IND vs NZ 1st ODI : ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದ ವಿವರ, ಟಿವಿ & ಲೈವ್ ಸ್ಟ್ರೀಮಿಂಗ್

ಜನವರಿ 18ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 18ರಂದು ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ.
ಬಾಂಗ್ಲಾದೇಶ ವಿಶ್ವದಾಖಲೆಯ ದ್ವಿಶತಕದ ಹೊರತಾಗಿಯೂ ತಂಡದಿಂದ ಹೊರಗುಳಿದಿದ್ದ ವಿಕೆಟ್ ಕೀಪರ್- ಬ್ಯಾಟರ್ ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕೌಟುಂಬಿಕ ಕಾರಣಗಳಿಂದ ಕೆಎಲ್ ರಾಹುಲ್ ಅವರ ಅಲಭ್ಯತೆಯು ಇಶಾನ್ ಕಿಶನ್‌ಗೆ ಅವಕಾಶ ದೊರೆದಂತಾಗಿದೆ. ಕಿಶನ್ ವಿಕೆಟ್ ಕೀಪರ್ ಗ್ಲೌಸ್ ಹಾಕಿಕೊಳ್ಳಬಹುದು. ಆದರೆ, ಬುಧವಾರ (ಜನವರಿ 18) ಪ್ರಾರಂಭವಾಗುವ ಮೂರು ಪಂದ್ಯಗಳ ಸರಣಿಯಲ್ಲಿ ಇನ್ನಿಂಗ್ಸ್ ತೆರೆಯುವುದು ಅಸಾಧ್ಯವಾಗಿದೆ.
ಶ್ರೀಲಂಕಾ ವಿರುದ್ಧ ಅರಂಭಿಕರಾಗಿ ಮಿಂಚಿದ್ದ ಶುಭ್ಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಭಾರತದ ಇನ್ನಿಂಗ್ಸ್ ತೆರೆಯಲಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಆರಂಭಿಕ ಸಂಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನು ನಿರೀಕ್ಷಿಸಲಾಗುವುದಿಲ್ಲ. ಇಶಾನ್ ಕಿಶನ್ ಅವರು ಆಡಿದ 10 ಏಕದಿನ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಮೂರು ಬಾರಿ ಬ್ಯಾಟ್ ಮಾಡಿದ್ದಾರೆ, ಆದ್ದರಿಂದ ಹೊಂದಾಣಿಕೆ ಸಮಸ್ಯೆಯಾಗುವುದಿಲ್ಲ.
ತಂಡದಲ್ಲಿ ಎರಡನೇ ವಿಕೆಟ್ ಕೀಪರ್ ಆಗಿರುವ ಕೆಎಸ್ ಭರತ್ ಅವರು ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಅವಕಾಶ ಪಡೆದಿರುವುದರಿಂದ ಬೆಂಚ್ ಕಾಯಿಸುವ ಸಾಧ್ಯತೆಯಿದೆ. ವಿಶ್ವಕಪ್ ವರ್ಷದಲ್ಲಿ ಪ್ರತಿ ಏಕದಿನ ಪಂದ್ಯವು ಮಹತ್ವದ್ದಾಗಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಶ್ರೀಲಂಕಾ ವಿರುದ್ಧ ಪ್ರದರ್ಶಿಸಿದ ಫಾರ್ಮ್ ಅನ್ನು ನ್ಯೂಜಿಲೆಂಡ್ ವಿರುದ್ಧವೂ ಮುಂದುವರೆಸಬೇಕಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದಾರೆ.
ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದ ವಿವರ
ದಿನಾಂಕ: ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ಜನವರಿ 18, ಬುಧವಾರ ನಡೆಯಲಿದೆ.
ಸ್ಥಳ: ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್.
ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾ. ಟಾಸ್ ಸಮಯ ಮಧ್ಯಾಹ್ನ 1 ಗಂಟೆಗೆ.
ಟಿವಿ ವೀಕ್ಷಣೆ ಮತ್ತು ಲೈವ್ ಸ್ಟ್ರೀಮಿಂಗ್: ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನಡೆಯಲಿದೆ.
ಭಾರತ vs ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಹೆನ್ರಿ ಶಿಪ್ಲೆರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications