IND vs NZ 2nd T20: ಭಾರತ vs ನ್ಯೂಜಿಲೆಂಡ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾನುವಾರ, ಜನವರಿ 29ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧ ಮುಖಾಮುಖಿಯಾಗುತ್ತಿವೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಮೊದಲ ಪಂದ್ಯ ಸೋತಿದ್ದರಿಂದ ಸರಣಿಯನ್ನು ಜೀವಂತವಾಗಿರಿಸಲು ಆತಿಥೇಯ ಭಾರತ ತಂಡವು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್ ತಂಡ ಮೊದಲ ಪಂದ್ಯದಲ್ಲಿ 21 ರನ್‌ಗಳಿಂದ ಜಯಗಳಿಸಿ ಮೂರು ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಭಾರತ vs ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಆಡುವ 11ರ ಬಳಗ
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications