
ಉತ್ತಮ ರನ್ ಗಳಿಸಿಯೂ ಭಾರತ ತಂಡಕ್ಕೆ ಸೋಲು
ಟಿ20 ಸರಣಿಯಲ್ಲಿ ಗೆಲುವು ಸಾಧಿಸಿದ ಬಳಿಕ, ಏಕದಿನ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿ ಆಕ್ಲೆಂಡ್‌ನಲ್ಲಿ ಕಣಕ್ಕಿಳಿದ ಭಾರತ ತಂಡಕ್ಕೆ ಕಿವೀಸ್ ಪಡೆ ಆಘಾತ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 306 ಗಳನ್ನು ಗಳಿಸಿದರೂ ಅದನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ.
ಟಾಮ್ ಲಥಮ್ (ಅಜೇಯ 145) ಭರ್ಜರಿ ಶತಕ ಮತ್ತು ನಾಯಕ ಕೇನ್ ವಿಲಿಯಮ್ಸನ್ (ಅಜೇಯ 94) ಜವಾಬ್ದಾರಿಯುತ ಇನ್ನಿಂಗ್ಸ್ ನೆರವಿನಿಂದ ನ್ಯೂಜಿಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಅ. 23 ನನಗೆ ಯಾವಾಗಲೂ ವಿಶೇಷ: ಟಿ20 ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧದ ಪಂದ್ಯ ನೆನಪಿಸಿಕೊಂಡ ಕೊಹ್ಲಿ

347 ರನ್ ಗಳಿಸಿಯೂ ಸೋತಿತ್ತು ಟೀಂ ಇಂಡಿಯಾ
2020ರಲ್ಲಿ ಭಾರತ ಹ್ಯಾಮಿಲ್ಟನ್‌ನಲ್ಲಿ ಕೊನೆಯ ಏಕದಿನ ಪಂದ್ಯವನ್ನಾಡಿತ್ತು. 50 ಓವರ್ ಗಳಲ್ಲಿ 4 ವಿಕೆಟ್‌ಗೆ 347 ರನ್ ಗಳಿಸಿದ್ದರೂ ಆ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು. ನ್ಯೂಜಿಲೆಂಡ್ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸುಲಭವಾಗಿ ಬೆನ್ನತ್ತಿತ್ತು.
ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಕೂಡ ಭಾರತ 300ಕ್ಕಿಂತ ಹೆಚ್ಚು ರನ್ ಗಳಿಸಿ ಸೋಲನುಭವಿಸಿದೆ. ಮೊದಲನೇ ಪಂದ್ಯದಲ್ಲಿ ಭಾರತಕ್ಕೆ ಬೌಲಿಂಗ್ ಪ್ರಮುಖ ಸಮಸ್ಯೆಯಾಗಿದೆ. ಎರಡನೇ ಪಂದ್ಯದಲ್ಲಿ ಹೆಚ್ಚುವರಿ ಬೌಲರ್ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶವಿದೆ.
ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿಡಬೇಕಾದರೆ ಎರಡನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ನ್ಯೂಜಿಲೆಂಡ್ ಹ್ಯಾಮಿಲ್ಟನ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿದೆ. ಇಲ್ಲಿ ಆಡಿರುವ 32 ಪಂದ್ಯಗಳಲ್ಲಿ ನ್ಯೂಜಿಲೆಂಡ್ 23 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತ ಹ್ಯಾಮಿಲ್ಟನ್‌ನಲ್ಲಿ ಗೆಲುವು ಸಾಧಿಸಬೇಕಾದರೆ, ತನ್ನ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್