IND vs BAN: ಭಾರತ ವಿರುದ್ದದ ಮೂರನೇ ಟೆಸ್ಟ್‌ನಿಂದಲ್ಲೂ ಹೊರಗುಳಿದ ಕೇನ್ ವಿಲಿಯಮ್ಸನ್
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ನ್ಯೂಜಿಲೆಂಡ್ 2-0 ಅಂತರದಲ್ಲಿ ಸೋಲಿ ಸರಣಿ ಗೆದ್ದಿದೆ.
ಈಗ ವಾಂಖೆಂಡೆ ಟೆಸ್ಟ್ ಪಂದ್ಯಕ್ಕೆ ನ್ಯೂಜಿಲೆಂಡ್‌ನ ಬಲಗೈ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವಿಲಿಯಮ್ಸನ್ ಭಾರತಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲುವು ಕಿವೀಸ್ ಪಡೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (ಡಬ್ಲ್ಯೂಟಿಸಿ) ಫೈನಲ್‌ಗೆ ತಲುಪಲು ಸಹಾಯವಾಗಬಹುದು.

ನವೆಂಬರ್ 28 ರಂದು ಹ್ಯಾಗ್ಲಿ ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಅದಕ್ಕೂ ಮುಂಚಿತವಾಗಿ ನ್ಯೂಜಿಲೆಂಡ್‌ನಲ್ಲಿ ವಿಲಿಯಮ್ಸನ್ ತೊಡೆಸಂದು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ವಿಲಿಯಮ್ಸನ್ ಗಾಯಗೊಂಡಿದ್ದರು. ಇದೀಗ ಭಾರತ ವಿರುದ್ಧದ ಮೂರನೇ ಟೆಸ್ಟ್‌ನಿಂದ ವಿಲಿಯಮ್ಸನ್ ಹೊರಗುಳಿಯುವ ಬಗ್ಗೆ ಮಾಹಿತಿ ನೀಡಿದ ನ್ಯೂಜಿಲೆಂಡ್ ಹೆಡ್ ಕೋಚ್ ಗ್ಯಾರಿ ಸ್ಟೆಡ್ ಮಾಹಿತಿ ನೀಡಿದ್ದಾರೆ.
ಗ್ಯಾರಿ ಸ್ಟೆಡ್ ಹೇಳಿದ್ದೇನು?
ವಿಲಿಯಮ್ಸನ್ ಅವರು ಇಂಗ್ಲೆಂಡ್ ವಿರುದ್ಧ ತವರಿನ ಟೆಸ್ಟ್ ಸರಣಿಯನ್ನು ಆಡಲಿದ್ದಾರೆ. ಕೇನ್ ಸಂಪೂರ್ಣ ಚೇತರಿಸಿಕೊಂಡಿರುವುದಾಗಿ ಕಾಣಿಸುತ್ತಿದೆ. ಆದರೆ ಅವರು ವಿಮಾನದಲ್ಲಿ ಕುಳಿತು ನಮ್ಮೊಂದಿಗೆ ಪ್ರಯಾಣ ಮಾಡಲು ಸಿದ್ಧವಾಗಿರಲ್ಲ. ಅವರು ನ್ಯೂಜಿಲೆಂಡ್‌ನಲ್ಲಿ ಉಳಿದಿದ್ದು, ಗಾಯದಿಂದ ಚೇತರಿಸಿಕೊಳ್ಳಲು ಅವರಯ ತೆಗೆದುಕೊಂಡಿರುವ ಕ್ರಮ ಉತ್ತಮವಾಗಿವೆ ಅಂದುಕೊಂಡಿದ್ದೇವೆ. ಆದ್ದರಿಂದ ಅವರು ಇಂಗ್ಲೆಂಡ್‌ಗಾಗಿ ಆಡಲು ಸಿದ್ಧರಾಗಬಹುದು ಎಂಬ ನಿರೀಕ್ಷೆಯಿದೆ ಎಂದು ಗ್ಯಾರಿ ಸ್ಟೆಡ್ ಹೇಳಿದ್ದಾರೆ.
ನ್ಯೂಜಿಲೆಂಡ್ ಪ್ರಸ್ತುತ ಭಾರತ ಪ್ರವಾಸದಲ್ಲಿದೆ. ಈಗಾಗಲೇ ಭಾರತ ವಿರುದ್ಧ ನಡೆದಿರುವ ಎರಡು ಟೆಸ್ಟ್ ಪಂದ್ಯಗಳಿಂದ ಕೇನ್ ವಿಲಿಯಮ್ಸನ್ ಹೊರಗುಳಿದ್ದಾರೆ. ಅವರ ಅನುಪಸ್ಥಿಯಲ್ಲಿ ಕಿವೀಸ್ ಪಡೆ ಭಾರತವನ್ನು ತವರಿನಲ್ಲಿ ಸೋಲಿಸಿದೆ. ಬೆಂಗಳೂರು ಟೆಸ್ಟ್ ಬಳಿಕ ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸುವ ಮೂಲಕ ನ್ಯೂಜಿಲೆಂಡ್ ತಂಡ ಈಗಾಗಲೇ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಗೆದ್ದು ಬೀಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications