For Quick Alerts
ALLOW NOTIFICATIONS  
For Daily Alerts
 

IND vs NZ 1st T20: ಭಾರತ vs ನ್ಯೂಜಿಲೆಂಡ್ ಸಂಭಾವ್ಯ ಆಡುವ 11ರ ಬಳಗ, ಟಿವಿ & ಲೈವ್ ಸ್ಟ್ರೀಮಿಂಗ್ ವಿವರ

IND vs NZ: India vs New Zealand 1st T20 Probable Playing 11, TV, Live Streaming And Match Details

ಶುಕ್ರವಾರ, ಜನವರಿ 27ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ರಾಂಚಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ನಡೆದ ಏಕದಿನ ಸರಣಿಯನ್ನು ಭಾರತ ತಂಡ ಪ್ರವಾಸಿ ಕಿವೀಸ್ ವಿರುದ್ಧ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಶುಕ್ರವಾರ ರಾಂಚಿಯಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿರುವ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಆತ್ಮವಿಶ್ವಾಸ ಪಡೆಯಲು ಪ್ರಯತ್ನಿಸಲಿದೆ.

ಜನವರಿ ಆರಂಭದಲ್ಲಿ ಶ್ರೀಲಂಕಾ ವಿರುದ್ಧ 2-1 ಸರಣಿಯನ್ನು ಗೆದ್ದ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ ಅನುಭವಿ ಹಾಗೂ ಯುವ ಆಟಗಾರರಿಂದ ಕೂಡಿದ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವರು ಟಿ20 ಸರಣಿಯಲ್ಲಿ ಆಡಲಿದ್ದಾರೆ.

IND vs NZ: India vs New Zealand 1st T20 Probable Playing 11, TV, Live Streaming And Match Details

ಇದೇ ವೇಳೆ ರಾಂಚಿಯಲ್ಲಿ ನಡೆದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮಾತನಾಡಿ, ಶುಭ್ಮನ್ ಗಿಲ್ ಈಗಾಗಲೇ ಟಿ20 ತಂಡದ ಭಾಗವಾಗಿರುವುದರಿಂದ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ಹೇಳಿದರು.

ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯ ರಾಂಚಿಯ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಜನವರಿ 27ರ ಶುಕ್ರವಾರದಂದು ನಡೆಯಲಿದೆ.

ಪಂದ್ಯದ ಸಮಯ: ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.

ಟಿವಿ ವೀಕ್ಷಣೆ: ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ.

ಲೈವ್ ಸ್ಟ್ರೀಮಿಂಗ್ ವೀಕ್ಷಣೆ: ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯವನ್ನು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಶಿವಂ ಮಾವಿ.

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಬ್ಲೇರ್ ಟಿಕ್ನರ್, ಇಶ್ ಸೋಧಿ, ಬೆನ್ ಲಿಸ್ಟರ್, ಲಾಕಿ ಫರ್ಗುಸನ್.

Story first published: Friday, January 27, 2023, 8:58 [IST]
Other articles published on Jan 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+