IND vs NZ 3rd T20: ಸರಣಿ ನಿರ್ಣಾಯಕ 3ನೇ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಬುಧವಾರ, ಫೆಬ್ರವರಿ 1ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 3 ಪಂದ್ಯಗಳ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧ ಸರಣಿ ವಶಕ್ಕಾಗಿ ಸೆಣಸಾಡಲಿದೆ.
ಸರಣಿ ನಿರ್ಣಾಯಕ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಮೊದಲ ಟಿ20 ಪಂದ್ಯವನ್ನು 21 ರನ್‌ಗಳಿಂದ ಪ್ರವಾಸಿ ನ್ಯೂಜಿಲೆಂಡ್ ಗೆದ್ದರೆ, ಎರಡನೇ ಟಿ20 ಪಂದ್ಯವನ್ನು ಭಾರತ ಪ್ರಯಾಸಕರವಾಗಿ 6 ವಿಕೆಟ್‌ಗಳ ಗೆಲುವು ಸಾಧಿಸಿ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿಕೊಂಡಿತು.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳೆರಡು ತಲಾ ಒಂದೊಂದು ಬದಲಾವಣೆ ಮಾಡಿವೆ. ಭಾರತ ತಂಡದಲ್ಲಿ ಯುಜ್ವೇಂದ್ರ ಚಹಾಲ್ ಬದಲಾಗಿ ಉಮ್ರಾನ್ ಮಲಿಕ್ ಆಡುತ್ತಿದ್ದಾರೆ. ಇನ್ನು ಜೇಕೊಬ್ ಡಫಿ ಬದಲಾಗಿ ಬೆನ್ ಲಿಸ್ಟರ್ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯದ ಆಡುವ 11ರ ಬಳಗ
ಭಾರತ: ಶುಭ್ಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರನ್ ಮಲಿಕ್, ಅರ್ಶ್‌ದೀಪ್ ಸಿಂಗ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಬೆನ್ ಲಿಸ್ಟರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications