ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ಕಿವೀಸ್ ವಿರುದ್ಧ ಏಕದಿನ ಸರಣಿ ಕ್ಲೀನ್‌ಸ್ವೀಪ್; ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಭಾರತ

IND vs NZ: India Becomes No.1 Team In ICC ODI Rankings After Series Cleansweep Against New Zealand

ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ, ಜನವರಿ 24ರಂದು ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 90 ರನ್‌ಗಳಿಂದ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಸರಣಿಯನ್ನು 3-0 ಅಂತರದಿಂದ ವೈಟ್‌ವಾಶ್ ಮಾಡಿತು.

ಈ ಸರಣಿ ಗೆಲುವಿನೊಂದಿಗೆ ಆತಿಥೇಯ ಭಾರತ ಮೂರು ಪಂದ್ಯಗಳ ಸರಣಿಯನ್ನು ಗೆದ್ದು, ಕಳೆದ ವರ್ಷ ನ್ಯೂಜಿಲೆಂಡ್‌ನಲ್ಲಿ ಸರಣಿ ಸೋಲಿಗೆ ಸೇಡು ತೀರಿಸಿಕೊಂಡಿತು. ಅಲ್ಲದೇ, ಪ್ರಮುಖವಾಗಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡವನ್ನು ಕೆಳಗಿಳಿಸಿ ಭಾರತ ನೂತನ ನಂ.1 ಏಕದಿನ ತಂಡವಾಗಿ ಹೊರಹೊಮ್ಮಿತು.

IND vs NZ 3rd ODI: ವಿರಾಟ್ ಕೊಹ್ಲಿಗಾಗಿ ತನ್ನ ವಿಕೆಟ್ ತ್ಯಾಗ ಮಾಡಿದ ಇಶಾನ್ ಕಿಶನ್; ವಿಡಿಯೋ

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಇದೀಗ ಏಕದಿನ ಮತ್ತು ಟಿ20 ಸ್ವರೂಪಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತದಲ್ಲಿಯೇ ನಡೆಯುವ ಏಕದಿನ ವಿಶ್ವಕಪ್‌ಗೂ ಮುನ್ನ ಈ ಸರಣಿ ಗೆಲುವು ಭಾರತ ತಂಡಕ್ಕೆ ದೊಡ್ಡ ಆತ್ಮವಿಶ್ವಾಸ ಮೂಡಿಸಿದೆ.

ಭಾರತ ವಿಶ್ವದ ಅತ್ಯುತ್ತಮ ವೈಟ್-ಬಾಲ್ ತಂಡ

ಭಾರತ ವಿಶ್ವದ ಅತ್ಯುತ್ತಮ ವೈಟ್-ಬಾಲ್ ತಂಡ

ಈ ಪಂದ್ಯಕ್ಕೂ ಮುನ್ನ ಬಿಡುಗಡೆಯಾದ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡವು ಮೂರನೇ ಸ್ಥಾನದಲ್ಲಿತ್ತು. ಅಗ್ರ ಎರಡು ತಂಡಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳೊಂದಿಗೆ ರೇಟಿಂಗ್ ಪಾಯಿಂಟ್‌ಗಳಲ್ಲಿ ಸಮನಾಗಿತ್ತು. ಆದರೆ, ಅಗ್ರ ಎರಡು ತಂಡಗಳಿಗಿಂತ ಹೆಚ್ಚಿನ ಪಂದ್ಯಗಳನ್ನು ಆಡಿದ ಕಾರಣ, ಭಾರತ ತಂಡವು ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿತ್ತು.

ಇದೀಗ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿರುವುದು ಭಾರತಕ್ಕೆ ತಮ್ಮನ್ನು ತಾವು ವಿಶ್ವದ ಅತ್ಯುತ್ತಮ ವೈಟ್-ಬಾಲ್ ತಂಡವಾಗಿ ಮರು ಇತಿಹಾಸ ಸೃಷ್ಟಿಸಲು ಸಹಾಯ ಮಾಡಿತು.

ರಿಕಿ ಪಾಂಟಿಂಗ್‌ರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿ ರೋಹಿತ್ ಶರ್ಮಾ

ರಿಕಿ ಪಾಂಟಿಂಗ್‌ರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅವರ ವೈಯಕ್ತಿಕ ಶತಕಗಳು ಮತ್ತು ದ್ವಿಶತಕ ಜೊತೆಯಾಟದ ನೆರವಿನಿಂದ ಭಾರತ ಅಂತಿಮ ಏಕದಿನ ಪಂದ್ಯದಲ್ಲಿ 385 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

ರೋಹಿತ್ ಶರ್ಮಾ ಅವರು ಮೂರು ವರ್ಷಗಳ ಏಕದಿನ ಶತಕದ ಬರವನ್ನು ಕೊನೆಗೊಳಿಸಿ, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 30ನೇ ಶತಕವನ್ನು ಬಾರಿಸಿದರು. ಆ ಮೂಲಕ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ದಾಖಲಿಸಿದವರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ ಅವರೊಂದಿಗೆ ಜಂಟಿ ಮೂರನೇ ಸ್ಥಾನ ಹಂಚಿಕೊಂಡರು.

ರೋಹಿತ್ ಶರ್ಮಾ ಒಟ್ಟಾರೆ 42ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದರು. ವಿಶ್ವದ ಎರಡನೇ ಶ್ರೇಯಾಂಕಿತ ತಂಡದ ವಿರುದ್ಧ ಅತ್ಯುತ್ತಮವಾಗಿ ಸರಣಿಯನ್ನು ಗೆಲ್ಲಲು ಭಾರತಕ್ಕೆ ನೆರವಾದರು.

ನ್ಯೂಜಿಲೆಂಡ್ ತಂಡದ ಪರ ಡೆವೊನ್ ಕಾನ್ವೆ 138 ರನ್

ನ್ಯೂಜಿಲೆಂಡ್ ತಂಡದ ಪರ ಡೆವೊನ್ ಕಾನ್ವೆ 138 ರನ್

386 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ತಂಡದ ಪರ ಡೆವೊನ್ ಕಾನ್ವೆ 100 ಎಸೆತಗಳಲ್ಲಿ 138 ರನ್ ಬಾರಿಸಿ ಏಕಾಂಗಿ ಹೋರಾಟ ನಡೆಸಿದರು. ಆದರೂ ಪ್ರವಾಸಿ ತಂಡ 295 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಮೂರು ವಿಕೆಟ್ ಪಡೆದು ಮಿಂಚಿದರು.

ಟಿ20 ಮತ್ತು ಏಕದಿನ ಮಾದರಿಯಲ್ಲಿ ಭಾರತ ತಂಡವು ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸ್ಥಾನ ಪಡೆಯಲು ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿದೆ.

Story first published: Tuesday, January 24, 2023, 22:34 [IST]
Other articles published on Jan 24, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X