದಾರೆ. ಹಾಗಂತ ರಾಹುಲ್ ದ್ರಾವಿಡ್ ನ್ಯೂಜಿಲೆಂಡ್ ವಿರುದ್ಧಧ ಪಂದ್ಯದಲ್ಲಿ ಬ್ಯಾಟಿಂಗ್ ಅಥವಾ ಬೌಲಿಂಗ್ ನಡೆಸುವುದಿಲ್ಲ. ಹಾಗಿದ್ದರೂ ನೆಟ್‌ನಲ್ಲಿ ಮುಖ್ಯ ಕೋಚ್ ದ್ರಾವಿಡ್ ಆಟಗಾರರ ಒಳಿತಿಗಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಕೂಡ ನಡೆಸುತ್ತಿದ್ದಾರೆ. ತಂಡ ಅತ್ಯುತ್ತಮ ಫಲಿತಾಂಶ ಪಡೆಯಲು ಪೂರಕವಾಗುವಂತೆ ಎಲ್ಲಾ ರೀತಿಯಲ್ಲೂ ತಂಡಕ್ಕೆ ನೆರವಾಗಲು ಬಯಸುತ್ತಿದ್ದಾರೆ. ರಾಹುಲ್ ದ್ರಾವಿಡ್ ಅವರ ಈ ಪರಿಶ್ರಮ ಬಗ್ಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

'ಆತ ಪಾಪದ ಹುಡುಗ'; ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ಗೆ ಆತನನ್ನು ಆಯ್ಕೆ ಮಾಡದಿರುವುದಕ್ಕೆ ಜಡೇಜಾ ಬೇಸರ'ಆತ ಪಾಪದ ಹುಡುಗ'; ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ಗೆ ಆತನನ್ನು ಆಯ್ಕೆ ಮಾಡದಿರುವುದಕ್ಕೆ ಜಡೇಜಾ ಬೇಸರ

ಟೀಮ್ ಇಂಡಿಯಾ ಸ್ಕ್ವಾಡ್: ಅಜಿಂಕ್ಯಾ ರಹಾನೆ (ನಾಯಕ), ಸೂರ್ಯಕುಮಾರ್ ಯಾದವ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್-ಕೀಪರ್), ಕೆಎಸ್ ಭರತ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಆರ್. ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಜಯಂತ್ ಯಾದವ್, ಎಂಡಿ ಸಿರಾಜ್, ಪ್ರಸಿದ್ಧ್ ಕೃಷ್ಣ.

ನ್ಯೂಜಿಲೆಂಡ್ ಸ್ಕ್ವಾಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಅಜಾಜ್ ಪಟೇಲ್, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್ವಿಲ್ಲೆ, ಟಿಮ್ ಸೌಥಿ, ರಾಸ್ ಟೇಲರ್, ವಿಲ್ ಯಂಗ್, ನೀಲ್ ವ್ಯಾಗ್ನರ್

For Quick Alerts
ALLOW NOTIFICATIONS
For Daily Alerts
Story first published: Wednesday, November 24, 2021, 20:12 [IST]
Other articles published on Nov 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X