IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್

ಭಾನುವಾರ, ಜನವರಿ 29ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಆತಿಥೇಯ ಭಾರತ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿತು ಮತ್ತು ಭಾರತಕ್ಕೆ 100 ರನ್‌ಗಳ ಗುರಿ ನೀಡಿದೆ. ಭಾರತದ ಬಿಗಿ ಬೌಲಿಂಗ್ ದಾಳಿಗೆ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು.
ಅರ್ಶ್‌ದೀಪ್ ಸಿಂಗ್ ಎರಡು ವಿಕೆಟ್ ಪಡೆದು ಮಿಂಚಿದರೆ, ಉಳಿದಂತೆ ಯುಜ್ವೇಂದ್ರ ಚಹಾಲ್, ಕುಲ್‌ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.
ನ್ಯೂಜಿಲೆಂಡ್ ಪರ ಮಿಚೆಲ್ ಸ್ಯಾಂಟ್ನರ್ 23 ಎಸೆತಗಳಲ್ಲಿ ಅಜೇಯ 19 ರನ್ ಗಳಿಸಿದರು. ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 21 ರನ್‌ಗಳ ಸೋಲು ಕಂಡಿರುವ ಟೀಂ ಇಂಡಿಯಾ ಎರಡನೇ ಟಿ20ಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಆಡುವ 11ರ ಬಳಗ
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications