ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ 2nd T20: ಭಾರತ vs ನ್ಯೂಜಿಲೆಂಡ್ ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ

IND vs NZ: India vs New Zealand 2nd T20 Match Fantasy Dream Team And Probable Playing 11

ಭಾನುವಾರ, ಜನವರಿ 29ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧ 3 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಸೋತಿದ್ದರಿಂದ ಆತಿಥೇಯ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್ ತಂಡ ಮೊದಲ ಪಂದ್ಯದಲ್ಲಿ 21 ರನ್‌ಗಳಿಂದ ಜಯಗಳಿಸಿ ಮೂರು ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಡೆರಿಲ್ ಮಿಚೆಲ್ ಅವರ ಅಜೇಯ 59 ಮತ್ತು ಡೆವೊನ್ ಕಾನ್ವೇ 52 ರನ್‌ಗಳ ನೆರವಿನಿಂದ ಸ್ಕೋರ್ ಬೋರ್ಡ್‌ನಲ್ಲಿ 176 ರನ್ ಪೇರಿಸಿತು.

IND vs NZ: ಮುಂದಿನ 2 ಪಂದ್ಯಗಳು ಈತನಿಗೆ ನಿರ್ಣಾಯಕ; ದಿನೇಶ್ ಕಾರ್ತಿಕ್ ಎಚ್ಚರಿಕೆIND vs NZ: ಮುಂದಿನ 2 ಪಂದ್ಯಗಳು ಈತನಿಗೆ ನಿರ್ಣಾಯಕ; ದಿನೇಶ್ ಕಾರ್ತಿಕ್ ಎಚ್ಚರಿಕೆ

177 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆತಿಥೇಯ ಭಾರತ ತಂಡ 15 ರನ್‌ಗಳಾಗುವಷ್ಟರಲ್ಲಿ ಆರಂಭಿಕ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ 20 ಓವರ್‌ಗಳಲ್ಲಿ 155 ರನ್‌ಗಳಿಗೆ ನಿಯಂತ್ರಣಗೊಂಡಿತು.

ಆರಂಭಿಕರಾದ ಇಶಾನ್ ಕಿಶನ್, ಶುಭ್ಮನ್ ಗಿಲ್ ಮತ್ತು ರಾಹುಲ್ ತ್ರಿಪಾಠಿ ಅವರು ನ್ಯೂಜಿಲೆಂಡ್‌ನ ಉತ್ತಮ ಬೌಲಿಂಗ್ ದಾಳಿಯ ಮುಂದೆ ಮಂಕಾದರು. ಮೈಕಲ್ ಬ್ರೇಸ್‌ವೆಲ್, ಲಾಕಿ ಫರ್ಗುಸನ್ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ ತಲಾ 3 ವಿಕೆಟ್ ಪಡೆದು ಮಿಂಚಿದರು.

IND vs NZ: India vs New Zealand 2nd T20 Match Fantasy Dream Team And Probable Playing 11

ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡವು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಬೇಕಿದೆ. ಹೀಗಾಗಿ ಲಕ್ನೋದಲ್ಲಿ ರೋಚಕ ಸೆಣಸಾಟವನ್ನು ನಿರೀಕ್ಷಿಸಬಹುದು.

ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ವಿವರಗಳು

ಸ್ಥಳ ಮತ್ತು ದಿನಾಂಕ: ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯವು ಸೋಮವಾರ, ಜನವರಿ 29ರಂದು ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋದಲ್ಲಿ ನಡೆಯಲಿದೆ.

ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಸಮಯ: ಭಾರತೀಯ ಕಾಲಮಾನ ಸಂಜೆ 7 ಗಂಟೆ

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವೀಕ್ಷಣೆ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಫ್ಯಾಂಟಸಿ ಡ್ರೀಮ್ ಟೀಂ

ವಿಕೆಟ್ ಕೀಪರ್: ಡೆವೊನ್ ಕಾನ್ವೇ, ಇಶಾನ್ ಕಿಶನ್

ಬ್ಯಾಟರ್‌ಗಳು: ಸೂರ್ಯಕುಮಾರ್ ಯಾದವ್, ಡೆರಿಲ್ ಮಿಚೆಲ್, ಶುಭ್ಮನ್ ಗಿಲ್

ಆಲ್‌ರೌಂಡರ್‌ಗಳು: ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ವಾಷಿಂಗ್ಟನ್ ಸುಂದರ್, ಹಾರ್ದಿಕ್ ಪಾಂಡ್ಯ

ಬೌಲರ್‌ಗಳು: ಕುಲದೀಪ್ ಯಾದವ್, ಲಾಕಿ ಫರ್ಗುಸನ್

ನಾಯಕ ಮತ್ತು ಉಪನಾಯಕ: ಶುಭ್ಮನ್ ಗಿಲ್, ವಾಷಿಂಗ್ಟನ್ ಸುಂದರ್

ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಶಿವಂ ಮಾವಿ, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

Story first published: Sunday, January 29, 2023, 18:19 [IST]
Other articles published on Jan 29, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X