IND vs NZ 1st ODI : ಮೊದಲ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಟಿ20 ಸರಣಿಯನ್ನು ಗೆದ್ದ ನಂತರ ಭಾರತ ತಂಡ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ.
ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಇದಕ್ಕೂ ಮುನ್ನ ಮೂರು ಪಂದ್ಯಗಳ ಟಿ20 ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಗೆಲ್ಲುವ ಭರವಸೆಯಲ್ಲಿದೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಕೊನೆಯ ಬಾರಿಗೆ ಏಕದಿನ ಸರಣಿಗಾಗಿ ಕಿವೀಸ್ ಪ್ರವಾಸ ಕೈಗೊಂಡಾಗ ಏಕದಿನ ಸರಣಿಯನ್ನು 3-0 ಅಂತರದಿಂದ ಸೋತಿತ್ತು.
ಈ ಬಾರಿ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆಎಲ್ ರಾಹುಲ್, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತ ಬಹುತೇಕ ಯುವ ಆಟಗಾರರ ಪಡೆ ಹೊಂದಿದೆ.
ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಟಿ20 ಸರಣಿಯಲ್ಲಿ ಆಡಲಿಲ್ಲ. ಹಾಗಾಗಿ ಅವರಿಗೆ ಏಕದಿನದಲ್ಲಿ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗಿದೆ. ಇನ್ನು ವೇಗಿಗಳಾದ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಭಾರತ vs ನ್ಯೂಜಿಲೆಂಡ್ ಆಡುವ 11ರ ಬಳಗ
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲ್ಯೂಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications